ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ. 27ರ ಉತ್ತರ ಕರ್ನಾಟಕ ಬಂದ್, ಏನಿರುತ್ತೆ? ಏನಿರಲ್ಲ?

By Mahesh
|
Google Oneindia Kannada News

ಬೆಂಗಳೂರು, ಡಿಸೆಂಬರ್ 26: ಮಹದಾಯಿ, ಕಳಸಾ ಬಂಡೂರಿ ಹೋರಾಟ ಸಮಿತಿ ಸೇರಿದಂತೆ 50ಕ್ಕೂ ಅಧಿಕ ರೈತ ಸಂಘಟನೆಗಳು ಬುಧವಾರ(ಡಿಸೆಂಬರ್ 27)ದಂದು ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಮಹದಾಯಿ : ಡಿ.27ರಂದು ಉತ್ತರ ಕರ್ನಾಟಕ ಬಂದ್ಮಹದಾಯಿ : ಡಿ.27ರಂದು ಉತ್ತರ ಕರ್ನಾಟಕ ಬಂದ್

ಕಳಸಾ ಬಂಡೂರಿ ಹೋರಾಟ ಸಮಿತಿ ತೆಗೆದುಕೊಂಡಿರುವ ಏಕರೂಪದ ನಿರ್ಣಯದಂತೆ ಈ ಬಂದ್ ಮೂಲಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರಿಗೆ ಚುರುಕು ಮುಟ್ಟಿಸಲು ರೈತ ಸಮುದಾಯ ಮುಂದಾಗಿದೆ.

ಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆಮಹದಾಯಿ ನೀರು ಹಂಚಿಕೆ : ಅಂದಿನಿಂದ ಇಂದಿನವರೆಗೆ

ಹುಬ್ಬಳ್ಳಿ -ಧಾರವಾಡ ಅವಳಿ ನಗರ ಸೇರಿದಂತೆ ಮಲಪ್ರಭಾ ಅಚ್ಚುಕಟ್ಟು ಪ್ರದೇಶ ಬಂದ್ ಮಾಡಲಾಗುತ್ತಿದೆ. ಮುಂಜಾನೆ 6 ಗಂಟೆಯಿಂದ ಸಂಜೆ‌ 6 ಗಂಟೆಯವರೆಗೆ ಬಂದ್ ಘೋಷಣೆ ಮಾಡಲಾಗಿದೆ.

ಮಾತು ಕೊಟ್ಟು ಪೇಚೆಗೆ ಸಿಲುಕಿದ ಬಿಎಸ್ ವೈ, ಮಹದಾಯಿ ಅಖಾಡಕ್ಕೆ ಯಶ್ಮಾತು ಕೊಟ್ಟು ಪೇಚೆಗೆ ಸಿಲುಕಿದ ಬಿಎಸ್ ವೈ, ಮಹದಾಯಿ ಅಖಾಡಕ್ಕೆ ಯಶ್

ಕರೆ ನೀಡಿರುವ ಬಂದ್ ಗೆ ಯಾರೆಲ್ಲ ಬೆಂಬಲ ನೀಡಿದ್ದಾರೆ? ಅಗತ್ಯ ವಸ್ತುಗಳ ಪೂರೈಕೆ ಅಲ್ಲದೆ, ಯಾವೆಲ್ಲ ಸೌಲಭ್ಯಗಳು ಲಭ್ಯವಿರಲಿದೆ? ಯಾವೆಲ್ಲ ಸೇವೆಗಳು ಸ್ಥಗಿತಗೊಳ್ಳಲಿದೆ? ಪ್ರತಿಭಟನೆ ಎಲ್ಲೆಲ್ಲಿ? ವಿವರಗಳಿಗಾಗಿ ಮುಂದೆ ಓದಿ...

ಯಾವ ಯಾವ ಜಿಲ್ಲೆಗಳಲ್ಲಿ ಬಂದ್

ಯಾವ ಯಾವ ಜಿಲ್ಲೆಗಳಲ್ಲಿ ಬಂದ್

ಹುಬ್ಬಳ್ಳಿ- ಧಾರವಾಡ, ಗದಗ, ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತದೆ. ಅಕ್ಕಪಕ್ಕದ ಜಿಲ್ಲೆಗಳಲ್ಲಿ ಬಂದ್ ತೀವ್ರಗೊಳ್ಳುವ ನಿರೀಕ್ಷೆಯಿದೆ. ಬುಧವಾರದಂದು ಆಸ್ಪತ್ರೆ, ಮೆಡಿಕಲ್ ಸ್ಟೋರ್, ತುರ್ತು ಸೇವೆ ಹೊರತುಪಡಿಸಿ ಸಂಪೂರ್ಣ ಬಂದ್ ಆಚರಿಸಲಾಗುತ್ತದೆ.

