ಮಹದಾಯಿ ವಿವಾದ, ಆಗಸ್ಟ್ 7ರಂದು ಸರ್ವಪಕ್ಷ ಸಭೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 03 : 'ಮಹದಾಯಿ ನದಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕ ಸರ್ಕಾರದ ಮುಂದಿನ ನಡೆ ಕುರಿತು ಚರ್ಚೆ ನಡೆಸಲು ಆಗಸ್ಟ್ 7ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸಭೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು, ಗದಗ, ಬಾಗಲಕೋಟ, ಬೆಳಗಾವಿ, ಧಾರವಾಡ ಜಿಲ್ಲೆಯ ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಉಸ್ತುವಾರಿ ಸಚಿವರು' ಪಾಳ್ಗೊಳ್ಳಲಿದ್ದಾರೆ ಎಂದರು.[ಮಾತುಕತೆ ಮೂಲಕ ಮಹದಾಯಿ ವಿವಾದಕ್ಕೆ ತೆರೆ?]

Mahadayi row : Siddaramaiah calls all party meeting on August 7

'ಮಹದಾಯಿ ನ್ಯಾಯ ಮಂಡಳಿ ಆದೇಶ ಕುರಿತು ರಾಜ್ಯದ ಕಾನೂನು ತಂಡದ ಸಾರಥ್ಯ ವಹಿಸಿರುವ ನಾರಿಮನ್ ಅವರನ್ನು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರ ತಂಡ ಆಗಸ್ಟ್ 5ರಂದು ಭೇಟಿಯಾಗಿ ಮುಂದೆ ಕೈಗೊಳ್ಳಬೇಕಾದ ಕಾನೂನು ಹೋರಾಟ ಕುರಿತು ಚರ್ಚಿಸಲಿದೆ' ಎಂದು ಸಿದ್ದರಾಮಯ್ಯ ಹೇಳಿದರು.[ಗ್ಯಾಲರಿ: ಮಹದಾಯಿ ತೀರ್ಪು ಖಂಡಿಸಿ ರೈತರ ಆಕ್ರೋಶ]

'ಕಾನೂನು ತಜ್ಞರು ಮತ್ತು ಸರ್ವಪಕ್ಷಗಳ ನಾಯಕರೊಂದಿಗೆ ಚರ್ಚಿಸಿ ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ನೆಲ, ಜಲ ವಿಚಾರದಲ್ಲಿ ಪ್ರತಿಪಕ್ಷಗಳು ಸೇರಿದಂತೆ ಎಲ್ಲರ ಅಭಿಪ್ರಾಯ ಪಡೆದುಕೊಂಡೇ ಕಾನೂನು ಮತ್ತಿತರ ಹೋರಾಟವನ್ನು ನಾವು ಮಾಡುತ್ತಿದ್ದೇವೆ' ಎಂದರು.[ಮಹದಾಯಿ ತೀರ್ಪು: ಕನ್ನಡಿಗರು ಗಮನಿಸಬೇಕಾದ್ದು ಏನು?]

ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಿಕೊಳ್ಳಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆಯೂ ಸರ್ವಪಕ್ಷಗಳ ಸಭೆಯಲ್ಲಿ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah on Wednesday said, all-party meeting called on August 7, 2016 to discuss about the Mahadayi water dispute next step.
Please Wait while comments are loading...