Breaking; ಕಾಂಗ್ರೆಸ್ ಸೇರಿದ್ದ ಮಧು ಬಂಗಾರಪ್ಪಗೆ ಹುದ್ದೆ ನೀಡಿದ ಎಐಸಿಸಿ

ಬೆಂಗಳೂರು, ಸೆಪ್ಟೆಂಬರ್ 14: ಕಾಂಗ್ರೆಸ್ ಪಕ್ಷ ಸೇರಿದ್ದ ಮಾಜಿ ಶಾಸಕ ಮಧು ಬಂಗಾರಪ್ಪಗೆ ಎಐಸಿಸಿ ಹುದ್ದೆಯನ್ನು ನೀಡಿದೆ. ಒಬಿಸಿ ಘಟಕದ ಕಾರ್ಯಾಧ್ಯಕ್ಷರಾಗಿ ಅವರನ್ನು ನೇಮಕ ಮಾಡಲಾಗಿದೆ.

ಎಐಸಿಸಿ ಒಬಿಸಿ ಘಟದ ಅಧ್ಯಕ್ಷ ಕ್ಯಾಪ್ಟನ್ ಅಜಯ್ ಸಿಂಗ್ ಯಾದವ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಮಧು ಬಂಗಾರರನ್ನು ಕೆಪಿಸಿಸಿ ಒಬಿಸಿ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.

Madhu Bangarappa Appointed As KPCC OBC Cell Working President

23/6/2021ರಲ್ಲಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಂ. ಡಿ. ಲಕ್ಷ್ಮೀನಾರಾಯಣ ರಾಜೀನಾಮೆ ನೀಡಿದ್ದರು. ಬಳಿಕ ಹುದ್ದೆ ತೆರವಾಗಿತ್ತು. 2021ರ ಜುಲೈನಲ್ಲಿ ಕಾಂಗ್ರೆಸ್ ಸೇರಿದ್ದ ಮಧು ಬಂಗಾರಪ್ಪಗೆ ಸಹ ಎಐಸಿಸಿ ಯಾವುದೇ ಹುದ್ದೆ ನೀಡಿರಲಿಲ್ಲ.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ 2013ರಲ್ಲಿ ಸೊರಬ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಮೊದಲ ಬಾರಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಸೋಲು ಕಂಡಿದ್ದರು.

ಮಧು ಬಂಗಾರಪ್ಪ 2019ರ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. 506512 ಮತಗಳನ್ನು ಪಡೆದು ಬಿಜೆಪಿಯ ಬಿ. ವೈ. ರಾಘವೇಂದ್ರ ವಿರುದ್ಧ ಸೋಲುಕಂಡಿದ್ದರು. ಬಳಿಕ ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು.

ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದ ಮಧು ಬಂಗಾರಪ್ಪ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿಯಾಗಿದ್ದರು. ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದರು.

2021ರ ಜುಲೈನಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+