ಮಡಿಕೇರಿಯಲ್ಲಿ ನವೆಂಬರ್ 25ರ ತನಕ ನಿಷೇಧಾಜ್ಞೆ

ಮಡಿಕೇರಿ, ನವೆಂಬರ್ 18 : ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಡಿಕೇರಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟಂತೆ ಇದುವರೆಗೂ 64 ಜನರನ್ನು ಬಂಧಿಸಲಾಗಿದ್ದು, 35 ಜನರು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜಿಲ್ಲೆಯಲ್ಲಿದ್ದ ಜಾರಿಯಲ್ಲಿದ್ದ ಸೆಕ್ಷನ್ 144ಅನ್ನು ನವೆಂಬರ್ 25 ರ ತನಕ ವಿಸ್ತರಣೆ ಮಾಡಲಾಗಿದೆ.

ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಪ್ರಭಾರ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಎಸ್ಪಿ ವರ್ತಿಕಾ ಕಟಿಯಾರ್ ಅವರು, 'ಪ್ರತಿದಿನ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯವರೆಗೆ ನವೆಂಬರ್ 25ರ ವರೆಗೆ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ' ಎಂದರು. [ಮಡಿಕೇರಿ ಗಲಭೆ : ಇಬ್ಬರ ಬಂಧನ]

madikeri

ನಿಷೇಧಾಜ್ಞೆ ಜಾರಿಯಲ್ಲಿರುವ ಸಂದರ್ಭದಲ್ಲಿ ಸರ್ಕಾರದ ಕಾರ್ಯಕ್ರಮ ಹೊರತುಪಡಿಸಿ ಇನ್ನಿತರ ಯಾವುದೇ ಸಭೆ ಸಮಾರಂಭ, ಮೆರವಣಿಗೆಯನ್ನು ನಡೆಸಬಾರದು. 5 ಜನರಿಗಿಂತ ಮೇಲ್ಪಟ್ಟು ಗುಂಪು ಸೇರಬಾರದು. ಯಾವುದೇ ರೀತಿಯ ಆಯುಧಗಳನ್ನು ಹಿಡಿದು ತಿರುಗಾಡುವಂತಿಲ್ಲ. [ಮಡಿಕೇರಿ ಗಲಭೆ : ಮ್ಯಾಜಿಸ್ಟೇಟ್ ತನಿಖೆ]

ಯಾವುದೇ ಮಾರಕಾಯುಧಗಳನ್ನು ಹಾಗೂ ಕಲ್ಲು ಮತ್ತಿತರ ನಿರ್ಬಂಧಿತ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಯಾವುದೇ ವ್ಯಕ್ತಿ ಅಥವಾ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಹೇಳಿಕೆ ಅಥವಾ ಭಾಷಣ ಮಾಡುವಂತಿಲ್ಲ. [ಮಡಿಕೇರಿ ಗಲಭೆ : ಶಾಹುಲ್ ಸಾವು]

ಸ್ಥಳೀಯ ಸಂಸ್ಥೆಗಳು ಅಥವಾ ಸ್ಥಳೀಯ ಸಕ್ಷಮ ಪ್ರಾಧಿಕಾರಗಳು ಯಾವುದೇ ಸಭೆ ಸಮಾರಂಭಗಳಿಗೆ ಅನುಮತಿ ಕೋರಿ ಅರ್ಜಿಗಳು ಸ್ವೀಕೃತವಾದಲ್ಲಿ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಆರಕ್ಷಕ ಉಪ ನಿರೀಕ್ಷಕರಿಂದ ಕಡ್ಡಾಯವಾಗಿ ನಿರಕ್ಷೇಪಣಾ ಪತ್ರ ಪಡೆದು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಎಸ್ಪಿ ವರ್ತಿಕಾ ಕಟಿಯಾರ್ ಹೇಳಿದರು.

ಮೂರು ಜನ ಮೃತಪಟ್ಟಿದ್ದರು : ನವೆಂಬರ್ 10ರ ಮಂಗಳವಾರ ಟಿಪ್ಪು ಜಯಂತಿ ಆಚರಣೆ ವೇಳೆ ಮಡಿಕೇರಿಯಲ್ಲಿ ನಡೆದ ಗಲಭೆಯಲ್ಲಿ ಮೂವರು ಮೃತಪಟ್ಟಿದ್ದರು. ಗಲಭೆಯ ಕುರಿತು ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ ಅವರ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+