ಗೊಂದಲ ಬೇಡ; ಅಡುಗೆ ಅನಿಲ ಆಧಾರ್ ಇ-ಕೆವೈಸಿ ಕುರಿತು ಸ್ಪಷ್ಟನೆಗಳು
ಬೆಂಗಳೂರು, ಡಿಸೆಂಬರ್ 29; ಬ್ಯಾಂಕ್ ಗ್ರಾಹಕರ ಮಾದರಿಯಲ್ಲಿ ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಬೇಕಿದೆ. ಇದಕ್ಕೆ ಅಂತಿಮ ದಿನಾಂಕ ನಿಗದಿ ಮಾಡಲಾಗಿದೆ ಎಂಬ ಸುದ್ದಿಗಳು ಹಬ್ಬಿದ್ದು, ಜನರಲ್ಲಿ ಗೊಂದಲ ಮೂಡಿಸಿದೆ.
ಆದ್ದರಿಂದ ಸ್ಪಷ್ಟನೆಯನ್ನು ನೀಡಲಾಗಿದೆ. ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗದಿಪಡಿಸಿರುವುದಿಲ್ಲ ಎಂದು ತಿಳಿಸಲಾಗಿದೆ.

ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಆದ್ದರಿಂದ ಅನಾವಶ್ಯಕವಾಗಿ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ಜನರು ನಿಲ್ಲುವ ಅಗತ್ಯವಿರುವುದಿಲ್ಲ ಹಾಗೂ ಸಿಲಿಂಡರ್ ಮನೆಗೆ ಡೆಲಿವರಿ ಪಡೆಯುವ ವೇಳೆಯಲ್ಲಿ ಕೂಡ ಇ-ಕೆವೈಸಿ ಮಾಡಿಸಲು ಅವಕಾಶವಿರುತ್ತದೆ ಎಂದು ತಿಳಿಸಲಾಗಿದೆ.
ಅಲ್ಲದೇ ಹೆಲೋ ಬಿಪಿಸಿಎಲ್, ಇಂಡಿಯನ್ ಆಯ್ಲ್ ಒನ್ ಮತ್ತು ವಿಟ್ರನ್ ಹೆಚ್‍ಪಿ ಗ್ಯಾಸ್ ಈ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಸಹ ಇ-ಕೆವೈಸಿ ಮಾಡಿಸಬಹುದಾಗಿದೆ ಎಂದು ಆಹಾರ, ನಾಗರಿಕರ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆ ತಿಳಿಸಿದೆ.
ಏಕೆ ಇ-ಕೆವೈಸಿ ಅಗತ್ಯ?; ಬ್ಯಾಂಕ್ ಗ್ರಾಹಕರ ಮಾದರಿಯಲ್ಲಿ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ಸಹ ಇ-ಕೆವೈಸಿ ಮಾಡಿಸಬೇಕಿದೆ. ಒಬ್ಬರು ಒಂದಕ್ಕಿಂತ ಹೆಚ್ಚು ಅಡುಗೆ ಅನಿಲ ಸಂಪರ್ಕ ಹೊಂದಿದ್ದರೆ ಅದನ್ನು ಪತ್ತೆ ಹಚ್ಚುವ ಸಲುವಾಗಿ ಗ್ಯಾಸ್ ಏಜೆನ್ಸಿಗಳು ಇ-ಕೆವೈಸಿ ಮಾಡಿಸಬೇಕು ಎಂದು ಹೇಳಿವೆ.
ಗೃಹ ಬಳಕೆ ಸಿಲಿಂಡರ್‌ಗಳ ದುರ್ಬಳಕೆ ತಡೆಯಲು ತೈಲ ಕಂಪನಿಗಳು ಏಜೆನ್ಸಿಗಳಿಗೆ ಗ್ರಾಹಕರ ಇ-ಕೆವೈಸಿ ಮಾಡಿಸಲು ಸೂಚನೆ ನೀಡಿವೆ. ಆದರೆ ಇದಕ್ಕೆ ಅಂತಿಮ ದಿನಾಂಕ ನಿಗದಿಗೊಳಿಸಿಲ್ಲ. ಅಂತಿಮ ದಿನಾಂಕ ನಿಗದಿ ಮಾಡಲಾಗಿದೆ ಎಂಬ ವದಂತಿ ಹಿನ್ನಲೆಯಲ್ಲಿ ಜನರು ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲುತ್ತಿದ್ದಾರೆ.
