• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕಕ್ಕೆ ಹಿನ್ನಡೆ; ಮಹದಾಯಿ ಯೋಜನೆಗೆ ನೀಡಿದ್ದ ಒಪ್ಪಿಗೆ ವಾಪಸ್

|

ಬೆಂಗಳೂರು, ಡಿಸೆಂಬರ್ 18 : ಮಹದಾಯಿ ಯೋಜನೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಯೋಜನೆಗೆ ನೀಡಿದ್ದ ಒಪ್ಪಿಗೆಯನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ತಡೆ ಹಿಡಿದಿದೆ. ಗೋವಾ ರಾಜ್ಯದ ಒತ್ತಾಯದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದ ಸುಮಾರು 814 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯ ಮೊದಲು ಒಪ್ಪಿಗೆ ನೀಡಿತ್ತು. ಈಗ ಮಹದಾಯಿ ಯೋಜನೆಗೆ ನೀಡಿದ್ದ ಒಪ್ಪಿಗೆಗೆ ತಡೆ ನೀಡಿದೆ.

ಮಹದಾಯಿ ವಿವಾದ; ಮತ್ತೆ ಕ್ಯಾತೆ ತೆಗೆದ ಗೋವಾ ಕಾಂಗ್ರೆಸ್

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಹದಾಯಿ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಗೋವಾ ಕಾಂಗ್ರೆಸ್ ಸಹ ಯೋಜನೆಗೆ ವಿರೋಧ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದರು. ಇದರಿಂದಾಗಿ ಸಚಿವಾಲಯ ಯೋಜನೆಗೆ ತಡೆ ನೀಡಿದೆ.

ಉಪ ಚುನಾವಣೆ ವೇಳೆ ಮಹದಾಯಿ ಅಸ್ತ್ರ ಬಳಸಿದ ಟ್ರಬಲ್ ಶೂಟರ್

ಮಹದಾಯಿ ವಿವಾದದ ಕುರಿತ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ವಿವಾದ ಬಗೆಹರಿಯುವ ತನಕ ನೀಡಿರುವ ಒಪ್ಪಿಗೆಯನ್ನು ತಡೆ ಹಿಡಿದಿರುವುದಾಗಿ ಕೇಂದ್ರ ಅರಣ್ಯ ಸಚಿವಾಲಯ ಹೇಳಿದೆ. 2019ರ ಅಕ್ಟೋಬರ್ 17ರಂದು ಸಚಿವಾಲಯ ಒಪ್ಪಿಗೆ ನೀಡಿತ್ತು.

ಪ್ರಸ್ತಾವ ತಿರಸ್ಕರಿಸಿದ ಗೋವಾ ಸಿಎಂ; ಮತ್ತೆ ಮುನ್ನೆಲೆಗೆ ಬಂದ ಮಹದಾಯಿ ವಿವಾದ

ಯೋಜನೆಗೆ ನೀಡಿರುವ ಒಪ್ಪಿಗೆಯನ್ನು ಅಮಾತನುಗೊಳಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮಕ್ಕೆ ಮಾಹಿತಿ ನೀಡಲಾಗಿದೆ. ಸಚಿವಾಲಯದ ಒಪ್ಪಿಗೆ ಸಿಕ್ಕ ಬಳಿಕ ಕರ್ನಾಟಕದ ಜನರು ಸಂತಸ ಪಟ್ಟಿದ್ದರು. ಈಗ ಜನರು ಆಕ್ರೋಶಗೊಳ್ಳುವ ಸಾಧ್ಯತೆ ಇದೆ.

ಕರ್ನಾಟಕ ಸರ್ಕಾರ ಮಹದಾಯಿ ನದಿಯಿಂದ 5.5 ಟಿಎಂಸಿ ನೀರನ್ನು ಬಳಸಿಕೊಂಡು ಕಳಸಾ-ಬಂಡೂರಿ ನಾಲೆಗಳ ಮೂಲಕ ಮಲಪ್ರಭಾ ನದಿಗೆ ಹರಿಸಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ರೂಪಿಸಿದೆ.

ಆದೇಶದ ಪ್ರತಿ

English summary
Union forest and environment ministry withdraw the permission given to the Mahadayi project. Goa opposed the diversion of water from the Mhadei river for Kalasa-Banduri project of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X