ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದಾಯಿ ವಿವಾದ: ಬಿಎಸ್‌ವೈ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

By Mahesh
|
Google Oneindia Kannada News

ಬೆಂಗಳೂರು, ಸೆ.28: ಮಹದಾಯಿ ನದಿ ನೀರು ಹಂಚಿಕೆ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ತಿರುಗೇಟು ನೀಡಿದ್ದಾರೆ.

ಬಿಎಸ್ ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಬಿಜೆಪಿ ನಾಯಕರು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಬಳಿಗೆ ನಿಯೋಗ ಕರೆದೊಯ್ಯಬೇಕು ಎಂದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಸೋನಿಯಾ ಅವರೇನು ಪ್ರಧಾನಿ ಅಲ್ಲ. ಮೋದಿ ಅವರ ಬಳಿಗೆ ಹೋಗಿ ಅವರು ಮಧ್ಯ ಪ್ರವೇಶಿಸುವಂತೆ ಮನವೊಲಿಸುವುದನ್ನು ಬಿಟ್ಟು ಸರ್ಕಾರದ ವಿರುದ್ಧ ಇಲ್ಲ-ಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದರು. [ಮಹಾದಾಯಿ ವಿವಾದ: ಚರ್ಚೆಗೆ ಬನ್ನಿ ಎಂದು ಎಚ್ಡಿಕೆಯಿಂದ ಆಹ್ವಾನ]

ಕರ್ನಾಟಕದಲ್ಲಿ 17 ಜನ ಬಿಜೆಪಿ ಸಂಸದರಿದ್ದಾರೆ. ನಾಲ್ಕು ಜನ ಕೇಂದ್ರ ಸಚಿವರಿದ್ದಾರೆ. ಅವರೆಲ್ಲಾ ಪ್ರಧಾನಿ ಅವರ ಮೇಲೆ ಒತ್ತಡ ಹೇರಿ ವಿವಾದ ಬಗೆಹರಿಸುವಂತೆ ಮನವಿ ಮಾಡಿಕೊಡಬೇಕು ಎಂಬುದನ್ನು ನಾವು ಹೇಳಿಕೊಡಬೇಕಿದೆ. ಬಿಜೆಪಿಯವರು ಅನಗತ್ಯವಾಗಿ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

CM Siddaramaiah hits back at BS Yeddyurappa

ಸರ್ವಪಕ್ಷಗಳ ಸಭೆ: ಮಹದಾಯಿ ಹಾಗೂ ಕಳಸ-ಬಂಡೂರಿ ನಾಲಾ ಯೋಜನೆ ಅನುಷ್ಠಾನ ವಿಚಾರದಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಮತ್ತೊಮ್ಮೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ-2011 ರ ದತ್ತಾಂಶ ಮತ್ತು ವರದಿಗಳನ್ನು ಬಿಡುಗಡೆ ಮಾಡಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ನ್ಯಾಯಾಧೀಕರಣದ ಹೊರಗೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಬೇಕು ಎಂದು ಪ್ರಧಾನಿಗೆ ಮನವಿ ಮಾಡಲಾಗಿದೆ ಎಂದರು.

English summary
Mahadayi River Dispute: CM Siddaramaiah today(Sept 28) hits back at former CM BS Yeddyurappa for his statement about AICC president Sonia Gandhi regarding the Kalasa Banduri Project and other river dispute. Soon All party meeting will be called to discuss about the issue he added.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X