ಒಂದು ವೇಳೆ ಒಟಿಪಿ ಮೂಲಕ ಇ-ಕೆವೈಸಿ ಮಾಡಿದರೆ ನಿಜವಾದ ಗ್ರಾಹಕರು ಯಾರಿದ್ದಾರೆ? ಎಂಬುದನ್ನು ಪತ್ತೆ ಹಚ್ಚುವುದು ಕಷ್ಟ. ಆದ್ದರಿಂದ ಆಧಾರ್ ಮೂಲಕ ಈ ಪ್ರಕ್ರಿಯೆಯನ್ನು ಮಾಡಲಾಗುತ್ತಿದೆ. ಇ-ಕೆವೈಸಿ ಮಾಡಿಸದಿದ್ದರೆ ಸಿಲಿಂಡರ್ ಸಂಪರ್ಕ ಸಿಗುವುದಿಲ್ಲ ಎಂದು ಆತಂಕಗೊಂಡ ಜನರ ಎಲ್ಲಾ ಕೆಲಸ ಬಿಟ್ಟು ಏಜೆನ್ಸಿಗಳಿಗೆ ಆಗಮಿಸುತ್ತಾರೆ.
ಗ್ರಾಹಕರ ಬೆರಳ ಗುರುತು, ಮುಖ ಚಹರೆಯನ್ನು ಮಾತ್ರ ಪರಿಗಣಿಸಿ ಇ-ಕೆವೈಸಿ ಮಾಡಿಸಬೇಕು ಎಂದು ತೈಲ ಕಂಪನಿಗಳು ಏಜೆನ್ಸಿಗಳಿಗೆ ಸೂಚನೆ ನೀಡಿವೆ. ಎರಡು ವಾರದ ಹಿಂದೆ ಈ ಆದೇಶ ಹೊರಡಿಸಲಾಗಿದೆ. ಈ ವರ್ಷದ ಅಂತ್ಯದೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂಬ ಸುದ್ದಿ ಹಬ್ಬಿದ್ದು, ಜನರ ಗೊಂದಲಕ್ಕೆ ಕಾರಣ ಕಾರಣವಾಗಿದೆ.
ವಾಣಿಜ್ಯ ಸಿಲಿಂಡರ್‌ಗಿಂತ ಗೃಹ ಬಳಕೆ ಸಿಲಿಂಡರ್‌ಗಳ ಬೆಲೆಗಳು ಕಡಿಮೆ. ಸಾಕಷ್ಟು ಜನರು ಒಂದಕ್ಕಿಂತ ಹೆಚ್ಚು ಸಂಪರ್ಕವನ್ನು ಪಡೆದುಕೊಂಡು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿದ್ದಾರೆ ಎಂಬುದು ಆರೋಪವಾಗಿದೆ. ಇದರಿಂದಾಗಿ ನಷ್ಟ ಅನುಭವಿಸುತ್ತಿರುವ ತೈಲ ಕಂಪನಿಗಳು, ನಿಜವಾದ ಗ್ರಾಹಕರನ್ನು ಪತ್ತೆ ಹಚ್ಚಲು ಇ-ಕೆವೈಸಿ ಮಾಡಿಸುತ್ತಿವೆ.
ಹೀಗೆ ಮಾಡಿದರೆ ಅರ್ಹರಿಗೆ ಸಬ್ಸಿಡಿ ದರದಲ್ಲಿ ಸರಿಯಾಗಿ ಸಿಲಿಂಡರ್ ವಿತರಣೆಯಾಗಲಿದೆ. ಅಲ್ಲದೇ ತೈಲ ಕಂಪನಿಗಳ ಮೇಲಿನ ಹೊರೆ ಸಹ ಕಡಿಮೆಯಾಗಲಿದೆ ಎಂಬುದು ಲೆಕ್ಕಾಚಾರವಾಗಿದೆ. ಆದರೆ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ನಿಗದಿ ಮಾಡಿಲ್ಲ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications