Get Updates
Get notified of breaking news, exclusive insights, and must-see stories!

Mahadayi Water Project: ಮಹದಾಯಿ ಯೋಜನೆ ಮತ್ತೆ ಕೇಂದ್ರದತ್ತ ಬೊಟ್ಟು ಮಾಡಿದ ಸಿ.ಎಂ

ಉತ್ತರ ಕರ್ನಾಟಕದ ಬಹು ನಿರೀಕ್ಷಿತ ಹಾಗೂ ಗಗನ ಕುಸುಮವಾಗಿರುವ ಮಹದಾಯಿ ಯೋಜನೆ ಜಾರಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡಿದ್ದಾರೆ. ಮಹದಾಯಿ ಯೋಜನೆ ಜಾರಿ ಮಾಡುವುದಕ್ಕೆ ಬೇಕಾದ ಎಲ್ಲ ಮಾದರಿಯ ಸಿದ್ಧತೆಗಳನ್ನು ರಾಜ್ಯ ಸರ್ಕಾರ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಯ್ಯ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಮಹದಾಯಿ ಯೋಜನೆ ರಾಜಕೀಯ ತಿರುವು ಪಡೆದುಕೊಂಡಿದೆ.

ದಶಕಗಳ ಕಾಲ ಉತ್ತರ ಕರ್ನಾಟಕದ ರೈತರು ಹಾಗೂ ಉತ್ತರ ಕರ್ನಾಟಕ ಭಾಗದ ಜನ ಆಸೆಗಣ್ಣುಗಳಿಂದ ನೋಡುತ್ತೀರುವ ಮಹದಾಯಿ ಯೋಜನೆ ಇನ್ನಷ್ಟು ವರ್ಷ ಕನಸಾಗಿಯೇ ಉಳಿಯುವಂತಿದೆ. ಹೌದು ಉತ್ತರ ಕರ್ನಾಟಕ ಭಾಗದ ಜನ ಹಲವು ದಶಕಗಳಿಂದ ಈ ವರ್ಷ ಇಲ್ಲ ಮುಂದಿನ ವರ್ಷ ಮಹದಾಯಿ ಯೋಜನೆ ಜಾರಿಯಾಗಿಯೇ ಬಿಡುತ್ತದೆ ಎಂದು ನಿರೀಕ್ಷಿಸುತ್ತಿದೆ. ಆದರೆ, ರಾಜಕೀಯ ನಾಯಕರು ಈ ಸಮಸ್ಯೆಯನ್ನು ಇನ್ನೂ ಜೀವಂತವಾಗಿಯೇ ಇರಿಸಿದ್ದಾರೆ.

Mahadayi Water Project Mahadayi project again pointed to the Center by CM

ಮಹಾದಾಯಿ ಯೋಜನೆಗೆ ಚಾಲನೆ ನೀಡಲು ಕರ್ನಾಟಕ ರಾಜ್ಯ ಸರ್ಕಾರ ಸದಾ ಸಿದ್ಧವಿದೆ. ಆದರೆ, ಕೇಂದ್ರದಿಂದ ಪರಿಸರ ತಿರುವಳಿ ನೀಡುವುದು ಇನ್ನೂ ಬಾಕಿ ಉಳಿದಿದೆ. ತೀರುವಳಿ ಸಿಕ್ಕ ಕೂಡಲೇ ನಾವು ಕಾಮಗಾರಿಯನ್ನು ಪ್ರಾರಂಭಿಸಲು ಸಿದ್ಧರಿದ್ದೇವೆ ಎಂಧು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕರ್ನಾಟಕಕ್ಕೆ 80,000 ಕೋಟಿ ರೂ. ನಷ್ಟ

ಅನುದಾನ ಹಂಚಿಕೆಯಲ್ಲಿ ಆಗಿರುವ ತಾರತಮ್ಯದಿಂದಾಗಿ ಕಳೆದ ಐದು ವರ್ಷದ ಅವಧಿಯಲ್ಲಿ ಕರ್ನಾಟಕಕ್ಕೆ 80,000 ಕೋಟಿ ರೂ. ನಷ್ಟ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗುರುವಾರ 16ನೇ ಹಣಕಾಸು ಆಯೋಗದವರೊಂದಿಗೆ ಸಭೆ ನಡೆದಿದೆ. ಈ ಸಭೆಯಲ್ಲಿ ತೆರಿಗೆ ಹಂಚಿಕೆ ಹಾಗೂ ವಿಶೇಷ ಅನುದಾನಗಳ ಬಗ್ಗೆ ಕರ್ನಾಟಕದ ನಿಲುವನ್ನು ಸ್ಪಷ್ಟಪಡಿಸಲಾಗಿದೆ.