ಉತ್ತರ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲವಿದೆ: ಎಎಸ್ ಪಾಟೀಲಉತ್ತರ ಕರ್ನಾಟಕ ಬಂದ್ ಗೆ ಸಂಪೂರ್ಣ ಬೆಂಬಲವಿದೆ: ಎಎಸ್ ಪಾಟೀಲ

ನಂದಿನ ಹಾಲು, ಪೇಪರ್

ನಂದಿನ ಹಾಲು, ಪೇಪರ್

ಅಗತ್ಯ ವಸ್ತುಗಳಾದ ಹಾಲು, ಔಷಧಗಳು ದೊರೆಯಲಿವೆ. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ತೆರೆದಿರುತ್ತವೆ. ಆಂಬ್ಯುಲೆನ್ಸ್ ಸೇವೆ ಲಭ್ಯವಿರುತ್ತದೆ. ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಸಾಗಣೆ ಮಾಡುವ ಲಾರಿಗಳು ಬಂದ್‌ಗೆ ಬೆಂಬಲ ನೀಡಿಲ್ಲ. ಬೆಳಗ್ಗೆದ್ದು ಎಂದಿನಂತೆ ಕಾಫಿ ಹೀರುತ್ತಾ ದಿನಪತ್ರಿಕೆ ಓದಬಹುದು.

ಕೆಎಸ್ ಆರ್‌ಟಿಸಿ ಬಸ್ ಸಂಚಾರ

ಕೆಎಸ್ ಆರ್‌ಟಿಸಿ ಬಸ್ ಸಂಚಾರ

ಈಶಾನ್ಯ ಕರ್ನಾಟಕ ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಬಂದ್ ಗೆ ಬಹಿರಂಗವಾಗಿ ಬೆಂಬಲ ವ್ಯಕ್ತಪಡಿಸದಿದ್ದರೂ ಬಸ್ ಸಂಚಾರಕ್ಕೆ ಅಡ್ಡಿಯುಂಟಾಗುವ ಸಾಧ್ಯತೆಯಿದೆ.

ಖಾಸಗಿ ಬಸ್ಸುಗಳ ಮಾಲೀಕರ ಸಂಘ ಬುಧವಾರದ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಆದ್ದರಿಂದ, ಖಾಸಗಿ ಬಸ್ಸುಗಳು ಸಂಚಾರ ನಡೆಸಲಿವೆ.

ಸರ್ಕಾರಿ ಶಾಲೆ ಕಾಲೇಜಿಗೆ ರಜೆ ಘೋಷಣೆ ಇಲ್ಲ

ಸರ್ಕಾರಿ ಶಾಲೆ ಕಾಲೇಜಿಗೆ ರಜೆ ಘೋಷಣೆ ಇಲ್ಲ

ಕರ್ನಾಟಕ ಅಕ್ಷರ ದಾಸೋಹ ನೌಕರರ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಆದ್ದರಿಂದ, ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಎಂದಿನಂತೆ ಸಿಗಲಿದೆ. ಆಶಾ ಕಾರ್ಯಕರ್ತೆಯರು ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಮೇಲಾಗಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

* ಧಾರವಾಡ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ನಾಳೆದಿನ ರಜೆ ಘೊಷಿಸಿದ್ದಾರೆ.

* ಗದಗ ಜಿಲ್ಲೆಯ ನಗರ ಪ್ರದೇಶಗಳಲ್ಲಿ ರಜೆ ಇದೆ. ಗ್ರಾಮಾಂತರ ಭಾಗದಲ್ಲಿ ರಜೆ ಇಲ್ಲ.

ಹೊಟೆಲ್ ಗಳು ಬಂದ್ ಆಗಲ್ಲ

ಹೊಟೆಲ್ ಗಳು ಬಂದ್ ಆಗಲ್ಲ

ಹೋಟೆಲ್, ಖಾನಾವಳಿಗಳು ಕಾರ್ಯನಿರ್ವಹಿಸಲಿವೆ. ಸರ್ಕಾರಿ ಕಚೇರಿಗೆ ಬಂದವರಿಗೆ ಹೋಟೆಲ್‌ನಲ್ಲಿ ಊಟ ಸಿಗುತ್ತದೆ. ರಸ್ತೆ ಬದಿ ತಳ್ಳುಗಾಡಿ ಹೋಟೆಲ್ ಗಳಂತೂ ಬಂದ್ ಆಗುವುದಿಲ್ಲ. ಫುಡ್ ಕೋರ್ಟ್ ಕೂಡಾ ಲಭ್ಯವಿರಲಿದೆ.

ರೈಲು ಸಂಚಾರ ವ್ಯತ್ಯಯ ಇಲ್ಲ

ರೈಲು ಸಂಚಾರ ವ್ಯತ್ಯಯ ಇಲ್ಲ

ರೈಲುಗಳು ಎಂದಿನಂತೆ ಸಂಚಾರ ನಡೆಸಲಿವೆ. ಜನರು ತುರ್ತು ಪ್ರಯಾಣಕ್ಕಾಗಿ ರೈಲು ಮತ್ತು ಖಾಸಗಿ ಬಸ್ಸುಗಳನ್ನು ಅವಲಂಬಿಸಬಹುದು.

ಪರೀಕ್ಷೆಗಳನ್ನು ಕೂಡಾ ಮುಂದೂಡಲಾಗಿದೆ

ಪರೀಕ್ಷೆಗಳನ್ನು ಕೂಡಾ ಮುಂದೂಡಲಾಗಿದೆ

* ವಿಟಿಯು ಒಂದನೇ ಹಾಗೂ ಮೂರನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಜನವರಿ 08ಕ್ಕೆ ನಡೆಸಲಾಗುವುದು.

* ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಕೂಡಾ ಮುಂದೂಡಲಾಗಿದೆ.

English summary
Scores of farmers from North Karnataka have called for a bandh on December 27 to express their dissatisfaction with the resolution to the Mahadayi water row. What Will be closed and what will be opened on the bandh day here is the information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X