Karnataka Rains: ವಾಯುಭಾರ ಕುಸಿತ ಪರಿಣಾಮ: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ! Imd Weather Report

Karnataka Rains: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದೆ. ಇದರ ಬೆನ್ನಲ್ಲೇ ವಾಯುಭಾರ ಕುಸಿತವೂ ಉಂಟಾಗಿದ್ದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇನ್ನೊಂದು ವಾರ ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಐಎಂಡಿ ಹೇಳಿದೆ. ಬೆಂಗಳೂರು ಸೇರಿದಂತೆ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಹವಾಮಾನ ವರದಿ ಹೇಗಿದೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.

ನೈಋತ್ಯ ಮಾನ್ಸೂನ್ ಕೇರಳ ಪ್ರವೇಶಿಸಿದೆ. ಸಾಮಾನ್ಯವಾಗಿ ಜೂನ್‌ ಮೊದಲ ವಾರದಲ್ಲಿ ನೈಋತ್ಯ ಮಾನ್ಸೂನ್ ಪ್ರವೇಶವಾಗುತ್ತಿತ್ತು. ಇದೀಗ ಒಂದು ವಾರ ಮುಂಚಿತವಾಗಿಯೇ ನೈಋತ್ಯ ಮಾನ್ಸೂನ್ ಪ್ರವೇಶವಾಗಿದ್ದು. ಕರ್ನಾಟಕಕ್ಕೂ ಶೀಘ್ರ ಪ್ರವೇಶಿಸಲಿದೆ. ಇದರ ನಡುವೆ ಹವಾಮಾನ ವೈಪರೀತ್ಯವಾಗಿದ್ದು. ರಾಜ್ಯದಾದ್ಯಂತ ಭಾರೀ ಮಳೆಯಾಗುತ್ತಿದೆ. ನೈಋತ್ಯ ಮಾನ್ಸೂನ್ ದಕ್ಷಿಣ ಅರೇಬಿಯನ್ ಸಮುದ್ರದ ಭಾಗ, ಪಶ್ಚಿಮ-ಮಧ್ಯ ಮತ್ತು ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಸಂಪೂರ್ಣ ಲಕ್ಷದ್ವೀಪ ಪ್ರದೇಶ, ಕೇರಳ ಹಾಗೂ ಕರ್ನಾಟಕದ ಕೆಲವು ಭಾಗಗಳಿಗೆ ಎಂಟ್ರಿ ಕೊಡುತ್ತಿದೆ.

low pressure in bay of bengal Heavy rain in Karnataka Rains including Bengaluru imd weather report

ಮುಂದಿನ 2-3 ದಿನಗಳಲ್ಲಿ ನೈಋತ್ಯ ಮಾನ್ಸೂನ್ ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಗೋವಾ, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಪಶ್ಚಿಮ ಮಧ್ಯ ಮತ್ತು ಉತ್ತರ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ಈಶಾನ್ಯ ರಾಜ್ಯಗಳ ಕೆಲವು ಪ್ರದೇಶಗಳಿಗೆ ಭರ್ಜರಿ ಎಂಟ್ರಿ ಕೊಡಲಿದೆ. ಇನ್ನು ಈಗ ವಾಯುಭಾರ ಕುಸಿತ ಉಂಟಾಗಿರುವುದರ ಜೊತೆಗೆ ಮೇ 27ರ ಸುಮಾರಿಗೆ ಪಶ್ಚಿಮ-ಮಧ್ಯ ಮತ್ತು ಪಕ್ಕದ ಉತ್ತರ ಬಂಗಾಳ ಕೊಲ್ಲಿಯ ಮೇಲೆ ಕಡಿಮೆ ಒತ್ತಡದ ಪ್ರದೇಶ ರೂಪಗೊಳ್ಳುವ (ವಾಯುಭಾರ ಕುಸಿತ) ಸಾಧ್ಯತೆ ಇದ್ದು, ರಾಜ್ಯದಲ್ಲೂ ಭಾರೀ ಮಳೆ ಆಗಲಿದೆ ಎಂದು ಹೇಳಲಾಗಿದೆ.

ಇನ್ನು ಮೇ 23ರಿಂದ ಮೇ 30ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ರಣಭೀಕರ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಯಾವ ದಿನ ಯಾವ ಭಾಗದಲ್ಲಿ ಮಳೆ ಆಗಲಿದೆ ಎನ್ನುವುದನ್ನು ನೋಡೋಣ.

ಮೇ 25 ಈ ಭಾಗದಲ್ಲಿ ಮಳೆ: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಮೈಸೂರು, ಕೊಡಗು, ಚಿಕ್ಕಮಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ರಾಮನಗರ ಜಿಲ್ಲೆಗಳಲ್ಲಿ ಎರಡು ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಬಳ್ಳಾರಿ, ಬೆಂಗಳೂರು (ಗ್ರಾಮೀಣ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ (ಗಂಟೆಗೆ 40-50 ಕಿ.ಮೀ) ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಲ್ಲಿ ಧಾರಾಕಾರ ಮಳೆ ಆಗಲಿದೆ. ಗಾಳಿಯ ವೇಗವು ಈ ಭಾಗದಲ್ಲಿ 40-50 ಕಿ.ಮೀ ವೇಗದಲ್ಲಿ ಇರಲಿದೆ. ಬೀದರ್, ಕಲಬುರ್ಗಿ, ವಿಜಯಪುರ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಮುಂದುವರಿಯಲಿದೆ.

ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಹಗುರ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ. ಈ ಭಾಗದಲ್ಲಿ ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+