ನಿರೀಕ್ಷಣಾ ಜಾಮೀನಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರ್ಜಿ

40 ಲಕ್ಷ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ಪ್ರಶಾಂತ್ ಮಾಡಾಳ್‌ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿಯಾಗಿದ್ದಾರೆ.

ಬೆಂಗಳೂರು, ಮಾರ್ಚ್ 03; ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಮಾಡಾಳ್‌ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ಶಾಸಕರು ಆರೋಪಿ ನಂಬರ್ 1.

ಪುತ್ರನ ಲಂಚ ಪ್ರಕರಣ ಬೆಳಕಿಗೆ ಬಂದ ಬಳಿಕ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಆದರೆ ಅವರು ಎಲ್ಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

Maadal Virupakshappa Moved Court For Anticipatory Bail

ಈ ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮೊದಲ ಆರೋಪಿ ಎಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ. ಆದ್ದರಿಂದ ಬಂಧನದ ಭೀತಿ ಹಿನ್ನಲೆಯಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಶಾಸಕರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಹಾಕಿದರು. ನ್ಯಾಯಾಲಯ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ನ್ಯಾಯಾಧೀಶ ಬಿ. ಜಯಂತ್ ಕುಮಾರ್ ಮುಂದೆ ಅರ್ಜಿ ವಿಚಾರಣೆ ನಡೆಯಿತು. ಲೋಕಾಯುಕ್ತ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ಎಫ್‌ಐಆರ್ ಪ್ರತಿ ಸಲ್ಲಿಕೆ ಮಾಡಿದರು. ಇದನ್ನು ಒಪ್ಪಿದ ಕೋರ್ಟ್ ಪ್ರಕರಣದ ಸರಿಯಾದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿತು. ಆದರೆ ನಿರೀಕ್ಷಣಾ ಜಾಮೀನಿನ ಕುರಿತು ಯಾವುದೇ ಆದೇಶವನ್ನು ಹೊರಡಿಸಿಲ್ಲ.

lokayutha

8 ಕೋಟಿ ರೂ. ಹಣ ಪತ್ತೆ; ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಟೆಂಡರ್‌ ವಿಚಾರದಲ್ಲಿ ಪ್ರಶಾಂತ್ ಮಾಡಾಳ್ 80 ಲಕ್ಷ ರೂ. ಲಂಚ ಕೇಳಿದ್ದರು ಎಂಬುದು ಆರೋಪ. ಗುರುವಾರ 40 ಲಕ್ಷ ರೂ. ಹಣ ನೀಡಲು ಗುತ್ತಿಗೆದಾರರ ಪರವಾಗಿ ನಿಕಲೋಸ್, ಗಂಗಾಧರ್ ಬಂದಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ಬೆಂಗಳೂರಿನ ಕ್ರೆಸೆಂಟ್ ರಸ್ತೆಯ ಶಾಸಕರ ಖಾಸಗಿ ಕಚೇರಿಯಲ್ಲಿ ಈ ದಾಳಿ ನಡೆದಿತ್ತು. ಈ ದಾಳಿ ಬಳಿಕ ವಿಕಾಸಸೌಧದ ಶಾಸಕರ ಕಚೇರಿಗೆ ಸಹ ಬೀಗ ಜಡಿಯಲಾಗಿದೆ.

ಈ ದಾಳಿ ಬಳಿಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಹಿರಂಗವಾಗಿ ಕಾಣಿಸಿಕೊಂಡಿಲ್ಲ. ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆಯತೆ ಅವರು ಕೆಎಸ್‌ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಅಲ್ಲದೇ ಎಫ್‌ಆರ್‌ನಲ್ಲಿ ಮೊದಲ ಆರೋಪಿಯಾಗಿರುವ ಕಾರಣಕ್ಕೆ ನಿರೀಕ್ಷಣಾ ಜಾಮೀನು ಅರ್ಜಿಗಾಗಿ ಕೋರ್ಟ್‌ ಮೊರೆ ಹೋಗಿದ್ದಾರೆ. ಶಾಸಕರು ಎಲ್ಲಿದ್ದಾರೆ? ಎಂದು ಗುಪ್ತಚರ ಇಲಾಖೆ ಹುಡುಕಾಟ ಆರಂಭಿಸಿದೆ.

ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದಾಗ 40 ಲಕ್ಷ ಹಣವನ್ನು ಪ್ರಶಾಂತ್ ಬಳಿ ವಶಕ್ಕೆ ಪಡೆದಿದ್ದರು. ಬಳಿಕ ಅವರ ನಿವಾಸದ ಮೇಲೆ ದಾಳಿ ಮಾಡಿದಾಗ 6.10 ಕೋಟಿ ರೂ. ಹಣ ಪತ್ತೆಯಾಗಿತ್ತು. ಇದುವೆಗೂ 8 ಕೋಟಿ ರೂ. ಹಣವನ್ನು ಲೋಕಾಯುಕ್ತರು ವಶಕ್ಕೆ ಪಡೆದಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ. ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷ ಬಂಧನವಾಗಲಿದೆಯ? ಎಂದು ಕಾದು ನೋಡಬೇಕಿದೆ.

ಲೋಕಾಯುಕ್ತ ದಾಳಿ ವಿಚಾರ ರಾಜಕೀಯ ರೂಪ ಪಡೆದಿದೆ. ಪ್ರತಿಪಕ್ಷ ಕಾಂಗ್ರೆಸ್ ಚುನಾವಣಾ ಸಮಯದಲ್ಲಿ ಇದನ್ನು ಬಳಕೆ ಮಾಡಿಕೊಳ್ಳುತ್ತಿದೆ. ಶಾಸಕರನ್ನು ಬಂಧಿಸಬೇಕು ಎಂದು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+