ಮಹದಾಯಿ ವಿವಾದ : ಕಾಂಗ್ರೆಸ್ v/s ಬಿಜೆಪಿ
ಬೆಂಗಳೂರು, ಡಿಸೆಂಬರ್ 27 : ಮಹದಾಯಿ ಯೋಜನೆ ಜಾರಿ ವಿವಾದ ರಾಜಕೀಯ ರೂಪ ಪಡೆದುಕೊಂಡಿದೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿದ್ದಾರೆ.
ಮಲ್ಲೇಶ್ವರಂ ಬಿಜೆಪಿ ಕಚೇರಿ ಮುಂದೆ ರೈತರು 5 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಜೊತೆ ಬಿ.ಎಸ್.ಯಡಿಯೂರಪ್ಪ ನಡೆಸಿದ ಮಾತುಕತೆ ಮುರಿದುಬಿದ್ದಿದೆ. ಯಡಿಯೂರಪ್ಪ ಈಗ ಕಾಂಗ್ರೆಸ್ ನಾಯಕರ ಮೇಲೆ ಗೂಬೆ ಕೂರಿಸುತ್ತಿದ್ದಾರೆ.

ಬಿಜೆಪಿ ನಾಯಕರು ಬುಧವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. ಮಹದಾಯಿ ಯೋಜನೆ ಜಾರಿ ವಿಚಾರದಲ್ಲಿ ಕಾಂಗ್ರೆಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತದೆ.
ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಕೆಪಿಸಿಸಿ ಕಚೇರಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಬಿಜೆಪಿ ಪ್ರತಿಭಟನೆ ವಿರುದ್ಧವಾಗಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಚೇರಿಗೆ ಆಗಮಿಸಿದ್ದಾರೆ. ಪೊಲೀಸರು ಬ್ಯಾರಿಕೇಡ್ ಹಾಕಿ ಕಾರ್ಯಕರ್ತರ ನಡುವೆ ಘರ್ಷಣೆ ಆಗದಂತೆ ಕ್ರಮ ಕೈಗೊಂಡಿದ್ದಾರೆ.











Click it and Unblock the Notifications