Madal Virupakshappa : ಮಾಡಾಳ್ ವಿರೂಪಾಕ್ಷಪ್ಪ ನಾಟ್ ರೀಚೇಬಲ್
ಪ್ರಶಾಂತ್ ಮಾಡಾಳ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಬಳಿಕ ಕಳೆದೊಂದು ದಿನದಿಂದ ಅವರ ತಂದೆ ದಾವಣಗೆರೆ ಜಿಲ್ಲೆ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಟ್ ರೀಚೇಬಲ್ ಆಗಿದ್ದಾರೆ.
ಬೆಂಗಳೂರು, ಮಾರ್ಚ್ 03: ಪ್ರಶಾಂತ್ ಮಾಡಾಳ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಬಳಿಕ ಕಳೆದೊಂದು ದಿನದಿಂದ ಅವರ ತಂದೆ ದಾವಣಗೆರೆ ಜಿಲ್ಲೆ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಟ್ ರೀಚೇಬಲ್ ಆಗಿದ್ದಾರೆ.
ಹೌದು, ಪುತ್ರನ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದ ಬಳಿಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಲೋಕಾಯುಕ್ತ ಅಧಿಕಾರಿಗಳು ಅವರ ಮನೆ ಮೇಲೆ ದಾಳಿ ನಡೆಸಿದರೂ ವಿರೂಪಾಕ್ಷಪ್ಪ ಮೊಬೈಲ್‌ಗೂ ಸಿಕ್ಕಿಲ್ಲ. ಈಗಾಗಲೇ ಅಧಿಕಾರಿಗಳು ಅವರ ವಾಟ್ಸಪ್ ನಂಬರ್‌ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕಳುಹಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಆದರೆ, ಅಧಿಕಾರಿಗಳು ವಾಟ್ಸಪ್ ಮೂಲಕ ಕಳುಹಿಸಿದ್ದ ನೋಟಿಸ್ ಇದೂವರೆಗೂ ವಿರೂಪಾಕ್ಷಪ್ಪ ಅವರು ನೋಡಿಲ್ಲ ಎನ್ನಲಾಗಿದೆ. ವಿಚಾರಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ಅವರು ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆ. ಘಟನೆ ನಡೆದ ಬಳಿಕ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಬೇಕು ಅಂತಲೇ ಅವರು ತಲೆಮರೆಸಿಕೊಂಡಿದ್ದಾರೆ ಎಂಬ ಗುಮಾನಿ ಕೇಳಿ ಬಂದಿದೆ.
ಜಾಮೀನಿಗಾಗಿ ಶಾಸಕರ ಯತ್ನ?
ಲೋಕಾಯುಕ್ತ ಅಧಿಕಾರಿಗಳಿಗೆ ಕಾಣಿಸಿಕೊಳ್ಳದ ಮಾಡಾಳ್ ವಿರೂಪಾಕ್ಷಪ್ಪ ಅವರು ಜಾಮೀನು ಪಡೆಯಲು ವಕೀಲರನ್ನು ಸಂಪರ್ಕಿಸಿದ್ದಾರೆ. ಹೊರಗಿದ್ದುಕೊಂಡ ಜಾಮೀನು ಪಡೆಯಲು ಯತ್ನಿಸುತ್ತಿದ್ದಾರೆ ಎನ್ನಲಾಗಿದೆ.

ಮಾಡಾಳು ಪ್ರಶಾಂತ್ ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ನಾಯಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನಾಗಿದ್ದು, ವೃತ್ತಿಯಲ್ಲಿ ಬೆಂಗಳೂರು ಜಲಮಂಡಳಿಯ ಚೀಫ್ ಅಕೌಂಟೆಂಟ್ ಆಗಿದ್ದಾರೆ. ಅವರು (ಮಾಡಾಳು ಪ್ರಶಾಂತ್) ಬರೋಬ್ಬರಿ 80 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅದರಲ್ಲಿ ಗುರುವಾರ ಬರೋಬ್ಬರಿ 40 ಲಕ್ಷ ಹಣ ಪಡೆಯುವಾಗಿ ಲೋಕಾಯುಕ್ತ ಪೊಲೀಸರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಬಳಿಕ ಅಧಿಕಾರಿಗಳು ಶಾಸಕರ ಮನೆ ಮೇಲೂ ಶೋಧ ನಡೆಸಿದ್ದು, ಅಪಾರ ಪ್ರಮಾಣದ ನಗದು, ಜೊತೆಗೆ ಚಿನ್ನಾಭರಣ ಪತ್ತೆಯಾಗಿದೆ. ಪತ್ತೆಯಾದ ನಗದು ಪೈಕಿ ಸುಮಾರು ಏಳೂವರೆ ಲಕ್ಷಕ್ಕೂ ಅಧಿಕ ನಗದು ಸಿಕ್ಕಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಲೊಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದ ಹಣ/ಚಿನ್ನದ ಒಟ್ಟು ಮೌಲ್ಯದ ಬಗ್ಗೆ ಇನ್ನೂ ಖಚಿತಪಡಿಸಿಲ್ಲ. ಇಷ್ಟೇಲ್ಲ ನಡೆದರೂ ಶಾಸಕರು ಮಾತ್ರ ಪತ್ತೆಯಾಗಿಲ್ಲ. ವಾಟ್ಸಪ್ ಮೂಲಕ ಕಳುಹಿಸಿರುವ ನೋಟಿಸ್ ಸಹ ನೋಡಿಲ್ಲ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.












Click it and Unblock the Notifications