ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ಕುರಿತು ಸಿಎಂ ಹೇಳಿದ್ದೇನು?

ಕಾಂಗ್ರೆಸ್ ತನ್ನ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ. ಅವು ಕೂಡ ಮುಂದೆ ಬರಲಿದೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಚಿತ್ರದುರ್ಗ,ಮಾರ್ಚ್ 4 : ವಿಧಾನಸಭಾ ಚುನಾವಣೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿವೆ. ಈ ನಡುವೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪಅವರನ್ನ ಬಂಧಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಮಾಡಾಳ್ ವಿರೂಪಾಕ್ಷಪ್ಪ ಉಚ್ಛಾಟನೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ವರಿಷ್ಠರಿಂದ ತೀರ್ಮಾನವಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Madal Virupakshappa Resignation As MLA Will Be Decided By High Command Says Basavaraj Bommai

ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಪ್ರಕರಣದಲ್ಲಿ ಸರ್ಕಾರ ಬಹಳ ಸ್ಪಷ್ಟವಾಗಿದೆ. ಯಾರೇ ಇರಲಿ, ಇಂಥ ಪ್ರಕರಣದಲ್ಲಿ ಮುಕ್ತ ಅವಕಾಶ ಲೋಕಾಯುಕ್ತಕ್ಕೆ ನೀಡಿದ್ದೇವೆ. ಕಾನೂನು ತನ್ನ ಕೆಲಸ ಮಾಡುತ್ತಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ ಎಂದರು.

ಪ್ರತಿಪಕ್ಷ ದವರು ಸಿಎಂ ರಾಜೀನಾಮೆ ನೀಡಬೇಕೆಂದು ಪ್ರತಿಭಟನೆ ಮಾಡುತ್ತಿರುವ ಕುರಿತು ಮಾತನಾಡಿ, ಅವರಿಗೆ ಬೇರೇನೂ ಕೆಲಸವಿಲ್ಲವಲ್ಲ. ವಿಧಾನಸಭೆಯಲ್ಲಿ ಅವರ ಸಚಿವರ ಕಚೇರಿಯಲ್ಲಿಯೇ 2 ಲಕ್ಷ ಲಂಚ ಪಡೆದಿದ್ದರು. ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ. ಅಂದು ಲೋಕಾಯುಕ್ತ ಇದ್ದಿದ್ದರೆ ಬಂಧನವಾಗುತ್ತಿತ್ತು. ಇಂಥ ಪ್ರಕರಣ ಮುಚ್ಚಿ ಹಾಕುವ ಸಲುವಾಗಿ ಲೋಕಾಯುಕ್ತವನ್ನು ಅತ್ಯಂತ ದುರ್ಬಲಗೊಳಿಸಲಾಗಿತ್ತು ಎಂದರು.

Madal Virupakshappa Resignation As MLA Will Be Decided By High Command Says Basavaraj Bommai

ಈ ಪ್ರಕರಣದಲ್ಲಿ ತನಿಖೆ ನಿಷ್ಪಕ್ಷಪಾತ ವಾಗಿ ಮಾಡುತ್ತಿದ್ದೇವೆ. ಪಕ್ಷಾತೀತವಾಗಿ ಭ್ರಷ್ಟಾಚಾರ ನಿಗ್ರಹ ಮಾಡುತ್ತಿದ್ದೇವೆ. ನಮಗೆ 59 ಪ್ರಕರಣ ಮುಚ್ಚಿಹಾಕಿರುವ ಕಾಂಗ್ರೆಸ್ ತನ್ನ ಪಾಪ ತೊಳೆದುಕೊಳ್ಳಲು ಸಾಧ್ಯವಿಲ್ಲ. ಅವು ಕೂಡ ಮುಂದೆ ಬರಲಿದೆ. ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಕಾಂಗ್ರೆಸ್ ತನ್ನ ಪಾಪ ತೊಳೆದುಕೊಳ್ಳಲು ರಾಜೀನಾಮೆ ಬೇಡಿಕೆ ಸಲ್ಲಿಸುತ್ತಿದೆ. ತಮ್ಮ ಎಲೆಯಲ್ಲಿ ಬಿದ್ದಿರುವ ಕತ್ತೆಯನ್ನು ನೋಡಿಕೊಳ್ಳಲಿ. ಎಷ್ಟು ಸಾರಿ ಅವರು ರಾಜೀನಾಮೆ ನೀಡಬೇಕಿತ್ತು ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊಲೆಗಡುಕರ ಸರ್ಕಾರ ಕಿತ್ತು ಒಗೆಯಬೇಕೆಂಬ ಕಾಂಗ್ರೆಸ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅತಿ ಹೆಚ್ಚು ಕೊಲೆಗಳಾಗಿದ್ದು, ಸಿದ್ದರಾಮಯ್ಯ ಕಾಲದಲ್ಲಿ, ಧರ್ಮ, ಜಾತಿಯ ಹೆಸರಿನಲ್ಲಿ ಎಷ್ಟು ಕೊಲೆಗಳಾದವು. ಪಿಎಫ್ಐ, ಎಸ್.ಡಿ.ಪಿ ಐ ಕೊಲೆ ಪ್ರಕರಣ ಗಳನ್ನು ಹಿಂಪಡೆದಿದ್ದರೆ. ಅವರಿಗೆ ಯಾವ ನೈತಿಕತೆ ಇದೆ. ಎಲ್ಲಾ ರಂಗದಲ್ಲಿ ಅತ್ಯಂತ ಕೀಳು ಮಟ್ಟದ ರಾಜಕಾರಣವನ್ನು ಕಾಂಗ್ರೆಸ್ ಮಾಡಿದೆ. ಎಷ್ಟು ಸರಣಿ ಕೊಲೆಗಳಾಗಿವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+