15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದರ ಕುರಿತು ನಾವು ಈಗಾಗಲೇ ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದೇವು. ಆಯೋಗ ಶಿಫಾರಸ್ಸು ಮಾಡಿದ್ದ 11,495 ಕೋಟಿ ರೂಪಾಯಿ ಕರ್ನಾಟಕಕ್ಕೆ ಬಿಡುಗಡೆ ಆಗಿರಲಿಲ್ಲ. ರಾಜ್ಯಕ್ಕೆ ಹಂಚಿಕೆಯಾಗುತ್ತಿದ್ದ ತೆರಿಗೆ ಪ್ರಮಾಣ 4.713 ರಿಂದ 3.647 ಗೆ ಇಳಿದಿದೆ., 1.66 ರಷ್ಟು ಕಡಿಮೆಯಾಗಿದೆ. ಈ ಎಲ್ಲ ಕಾರಣಗಳಿಂದ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಅಂದಾಜು 80,000 ಕೋಟಿ ರೂಪಾಯಿಗೂ ಹೆಚ್ಚಿನ ಅನುದಾನ ನಷ್ಟವಾಗಿದೆ. ಈ ಕೊರತೆಯನ್ನು ಸರಿದೂಗಿಸುವಂತೆ ಗುರುವಾರ ನಡೆದ ಸಭೆಯಲ್ಲಿ ಆಯೋಗದ ಸದಸ್ಯರಿಗೆ ಕರ್ನಾಟಕದ ವತಿಯಿಂದ ವಿವರಿಸಲಾಗಿದೆ ಎಂದು ಹೇಳಿದ್ದಾರೆ.

Mahadayi Water Project Mahadayi project again pointed to the Center by CM

16ನೇ ಹಣಕಾಸಿನ ಆಯೋಗದವರು ಸಹ ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿಂದೆ ಹಣಕಾಸಿನ ಆಯೋಗದಿಂದ ಕರ್ಣಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ಮತ್ತು ಅನುದಾನ ಕೊರತೆಯನ್ನು ಸರಿಪಡಿಸುವ ವಿಶ್ವಾಸವಿದೆ ಎಂದಿದ್ದಾರೆ.

ವಿಪಕ್ಷದವರಿಗೆ ಹೊಟ್ಟೆಕಿಚ್ಚು: ಸಿ.ಎಂ

ವಿಪಕ್ಷದವರಿಗೆ ನನ್ನನ್ನು ನೋಡಿದರೆ, ಹೊಟ್ಟೆಕಿಚ್ಚು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜಾತಿ ವ್ಯವಸ್ಥೆಯ ಈ ಸಮಾಜದಲ್ಲಿ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು ಎಂದು ಮಹಾತ್ಮಗಾಂಧಿ ಹೇಳಿದ್ದರು. ಆ ಮಾತಿನಲ್ಲಿ ನಂಬಿಕೆ ಇರಿಸಿಕೊಂಡು ನಾನು ಕಾರ್ಯಕ್ರಮ ರೂಪಿಸುತ್ತಿದ್ದೇನೆ. ಇದೇ ವಿಪಕ್ಷದವರಿಗೆ ಹೊಟ್ಟೆಕಿಚ್ಚಿಗೆ ಕಾರಣವಾಗಿದೆ. ಈ ಹೊಟ್ಟೆಕಿಚ್ಚಿ ಪ್ರವೃತ್ತಿಯಿಂದ ಅವರೇ ನಾಶ ವಾಗುತ್ತಾರೆಯೇ ಹೊರತು ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಸಿ.ಎಂ ಎಚ್ಚರಿಸಿದ್ದಾರೆ.

ನಾನು ಯಾರಿಗೂ, ಯಾವುದೇ ಪಿತೂರಿ-ಷಡ್ಯಂತ್ರಗಳಿಗೆ ಭಯಪಡಲ್ಲ. ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಗೆರಿಲ್ಲಾ ಸೇನಾನಿ ರಾಯಣ್ಣನನ್ನು ಬ್ರಿಟೀಷರಿಗೆ ಮೋಸದಿಂದ ಹಿಡಿದುಕೊಟ್ಟಿದ್ದು ಸಹ ನಮ್ಮವರೇ. ಇಂಥಾ ದೇಶದ್ರೋಹಿಗಳು ಈಗಲೂ ನಮ್ಮೊಳಗೆ ಇದ್ದಾರೆ. ಇಂಥಾ ದೇಶದ್ರೋಹಿಗಳು ಎಲ್ಲಾ ಕಾಲದಲ್ಲೂ ಎಲ್ಲ ಕಡೆಗಳಲ್ಲೂ ಇರುತ್ತಾರೆ. ಇಂಥವರನ್ನು ನಾವು ಒಗ್ಗಟ್ಟಿನಿಂದ ಎದುರಿಸುವ ಮೂಲಕ ಸೋಲಿಸಬೇಕು ಎಂದು ಸಿ.ಎಂ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+