ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದಾಯಿ ವಿವಾದ; ದೆಹಲಿಗೆ ರಮೇಶ್ ಜಾರಕಿಹೊಳಿ ಭೇಟಿ

|
Google Oneindia Kannada News

ಬೆಳಗಾವಿ, ಫೆಬ್ರವರಿ 23 : ಮಹದಾಯಿ ಯೋಜನೆ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಲು ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಲಿದ್ದಾರೆ.

"ತಕ್ಷಣ ಮಹದಾಯಿ ಯೋಜನೆ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸಚಿವರ ಜೊತೆ ಮಾತುಕತೆ ನಡೆಸಲು ಫೆಬ್ರವರಿ 26ರಂದು ನವದೆಹಲಿಗೆ ಹೋಗುತ್ತಿರುವೆ" ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಮಹದಾಯಿ; ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶನಮಹದಾಯಿ; ಅಧಿಸೂಚನೆ ಹೊರಡಿಸಲು ಸುಪ್ರೀಂ ನಿರ್ದೇಶನ

"ಮಹದಾಯಿ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಯೋಜನೆಗೆ ತಗಾದೆ ತೆಗೆಯುತ್ತಿರುವ ನೆರೆಯ ಗೋವಾ ರಾಜ್ಯ ಬೇಕಿದ್ದರೆ ನ್ಯಾಯಾಲಯಕ್ಕೆ ಹೋಗಲಿ" ಎಂದು ಜಲಸಂಪನ್ಮೂಲ ಸಚಿವರು ಹೇಳಿದರು.

ಮಹದಾಯಿ ವಿವಾದ: ಕೇಂದ್ರ ಸಚಿವರಿಗೆ ಸೆಡ್ಡು ಹೊಡೆದ ಗೋವಾ ಬಿಜೆಪಿ ಸಿಎಂಮಹದಾಯಿ ವಿವಾದ: ಕೇಂದ್ರ ಸಚಿವರಿಗೆ ಸೆಡ್ಡು ಹೊಡೆದ ಗೋವಾ ಬಿಜೆಪಿ ಸಿಎಂ

ಸುಪ್ರೀಂಕೋರ್ಟ್ ಮಹದಾಯಿ ಯೋಜನೆ ಕುರಿತು ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಹದಾಯಿ ಯೋಜನೆಯ ವಿವಾದದ ಬಗ್ಗೆ ಜುಲೈ 15ರಿಂದ ನಿರಂತರ ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ.

ಉ.ಕರ್ನಾಟಕ ಜನರಿಗೆ ಸಿಹಿ ಸುದ್ದಿ: ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಒಪ್ಪಿಗೆಉ.ಕರ್ನಾಟಕ ಜನರಿಗೆ ಸಿಹಿ ಸುದ್ದಿ: ಕಳಸಾ-ಬಂಡೂರಿ ಯೋಜನೆಗೆ ಕೇಂದ್ರ ಒಪ್ಪಿಗೆ

ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ

ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ

"ಮಹದಾಯಿ ಯೋಜನೆ ಅನುಷ್ಠಾನಕ್ಕೆ ಸುಮಾರು 200 ಕೋಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಹಣ ಬಿಡುಗಡೆಯಾದ ತಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು" ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ಶೀಘ್ರದಲ್ಲಿಯೇ ಭೇಟಿ

ಶೀಘ್ರದಲ್ಲಿಯೇ ಭೇಟಿ

"ಮಹದಾಯಿ ಉಗಮಸ್ಥಾನವಾಗಿರುವ ಖಾನಾಪುರದ ಕಣಕುಂಬಿಗೆ ಸದ್ಯದಲ್ಲಿಯೇ ಭೇಟಿ ನೀಡುತ್ತೇನೆ. ರಾಜ್ಯಕ್ಕೆ ಹಂಚಿಕೆಯಾಗಿರುವ ಕೃಷ್ಣಾ ನದಿ ನೀರನ್ನು ಬಳಸಲು ಯೋಜನೆ ರೂಪಿಸಲಾಗುತ್ತದೆ" ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ಮೂರು ರಾಜ್ಯಗಳ ನಡುವಿನ ವಿವಾದ

ಮೂರು ರಾಜ್ಯಗಳ ನಡುವಿನ ವಿವಾದ

ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ನಡುವೆ ವಿವಾದವಿದೆ. ಮೂರು ರಾಜ್ಯಗಳು ಯೋಜನೆ ಕುರಿತು ಸುಪ್ರೀಂಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿವೆ. ಅರ್ಜಿಯ ವಿಚಾರಣೆಯು ಜುಲೈ 15ರಿಂದ ನಿರಂತರವಾಗಿ ನಡೆಯಲಿದೆ.

ನಮಗೆ ಸಿಹಿ ಸುದ್ದಿ

ನಮಗೆ ಸಿಹಿ ಸುದ್ದಿ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಹೇಳಿಕೆ ನೀಡಿದ್ದು, "ಇದು ಸಿಹಿ ಸುದ್ದಿ, ನಮ್ಮ ಪಾಲಿನ 14.2 ಟಿಎಂಸಿ ನೀರು ಬಳಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದೆ" ಎಂದು ಹೇಳಿದ್ದಾರೆ.

English summary
Water resources minister of Karnataka Ramesh Jarkiholi will visit New Delhi to meet union ministers. Supreme Court directed union government to issue gazette notification for Mahadayi project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X