ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದಾಯಿ ವಿವಾದ : ನ.17ರಂದು ಸರ್ವಪಕ್ಷಗಳ ಸಭೆ ಕರೆದ ಸಿಎಂ

|
Google Oneindia Kannada News

ಬೆಂಗಳೂರು, ನವೆಂಬರ್ 15 : ಮಹದಾಯಿ ನದಿ ನೀರಿನ ಹಂಚಿಕೆಯ ಬೆಳವಣಿಗೆ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಮಹದಾಯಿ ನ್ಯಾಯಾಧೀಕರಣದ ತೀರ್ಪು ಪ್ರಶ್ನಿಸಿ ಈಗಾಗಲೇ ಸುಪ್ರೀಂಕೋರ್ಟ್‌ಗೆ ಅರ್ಜಿ ಹಾಕಲಾಗಿದೆ.

ನವೆಂಬರ್ 17ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ಸರ್ಕಾರ ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಮಹದಾಯಿ ನ್ಯಾಯಾಧೀಕರಣದ ಅಂತಿಮ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದೆ.

ಮಹದಾಯಿ ಅಂತಿಮ ತೀರ್ಪು : ಏನಿದು ಮೂರು ರಾಜ್ಯಗಳ ನಡುವಿನ ವಿವಾದ?

ಮಹದಾಯಿ ನ್ಯಾಯಾಧೀಕರಣ 2018ರ ಆಗಸ್ಟ್ 14ರಂದು ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿತ್ತು. ಕರ್ನಾಟಕಕ್ಕೆ 13.5 ಟಿಎಂಸಿ ನೀರನ್ನು ನ್ಯಾಯಾಧೀಕರಣ ಹಂಚಿಕೆ ಮಾಡಿತ್ತು. ರಾಜ್ಯಕ್ಕೆ 36.5 ಟಿಎಂಸಿ ನೀರು ಬೇಕು ಎಂದು ಕರ್ನಾಟಕ ಮೇಲ್ಮನವಿಯಲ್ಲಿ ಕೋರಿದೆ.

Mahadayi row : Karnataka CM calls for all-party meet

ಮೇಲ್ಮನವಿ ಸಲ್ಲಿಕೆ ಸೇರಿದಂತೆ ಮಹದಾಯಿ ನದಿ ನೀರಿನ ಹಂಚಿಕೆ ಕುರಿತ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಲು ಮುಖ್ಯಮಂತ್ರಿಗಳು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ.

ಮಹದಾಯಿ ವಿವಾದ : ಸುಪ್ರೀಂಕೋರ್ಟ್‌ಗೆ ಕರ್ನಾಟಕ ಅರ್ಜಿ

ಮಹದಾಯಿ ನದಿ ನೀರಿನ ಹಂಚಿಕೆ ವಿವಾದದಲ್ಲಿ ಗೋವಾ ರಾಜ್ಯದ ಜೊತೆ ಕರ್ನಾಟಕ ಸರ್ಕಾರ ದಶಕಗಳ ಕಾಲ ಹೋರಾಟ ನಡೆಸಿದೆ. ಮುಂಬೈ-ಕರ್ನಾಟಕ ಭಾಗದ 13 ತಾಲೂಕುಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಕರ್ನಾಟಕ ಹೆಚ್ಚುವರಿ ನೀರನ್ನು ಕೇಳುತ್ತಿದೆ.

ಮಹದಾಯಿ ಒಂದು ಹನಿ ನೀರು ವ್ಯರ್ಥವಾಗಲು ಬಿಡಲ್ಲ : ಡಿ.ಕೆ.ಶಿವಕುಮಾರ್

ನ್ಯಾಯಮೂರ್ತಿ ಜೆ.ಎಂ.ಪಾಂಚಾಲ್ ನೇತೃತ್ವದ ಮಹದಾಯಿ ನ್ಯಾಯಾಧೀಕರಣ ಕರ್ನಾಟಕಕ್ಕೆ 13 ಟಿಎಂಸಿ, ಗೋವಾ ರಾಜ್ಯಕ್ಕೆ 24, ಮಹಾರಾಷ್ಟ್ರ ರಾಜ್ಯಕ್ಕೆ 1.30 ಟಿಎಂಸಿ ನೀರನ್ನು ಹಂಚಿಕೆ ಮಾಡಿತ್ತು.

English summary
Karnataka Chief Minister H.D.Kumaraswamy has called all party meet on November 17, 2018. Karnataka government approached the Supreme Court in Mahadayi inter-state river water tribunal verdict. Karnataka had sought for 36.5 tmcft of water, but got only 13.5 tmcft in final verdict.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X