CM Siddaramaiah : ಮಧುರೈ ಮಕ್ಕಳ್ ಸಮುಗನೀತಿ ಪೆರವೈ ಸಂಸ್ಥೆಯ ಸದಸ್ಯರ ಭೇಟಿ
ಬೆಂಗಳೂರು, ಜೂನ್ 17: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ಹೆಚ್ಚುಕಮ್ಮಿ ಒಂದು ತಿಂಗಳು ಆಗುತ್ತಿರುವುದರಿಂದ, ವಿವಿಧ ಸಂಘಟನೆಗಳ ಸದಸ್ಯರು, ಪದಾಧಿಕಾರಿಗಳು, ಸಮಾಜ ಸೇವಕರು ಭೇಟಿಯಾಗಿ ಶುಭಾಶಯ ಕೋರುವುದು ಸಾಮಾನ್ಯ. ಹಾಗಾಗಿ, ಇಂದು ಸಿದ್ದರಾಮಯ್ಯನವರಿಗೆ ಬ್ಯೂಸಿ ಡೇ..
ತಮಿಳುನಾಡಿನ ಮಧುರೈ ಮಕ್ಕಳ್ ಸಮುಗನೀತಿ ಪೆರವೈ ಸಂಸ್ಥೆಯ ಸಂಘಟಕರಾದ ಆರ್. ಮನೋಹರನ್ ಅವರ ನೇತತ್ವದ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಸಂಸ್ಥೆಯ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಸರ್ಕಾರದ ಜನದ್ರೋಹಿ ನೀತಿಯಿಂದಾಗಿ ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸುವ ಸಂಬಂಧ ರಾಜ್ಯ ಆಹಾರ ಇಲಾಖೆ ಅಧಿಕಾರಿಗಳು ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿದರು. ಈ ವೇಳೆ ಆಹಾರ ಇಲಾಖೆಯ ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ, ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಂಗಳೂರು ತಾಲೂಕಿನ ಹರೇಕಳ ನ್ಯೂಪಡ್ಪುವಿನ ಸರ್ಕಾರಿ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜಿಗೆ ಮೇಲ್ದರ್ಜೆಗೇರಿಸಲು ಮನವಿ ಸಲ್ಲಿಸಿದರು.

ಧಾರವಾಡದ ಶ್ರೀ ಮುರುಘಾಮಠದ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದರು. ಈ ಸಂದರ್ಭದಲ್ಲಿ ಸವಣೂರು ದೊಡ್ಡ ಹುಣಸೆ ಕಲ್ಮಠದ ಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮೀಜಿ, ಹುಮ್ನಾಬಾದ್ ಹುಡುಗಿ ಗ್ರಾಮದ ಪೂಜ್ಯ ಶ್ರೀ ಚೆನ್ನಮಲ್ಲ ಸ್ವಾಮೀಜಿ, ವಿಜಯಪುರದ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶಾಸಕರುಗಳಾದ ವಿನಯ ಕುಲಕರ್ಣಿ, ಕೋನರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಇದರ ಜೊತೆಗೆ, ಸಿದ್ದರಾಮಯ್ಯನವರು ರಾಯಚೂರಿನಲ್ಲಿ ಏಮ್ಸ್ (All India Institute of Medical Sciences) ಸ್ಥಾಪಿಸುವಂತೆ ಒತ್ತಾಯಿಸಿ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯ ಅವರಿಗೆ ಪತ್ರವನ್ನು ಬರೆದರು.
ಇದಕ್ಕೂ ಮುನ್ನ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಬಹಳಷ್ಟು ಮಂದಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಕಾಯುತ್ತಿದ್ದರು.












Click it and Unblock the Notifications