ಮಹದಾಯಿ ವಿವಾದ : ಮಹಾರಾಷ್ಟ್ರ, ಗೋವಾ ಸಿಎಂಗೆ ಸಿದ್ದು ಪತ್ರ

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 06 : ಮಹದಾಯಿ ನದಿ ನೀರಿನ ವಿವಾದದ ಬಗ್ಗೆ ಮೊದಲ ಸುತ್ತಿನ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದಿನಾಂಕ ನಿಗದಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪರ್ಸೇಕರ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ. ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಮೊದಲ ಸುತ್ತಿನ ಮಾತುಕತೆ ನಡೆಸಲು ದಿನಾಂಕ ನಿಗದಿಗೊಳಿಸಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.[ನ್ಯಾಯಮಂಡಳಿ ತೀರ್ಪು ಸ್ವಾಗತಿಸಿದ ಸಿದ್ದರಾಮಯ್ಯ]

Mahadayi issue : Siddaramaiah letter to Goa and Maharashtra CM

ಮಹದಾಯಿ ನದಿ ನೀರಿನ ವಿವಾದವನ್ನು ಮಾತುಕತೆ ಮೂಲಕ ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳುವಂತೆ ನ್ಯಾಯಮಂಡಳಿ ನೀಡಿರುವ ಸಲಹೆಯನ್ನು ಪತ್ರದಲ್ಲಿ ಉಲ್ಲೇಖಿಸಿರುವ ಸಿದ್ದರಾಮಯ್ಯ ಅವರು, ಸರ್ಕಾರದ ಮುಖ್ಯಕಾರ್ಯದರ್ಶಿಗಳು ಚರ್ಚೆ ನಡೆಸಿ, ದಿನಾಂಕ ನಿಗದಿ ಮಾಡಲಿ ಎಂದು ಹೇಳಿದ್ದಾರೆ.[ಮಹದಾಯಿ ಸಮಸ್ಯೆ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ]

ಒಕ್ಕೂಟ ವ್ಯವಸ್ಥೆಯಲ್ಲಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ನ್ಯಾಯ ಮಂಡಳಿ ಹೇಳಿರುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿರುವ ಸಿದ್ದರಾಮಯ್ಯ ಅವರು, ಮೊದಲ ಸುತ್ತಿನ ಮಾತುಕತೆಯನ್ನು ಸೆಪ್ಟೆಂಬರ್ ಅಂತ್ಯದೊಳಗೆ ನಡೆಸೋಣ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.[ಮಹದಾಯಿ ತೀರ್ಪು: ಕನ್ನಡಿಗರು ಗಮನಿಸಬೇಕಾದ್ದು ಏನು?]

mahadayi

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah wrote to Goa and Maharashtra CMs and sought their cooperation in resolving the mahadayi issue amicably through talks. CM also offered to host the first round of talks in the state.
Please Wait while comments are loading...