ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಪ್ರಿಲ್ 18, 23 ರಂದು ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಣೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 09: ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 18 ಮತ್ತು 23 ರಂದು ಮತದಾನ ನಡೆಯಲಿರುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನೋಂದಾಯಿತರಾದ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜಾ ಘೋಷಣೆ ಮಾಡಲಾಗಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಕಾರ್ಮಿಕರಿಗೆ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ 3-ಎ ಪ್ರಕಾರ ಮತ ಚಲಾಯಿಸಲು ಅವಕಾಶ ಮಾಡಿ ಕೊಡಬೇಕಾಗುತ್ತದೆ. ಆದ್ದರಿಂದ ಮತದಾನ ನಡೆಯಲಿರುವ ಆಯಾ ಕ್ಷೇತ್ರಗಳಲ್ಲಿ ಅರ್ಹರಿಗುವ ಎಲ್ಲಾ ಕಾರ್ಮಿಕ ಮತದಾರರಿಗೆ ದಿನಾಂಕ: 18-04-2019 ಮತ್ತು 23-04-2019 ರಂದು ವೇತನ ಸಹಿತ ರಜೆ ನೀಡಿ, ಕಾರ್ಮಿಕರು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಲು ಅವಕಾಶ ಮಾಡಿಕೊಡಲಾಗುತ್ತಿದೆ.

LS polls: Public holiday to labourers in Karnataka on April 18, 23

ಚುನಾವಣೆ ಸಮಯ ಸಾಲುಸಾಲು ರಜಾ : ಮತ ಹಾಕದೆ ಮಾಡಬೇಡಿ ಮಜಾಚುನಾವಣೆ ಸಮಯ ಸಾಲುಸಾಲು ರಜಾ : ಮತ ಹಾಕದೆ ಮಾಡಬೇಡಿ ಮಜಾ

ಈ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಸಂವಿಧಾನಾತ್ಮಕ/ಶಾಸನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ರಜೆ ನೀಡದೆ ಹಾಗೂ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ದ 1963 ರ ಕರ್ನಾಟಕ ಔದ್ಯೋಗಿಕ ಸಂಸ್ಥೆಗಳ (ರಾಷ್ಟ್ರೀಯ ಹಾಗೂ ಹಬ್ಬದ ರಜಾ ದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951 ರ ಪ್ರಜಾಪ್ರಾತಿನಿಧ್ಯ ಕಾಯ್ದೆಯ ಕಲಂ 135(ಬಿ) ಉಲ್ಲಂಘನೆಗಳಿಗಾಗಿ ಕಾನೂನು ರೀತ್ಯಾ ಜರುಗಿಸಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೃಪೆ: ಕರ್ನಾಟಕ ವಾರ್ತೆ)

English summary
Lok Sabha elections 2019: Karnataka labour department announced April 18th and 23rd as public holiday to the voters of the perticular constituency. LS polls: Public holiday to laborers in Karnataka on April 18, 23
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X