ಮಹದಾಯಿ : ಡಿ.27ರಂದು ಉತ್ತರ ಕರ್ನಾಟಕ ಬಂದ್
ಬೆಂಗಳೂರು, ಡಿಸೆಂಬರ್ 26 : ಮಹದಾಯಿ ವಿವಾದ ಇತ್ಯರ್ಥಗೊಳಿಸಲು ವಿಫಲವಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿಲುವು ಖಂಡಿಸಿ ಡಿ.27ರಂದು ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಮಲಪ್ರಭಾ, ಮಹದಾಯಿ, ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಬಂದ್‌ಗೆ ಬೆಂಬಲ ನೀಡಬೇಕು ಎಂದು ಜನರಿಗೆ ಮನವಿ ಮಾಡಿದೆ. ಡಿ.27ರ ಬುಧವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ತನಕ ಬಂದ್ ನಡೆಯಲಿದೆ.

ಮಹದಾಯಿ ಅಚ್ಚುಕಟ್ಟು ಪ್ರದೇಶದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಸಂಪೂರ್ಣ ಬಂದ್ ಆಚರಣೆ ಮಾಡಲಾಗುತ್ತದೆ ಎಂದು ರೈತ ಮುಖಂಡರು ಹೇಳಿದ್ದಾರೆ.
ಬುಧವಾರ ಬಂದ್‌ನಿಂದ ಔಷಧಿ ಅಂಗಡಿ, ಆಸ್ಪತ್ರೆ, ಆಂಬ್ಯುಲೆನ್ಸ್ ಸೇವೆಗೆ ವಿನಾಯಿತಿ ನೀಡಲಾಗಿದೆ. ಧಾರವಾಡ ವಿವಿಯ ಕುಲಸಚಿವರಿಗೆ ಪರೀಕ್ಷೆಗಳನ್ನು ಮುಂದೂಡುವಂತೆ ಮನವಿ ಮಾಡಲಾಗಿದೆ ಎಂದು ರೈತ ಮುಖಂಡರು ಹೇಳಿದ್ದಾರೆ.
ಬೆಳಗ್ಗೆ 6 ಗಂಟೆಗೆ ಬಸ್ ಸಂಚಾರ ನಿಲ್ಲಿಸಲಾಗುತ್ತದೆ. ಅಂಗಡಿ, ಹೋಟೆಲ್ ವಾಣಿಜ್ಯ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.
ಪರೀಕ್ಷೆ ನಡೆಯಲಿದೆ : ಬುಧವಾರದ ಬಂದ್ ಕರೆಯ ಬಗ್ಗೆ ಗಮನ ನೀಡಬೇಡಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಎಲ್ಲಾ ಪರೀಕ್ಷೆಗಳು ಡಿ.27ರಂದು ಎಂದಿನಂತೆ ನಡೆಯಲಿವೆ ಎಂದು ವಿಶ್ವವಿದ್ಯಾಲಯ ಹೇಳಿದೆ.












Click it and Unblock the Notifications