ಗಣತಿ ಕಾರ್ಯಗಳಿಗೆ ಶಿಕ್ಷಕರ ನಿಯೋಜನೆಗೆ ಬ್ರೇಕ್? ಸಂಪುಟದಲ್ಲಿ ಚರ್ಚಿಸಿ ನಿರ್ಧಾರ: ಮಧು ಬಂಗಾರಪ್ಪ

ಬೆಂಗಳೂರು: ಎಸ್‌ಐಆರ್, ಜನಗಣತಿ ಸೇರಿದಂತೆ ಸರ್ಕಾರದ ಇತರ ಕಾರ್ಯಗಳಿಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುವ ಕಾರಣ, ಶಿಕ್ಷಣದ ಗುಣಮಟ್ಟ, ಮಕ್ಕಳ ಕಲಿಕೆ ಮೇಲೆ ಪರಿಣಾಮ ಭೀರುತ್ತದೆ ಎಂಬ ಆರೋಪ ಮೊದಲಿಂದಲೂ ಇತ್ತು. ಇದೀಗ ಸಚಿವರ ಮಧು ಬಂಗಾರಪ್ಪ ಅವರು ಈ ಪದ್ಧತೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ವಿಷಯವಾರು ಬೆಂಗಳೂರಿನ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬೆಂಗಳೂರು ಉತ್ತರ ವಲಯದ ಸಂಪನ್ಮೂಲ ಶಿಕ್ಷಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

Madhu Bangarappa Promises Not to Deploy School Teachers for Census or External Duty at Exam Time

ಪರೀಕ್ಷಾ ಸಮಯದಲ್ಲಿ ಹೈಸ್ಕೂಲ್ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಜನಗಣತಿ ಇತ್ಯಾದಿ ಬಾಹ್ಯ ಕಾರ್ಯಗಳಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸುತ್ತೇನೆ ಭರವಸೆ ನೀಡಿದರು. ಒಂದು ವೇಳೆ ಅಂತಹ ಪರಿಸ್ಥಿತಿ ಎದುರಾದರೆ ಎಂತಹ ಹೋರಾಟಕ್ಕಾದರೂ ನಾನು ಸಿದ್ಧ. ನಿಮ್ಮೊಂದಿಗೆ ನಾನಿದ್ದೇನೆ, ನಾವೆಲ್ಲರೂ ಸೇರಿ ಹೋರಾಟ ಮಾಡೋಣ ಎಂದು ಹೇಳಿದರು.

ರೈತರ ಬೆಳೆ ವಿಮೆ ಪರಿಹಾರ ವಿತರಣೆ, ಪಾವತಿಯಲ್ಲಿ ಭಾರೀ ವ್ಯತ್ಯಾಸ: ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ
ರೈತರ ಬೆಳೆ ವಿಮೆ ಪರಿಹಾರ ವಿತರಣೆ, ಪಾವತಿಯಲ್ಲಿ ಭಾರೀ ವ್ಯತ್ಯಾಸ: ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ

ಮಕ್ಕಳ ವಾರ್ಷಿಕ ಪರೀಕ್ಷಾ ಸಮಯ ಹತ್ತಿರವಾಗುತ್ತಿದೆ. ಶಾಲೆ, ಕಾಲೇಜುಗಳಲ್ಲಿ ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಿ ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆಗೆ ಸಜ್ಜುಗೊಳಿಸಬೇಕಿದೆ. ಇದೆಲ್ಲ ಜವಾಬ್ದಾರಿಯು ಶಿಕ್ಷಕರ ಮೇಲಿದೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಇತರ ಕಾರ್ಯಗಳಿಗೆ ನಿಯೋಜಿಸುವುದು ಸರಿಯಲ್ಲ. ಮಕ್ಕಳ ಭವಿಷ್ಯವೇ ನಮಗೆ ಮುಖ್ಯ. ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಬೋಧನಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಶಿಕ್ಷಕರ ಸಾಮರ್ಥ್ಯದ ಮೇಲೆ ವಿಶ್ವಾಸ, 100% ಸಾಧನೆ

ಧಾರವಾಡದ ಐಐಟಿಯಲ್ಲಿ ಮಿಷನ್ 60+ ಕಾರ್ಯಕ್ರಮಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಮಿಷನ್ 70+ ಗುರಿಯೊಂದಿಗೆ ಕಾರ್ಯ ನಿರ್ವಹಿಸಬೇಕು. ನಮ್ಮ ಶಿಕ್ಷಕರ ಸಾಮರ್ಥ್ಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದ್ದು, ಈ ಗುರಿಯನ್ನು ಸಾಧಿಸುವ ಶಕ್ತಿ ಅವರಿಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು.

2027ರಲ್ಲಿ ದ್ವಿಭಾಷಾ ನೀಡಿ ಜಾರಿ

ಮಕ್ಕಳ ಭವಿಷ್ಯದ ದೃಷ್ಟಿಯಿಂದ ದ್ವಿಭಾಷಾ ನೀತಿಯು ಅತ್ಯಂತ ಮಹತ್ವದ್ದಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ (2027-28) ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಅನುಷ್ಠಾನಗೊಳಿಸಲಾಗುವುದು. ಮಕ್ಕಳು ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿಯೂ ಉತ್ತಮ ಜ್ಞಾನ ಹೊಂದಬೇಕು. ಕನ್ನಡ ಭಾಷೆಯ ಮೇಲಿನ ಹಿಡಿತದ ಜೊತೆಗೆ ಇಂಗ್ಲಿಷ್ ಕಲಿಕೆಯೂ ಅವರಿಗೆ ಭವಿಷ್ಯದಲ್ಲಿ ಹೆಚ್ಚಿನ ಅವಕಾಶ ಸೃಷ್ಟಿಸಲಿದೆ ಎಂದು ವಿವರಿಸಿದರು.

ಸಹೋದರಿ ಗೀತಾರ ಶಿಕ್ಷಣ ಉಲ್ಲೇಖಿಸಿದ ಸಚಿವರು

ಸಹೋದರಿ ಗೀತಾ ಶಿವರಾಜ್‌ಕುಮಾರ್ ಅವರ ಶಿಕ್ಷಣವನ್ನು ಉಲ್ಲೇಖಿಸಿದ ಸಚಿವರು, ಅವರು ಶಿವಮೊಗ್ಗದಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು, ಇದೇ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಅಧ್ಯಯನ ಮುಂದುವರಿಸಿದ್ದಾರೆ. ಬಳಿಕ ಇಂಗ್ಲಿಷ್ ಸಾಹಿತ್ಯದಲ್ಲಿ ಎಂ.ಎ. ಪದವಿಯನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಮನೆಯಲ್ಲಿ ಅವರು ಅತ್ಯುತ್ತಮವಾಗಿ ಇಂಗ್ಲಿಷ್ ಮಾತನಾಡುತ್ತಾರೆ. ಕನ್ನಡ ಮಾಧ್ಯಮದಲ್ಲಿ ಓದಿದರೂ ಇಂಗ್ಲಿಷ್ ಭಾಷೆಯಲ್ಲಿ ಪ್ರಾವೀಣ್ಯತೆ ಸಾಧಿಸಲು ಸಾಧ್ಯ ಎಂಬುದಕ್ಕೆ ಇದು ಉತ್ತಮ ಉದಾಹರಣೆ ಎಂದು ಸ್ಮರಿಸಿದರು.

2 ತಿಂಗಳಲ್ಲಿ 1,300 ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ! AI ಜತೆ ಸ್ಕಿಲ್, ಸಂಗೀತ, ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ
2 ತಿಂಗಳಲ್ಲಿ 1,300 ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ! AI ಜತೆ ಸ್ಕಿಲ್, ಸಂಗೀತ, ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ

ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ

ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದ್ದು, ಇದರಿಂದ ಹೆಚ್ಚುವರಿ ತರಗತಿಗಳನ್ನು ನಡೆಸಲು ಅನುಕೂಲವಾಗಿದೆ. ಕಳೆದ ಸಾಲಿನಲ್ಲಿಯೇ ಇದರ ಸಕಾರಾತ್ಮಕ ಫಲಿತಾಂಶವನ್ನು ನೋಡಿದ್ದೇವೆ. ಈ ಬಾರಿಯೂ ಉತ್ತಮ ಫಲಿತಾಂಶ ಸಾಧಿಸುವ ಮೂಲಕ ಶೇ.100ರಷ್ಟು ಫಲಿತಾಂಶದ ಗುರಿ ತಲುಪಬೇಕು. ಈ ಕಾರ್ಯಾಗಾರವು ಶಿಕ್ಷಕರ ಬೋಧನಾ ಸಾಮರ್ಥ್ಯ ವೃದ್ಧಿಸುವುದರ ಜೊತೆಗೆ ಮಕ್ಕಳ ಕಲಿಕೆಗೆ ಪೂರಕವಾಗಲಿ ಎಂದು ಆಶಿಸಿದರು.

ಶಿಕ್ಷಕರನ್ನು ಯಾವುದೇ ಸಂದರ್ಭದಲ್ಲಿಯೂ ಕೈಬಿಡುವ ಪ್ರಶ್ನೆಯೇ ಇಲ್ಲ. ಎಸ್‌ಐಆರ್ ವಿಚಾರವನ್ನು ನನಗೆ ಬಿಡಿ. ನೀವು ಮಕ್ಕಳಿಗೆ ಉತ್ತಮವಾಗಿ ಪಾಠ ಮಾಡುವತ್ತ ಗಮನಹರಿಸಿ. ಶಿಕ್ಷಣವೆಂಬುದು ಹಣ ಕೊಟ್ಟು ಖರೀದಿಸುವ ವಸ್ತುವಲ್ಲ. ಅದನ್ನು ನಿಜವಾದ ಅರ್ಥದಲ್ಲಿ ಶಿಕ್ಷಕರಿಂದಲೇ ಪಡೆಯಲು ಸಾಧ್ಯ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+