ದೇವಸ್ಥಾನದ ಗಂಟೆ ಹೊಡೆಯದಿದ್ದರೂ ಪರವಾಗಿಲ್ಲ, ಶಾಲೆ ಗಂಟೆ ಹೊಡೆದರೆ ಮಕ್ಕಳು ಉದ್ಧಾರವಾಗ್ತಾರೆ: ಮಧು ಬಂಗಾರಪ್ಪ

ಮಧು ಬಂಗಾರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು ಹೇಳಿದ್ದಾರೆ. ಮೈಸೂರಿನ ಕೆ.ಎಚ್.ಬಿ.ಐ. ಬಡಾವಣೆಯಲ್ಲಿ ಗುರುವಾರ ಜೆಎಸ್‌ಎಸ್ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ಹಾಗೂ ಶ್ರೀ ಘನಲಿಂಗ ಶಿವಯೋಗಿ ಸಭಾಭವನವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿ.ಟಿ ದೇವೇಗೌಡ ಅವರು ಮಧು ಬಂಗಾರಪ್ಪ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈ ಸಮಾರಂಭದಲ್ಲಿ "ದೇವಸ್ಥಾನದ ಗಂಟೆ ಹೊಡೆಯದಿದ್ದರೂ ಪರವಾಗಿಲ್ಲ, ಆದರೆ ಶಾಲೆಗಳ ಗಂಟೆ ಹೊಡೆದರೆ ಮಕ್ಕಳು ಉದ್ಧಾರವಾಗುತ್ತಾರೆ' ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯುವುದು ಅವಶ್ಯ. ಆದ್ದರಿಂದಲೇ ನಾನು ದೇವಸ್ಥಾನದ ಗಂಟೆ ಹೊಡೆಯದಿದ್ದರೂ ಪರವಾಗಿಲ್ಲ, ಆದರೆ ಶಾಲೆಗಳ ಗಂಟೆ ಹೊಡೆದರೆ ಮಕ್ಕಳು ಉದ್ಧಾರವಾಗುತ್ತಾರೆ, ದೇಶ ಉದ್ಧಾರವಾಗುತ್ತದೆ ಎಂದು ಹೇಳುತ್ತಲೇ ಇರುತ್ತೇನೆ. ಮಕ್ಕಳ ಕೆಲಸವೆಂದರೆ ದೇವರ ಕೆಲಸ ಎಂಬ ಕಾರಣಕ್ಕೇ ಮತ್ತೆ ಶಿಕ್ಷಣ ಇಲಾಖೆಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

Madhu Bangarappa Temple Bell or School Bell Education Can Transform Children and the Nation

ಸುಮಾರು ₹4.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪದವಿ ಪೂರ್ವ ಕಾಲೇಜು ಕಟ್ಟಡ ಮತ್ತು ಶ್ರೀ ಘನಲಿಂಗ ಶಿವಯೋಗಿ ಸಭಾಭವನವನ್ನು ಉದ್ಘಾಟಿಸಿರುವುದು ಸಂತಸ ತಂದಿದೆ. ಸೆಪ್ಟೆಂಬರ್ 7ರಂದು ಕಾರ್ಯಕ್ರಮ ನಿಗದಿಯಾಗಿತ್ತು. ಕಾರಣಾಂತರ ಗಳಿಂದ ಅಂದು ಬರಲು ಸಾಧ್ಯವಾಗಲಿಲ್ಲ. ಆದರೂ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ತಾವು ಬರುವವರೆಗೆ ಕಾದು, ತಮ್ಮ ಕೈಯಿಂದಲೇ ಉದ್ಘಾಟನೆ ಮಾಡಿಸಿದ್ದಾರೆ ಎಂದಿದ್ದಾರೆ.

ಮಧು ಬಂಗಾರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ: ಜಿ.ಟಿ. ದೇವೇಗೌಡ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಧು ಎಂದರೆ ಸಿಹಿ. ಅವರ ಮನಸ್ಸೂ ಸಿಹಿಯಾಗಿದೆ. ಅವರು ರಾಜಕೀಯದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದರು.

ಮೈಸೂರು ನಗರದ ಸರ್ಕಾರಿ ಶಾಲೆಗಳ ಸುಧಾರಣೆಗೆ ಸಚಿವರು ಹೆಚ್ಚಿನ ಆಸಕ್ತಿ ವಹಿಸಬೇಕು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮೈಸೂರಿನ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಅದೇ ರೀತಿಯಲ್ಲಿ ಮಧು ಬಂಗಾರಪ್ಪ ಅವರೂ ಮೈಸೂರಿನ ಅಭಿವೃದ್ಧಿ ಹಾಗೂ ಶಿಕ್ಷಣ ಕ್ಷೇತ್ರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು.

ಶಿಕ್ಷಣ ಸಚಿವನಾಗಿರುವುದಕ್ಕೆ ಹೆಮ್ಮೆ ಇದೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವನಾದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬೇರೆ ಖಾತೆ ಬೇಕೇ ಎಂದು ಕೇಳಿದ್ದರು. ಆದರೆ ತಾವು ಶಿಕ್ಷಣ ಇಲಾಖೆಯಲ್ಲಿಯೇ ಮುಂದುವರಿಯಲು ಬಯಸಿರುವುದಾಗಿ ತಿಳಿಸಿದ್ದೆ. ಶಿಕ್ಷಣ ಸಚಿವನಾಗಿರುವುದಕ್ಕೆ ಹೆಮ್ಮೆ ಇದೆ. ಶಿಕ್ಷಣ ಇಲಾಖೆಯಲ್ಲಿ ರಾಜ್ಯದ ಸರ್ಕಾರಿ ನೌಕರರ ಪೈಕಿ ಸುಮಾರು ಶೇ.38ರಷ್ಟು ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಅತ್ಯಂತ ದೊಡ್ಡ ಇಲಾಖೆಯಾಗಿದೆ ಎಂದರು.

ತಾನು ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸುಮಾರು 1.39 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಪರೀಕ್ಷಾ ಸುಧಾರಣೆ ಸೇರಿದಂತೆ ಕೈಗೊಂಡ ಕ್ರಮಗಳ ಪರಿಣಾಮವಾಗಿ ಇದೀಗ ಈ ಸಂಖ್ಯೆ 1.81 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಸಚಿವರು ತಿಳಿಸಿದರು.

ಶಿಕ್ಷಣ ಸಚಿವರು ಮೇಲ್ಮನೆಯಲ್ಲಿ ಸಾಕಷ್ಟು ಟೀಕೆಗೆ ಒಳಗಾಗುತ್ತಾರೆ. ಆದರೆ ತಾವು ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದು, ಯಾರೊಂದಿಗೂ ವಿರೋಧ ಕಟ್ಟಿಕೊಂಡಿಲ್ಲ ಎಂದು ಸಚಿವರು ಹೇಳಿದರು.

Kasturirangan Report: ರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ ಭರವಸೆ
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ವಹಿಸಿದ್ದರು. ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀರಂಗಪಟ್ಟಣದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಉಪಸ್ಥಿತರಿದ್ದರು. ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ ಅವರು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಸೇರಿದಂತೆ ಹಲವರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+