ಮಾಗಡಿ ಶಾಸಕ ಬಾಲಕೃಷ್ಣ ಜೆಡಿಎಸ್ ನಿಂದ ಕಾಂಗ್ರೆಸ್ ಕಡೆಗೆ!

Posted By:
Subscribe to Oneindia Kannada

ರಾಮನಗರ, ಏಪ್ರಿಲ್ 16 : ಮಾಗಡಿ ಜೆಡಿಎಸ್ ಬಂಡಾಯ ಶಾಸಕ ಎಚ್ ಸಿ ಬಾಲಕೃಷ್ಣ ಅವರು ಕಾಂಗ್ರೆಸ್ ಗೆ ಸೇರಲು ಉತ್ಸುಕರಾಗಿದ್ದಾರೆ. ಈ ಬಗ್ಗೆ ಸ್ವತಃ ಬಾಲಕೃಷ್ಣ ಅವರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಕ್ಷೇತ್ರ ಬದಲಾವಣೆ ಮಾಡುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನೇನೂ ಕ್ಷೇತ್ರ ಬಲಾವಣೆ ಮಾಡೋಕೆ ದೇವೇಗೌಡ ಕುಟುಂಬದವನೇ, ಶಕ್ತಿ ಇದ್ದವನು ರಾಜಕೀಯದಲ್ಲಿ ಬೆಳೆಯುತ್ತಾನೆ ಎಂದು ಪರೋಕ್ಷವಾಗಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿದರು.

Magadi JDS MLA HC Balakrishna hints to join congress

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಹಾಕಿ ಜೆಡಿಎಸ್ ನಿಂದ ಅಮಾನತುಕೊಂಡಿದ್ದಾರೆ. ಮುಂದಿನ 2018ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸೇರುವ ಬಗ್ಗೆ ಆಸಕ್ತಿ ತೋರಿಸಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣ ಅವರು ಕಾಂಗ್ರೆಸ್‌ ಟಿಕೆಟ್‌ ಪಡೆದರೆ ನಾನು ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Rebel JDS MLA of Magadi constutuency HC Balakrishna hints to join congress in his press meet on Saturaday, April 15.
Please Wait while comments are loading...