'ಫಲಿತಾಂಶ ನಂತರ ಸ್ಪೀಕರ್ ಕಾಗೋಡು ಪದಚ್ಯುತಿ'
ಸಾಗರ, ಮೇ 13: ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಒಂದಷ್ಟು ಅಲ್ಲೋಲಕಲ್ಲೋಲಗಳು ನಡೆಯುವುದು ನಿಶ್ಚಿತವೆನ್ನುತ್ತಾರೆ ರಾಜಕೀಯ ಪಂಡಿತರು. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಪಟ್ಟಂತೆ ಒಂದಷ್ಟು ಸಚಿವರು ಸ್ಥಾನ ವಂಚಿತರಾಗುತ್ತಾರೆ ಎಂಬ ಮಾತುಗಳು ಹಿಂದಿನಿಂದಲೂ ಕೇಳಿಬರುತ್ತಿದೆ.
ಆದರೆ ಬಿಜೆಪಿಯ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕಸಭಾ ಚುನಾವಣೆ ಫಲಿತಾಂಶಕ್ಕಾಗಿಯೇ ಕಾಯುತ್ತಿದ್ದು, ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಪದಚ್ಯುತಿಗೆ ರಣವೀಳ್ಯ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಸ್ವತಃ ಬೇಳೂರು ಗೋಪಾಲಕೃಷ್ಣ ಅವರೇ ಸೋಮವಾರ ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಸೋದರ ಮಾವನ ವಿರುದ್ಧ ಈ ಮಾಹಿತಿ ನೀಡಿದ್ದಾರೆ.

ಲೋಕಸಭಾ ಚುನಾವಣೆ ಫಲಿತಾಂಶ ಬರುತ್ತಿದ್ದಂತೆ ಸಾಮಾಜಿಕ ಹೋರಾಟಗಾರ ಎಸ್‌ಆರ್ ಹಿರೇಮಠ ಅವರನ್ನು ಜತೆಗೆ ಕರೆದುಕೊಂಡು ಹೋಗಿ ರಾಜ್ಯಪಾಲರನ್ನು ಭೇಟಿ ಮಾಡಿ ಕಾಗೋಡು ತಿಮ್ಮಪ್ಪರನ್ನು ಸ್ಪೀಕರ್ ಸ್ಥಾನದಿಂದ ಕೆಳಗಿಳಿಸುವಂತೆ ಮನವಿ ಮಾಡುತ್ತಾರಂತೆ.
ಯಾಕೆ ತಿಮ್ಮಪ್ಪ (ಅಂದರೆ ಬೇಳೂರು ಗೋಪಾಲಕೃಷ್ಣ ಅವರ ಮಾವ) ಅವರು ಅಂಥಾ ತಪ್ಪೇನು ಮಾಡಿದ್ದಾರೆ ಎಂದು ಕೇಳಿದ್ದಕ್ಕೆ ಅವರ ವಿರುದ್ಧ 21 ಚೆಕ್ ಬೌನ್ಸ್ ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇವೆಯೆಂದು ಬೇಳೂರು ನುಡಿದಿದ್ದಾರೆ.
ಹಾಗಾಗಿ, ಅವರು ಸ್ಪೀಕರ್ ಸ್ಥಾನದಂತಹ ಮೌಲ್ಯಯುತ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುವುದು ತರವಲ್ಲ. ತಗೀರಿ ರಾಜ್ಯಪಾಲರೇ ಎಂದು ಮನವಿ ಮಾಡುತ್ತಾರಂತೆ. ಈ ಸಂಬಂಧ ಈಗಾಗಲೇ ಸಾಮಾಜಿಕ ಹೋರಾಟಗಾರ ಹಿರೇಮಠನ್ನು ಭೇಟಿ ಮಾಡಿದ್ದು, ಅವರ ಕೈಗೆ ದಾಖಲೆಗಳನ್ನು ಒಪ್ಪಿಸಿ, ಓಕೆ ಅನಿಸಿಕೊಮಡಿದ್ದಾರಂತೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications