ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿರಿಯ ಪತ್ರಕರ್ತ ಎಂ.ಬಿ.ಸಿಂಗ್ ದೇಹ ಆಸ್ಪತ್ರೆಗೆ ದಾನ

ಪ್ರಜಾವಾಣಿ, ಸುಧಾ ಹಾಗೂ ಮಯೂರ ಪತ್ರಿಕೆಗಳ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಎಂ.ಬಿ.ಸಿಂಗ್ ಕಡೆಯ ಇಚ್ಛೆಯನುಸಾರವಾಗಿ ಅವರ ಮೃತದೇಹವನ್ನು ಎಮ್.ಎಸ್ ರಾಮಯ್ಯ ಮೆಡಿಕಲ್ ಕಾಲೇಜ್ ಆಸ್ಟತ್ರೆಗೆ ದಾನ ಮಾಡಲಾಯಿತು.

By Ramesh
|
Google Oneindia Kannada News

ಬೆಂಗಳೂರು, ಅಕ್ಟೋಬರ್, 27: ಮಂಗಳವಾರ ರಾತ್ರಿ ಸಹಕಾರನಗರದಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದ ಹಿರಿಯ ಪತ್ರಕರ್ತ ಎಂ.ಬಿ.ಸಿಂಗ್ (91) ಅವರ ದೇಹವನ್ನು ಆಸ್ಪತ್ರೆಗೆ ದಾನ ಮಾಡಲಾಗಿದೆ.

ಹಿರಿಯ ಪತ್ರಕರ್ತ ಎಂ ಬಿ ಸಿಂಗ್ ಅವರ ಕಡೆಯ ಇಚ್ಛೆಯನುಸಾರವಾಗಿ ದೇಹವನ್ನು ನಗರದ ಎಮ್.ಎಸ್ ರಾಮಯ್ಯ ಮೆಡಿಕಲ್ ಕಾಲೇಜ್ ಆಸ್ಟತ್ರೆಗೆ ದಾನ ಮಾಡಲಾಯಿತು. ಇದಕ್ಕೂ ಮುನ್ನ ಸಿಂಗ್ ಅವರ ಪಾರ್ಥಿವ ಶರೀರವನ್ನು ಪೊಲೀಸ್ ಗೌರವದೊಂದಿಗೆ ಆಸ್ಪತ್ರೆಗೆ ರವಾನಿಸಲಾಯಿತು. [ಪ್ರಜಾವಾಣಿ ಪತ್ರಿಕೆಯ ಕಟ್ಟಾಳು ಎಂ.ಬಿ.ಸಿಂಗ್ ಕಣ್ಮರೆ]

M B Singh body will be donated to the M S Ramaiah Medical College Hospital

ಮಾಜಿ ಸಿ ಎಂ ಧರ್ಮಸಿಂಗ್ , ಪತ್ರಕರ್ತರಾದ ಪಿ ರಾಮಯ್ಯ, ಪದ್ಮರಾಜ್ ದಂಡಾವತಿ ಅರ್. ಪಿ ಜಗದೀಶ್ ಹಾಗೂ ಸಿಂಗ್ ಅವರ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಿದರು. [ಪತ್ರಿಕೋದ್ಯಮದ ಕಟ್ಟಾಳು ಎಂ.ಬಿ. ಸಿಂಗ್ ಅವರಿಗೆ ಅಭಿನಂದನೆ]

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಎನ್. ಅರ್. ವಿಶುಕುಮಾರ್ ಅವರು ಸರ್ಕಾರದ ಪರವಾಗಿ ಭಾಗವಹಿಸಿ ನಮನ ಸಲ್ಲಿಸಿದರು.

M B Singh body will be donated to the M S Ramaiah Medical College Hospital

ಕನ್ನಡ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಎಂ. ಬಿ. ಸಿಂಗ್ ಎಂದೇ ಜನಪ್ರಿಯರಾಗಿದ್ದ ಹಿರಿಯ ಪತ್ರಕರ್ತ ಮದನ್ ಭುವನ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಣ್ಣ ಮತ್ತು ಮಧ್ಯಮ ಪ್ರಮಾಣದ ಪತ್ರಿಕೆಗಳ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಪ್ರೋತ್ಸಾಹದಾಯಕ ವಾತಾವರಣವನ್ನು ಸೃಷ್ಠಿಸಿತ್ತು ಎಂಬುದು ಇದೀಗ ಇತಿಹಾಸ ಎಂದು ಸಿದ್ದರಾಮಯ್ಯ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

English summary
Former Editor of Kannada News Paper "Prajavani" M B Singh is surived by his daughter and two sons. According to his wish, his body will be donated to the M S Ramaiah Medical College Hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X