H.C.Mahadevappa Profile: ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಪಡೆದ ಎಚ್.ಸಿ.ಮಹದೇವಪ್ಪ
ಮೈಸೂರು, ಮೇ, 27: ಮೈಸೂರು ಜಿಲ್ಲೆಯ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಭಾವಿ ನಾಯಕರಾಗಿರುವ ಎಚ್.ಸಿ.ಮಹದೇವಪ್ಪ ಅವರು ಈವರೆಗೆ ಮೂರು ಭಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಹಾಗೆಯೆ ಎರಡನೇ ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾಗಿ ಆಯ್ಕೆಯಾಗಿದ್ದಾರೆ. ಹಾಗಾದರೆ ಎಚ್.ಸಿ.ಮಹದೇವಪ್ಪ ಅವರ ಜೀವನ ಪರಿಚಯವನ್ನು ಇಲ್ಲಿ ತಿಳಿಯಿರಿ.
ಈ ಬಾರಿ ಟಿ. ನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಎಚ್.ಸಿ.ಮಹದೇವಪ್ಪ ಅವರು 77,884 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದು, ಇನ್ನು ಇವರಿಗೆ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ಅಶ್ವಿನ್ ಕುಮಾರ್ 18,619 ಮತಗಳ ಅಂತರದಿಂದ ಸೋಲನುಭವಿಸಿದ್ದರು.

ಎಚ್.ಸಿ.ಮಹದೇವಪ್ಪ ಪರಿಚಯ
ಇನ್ನು ಪರಿಶಿಷ್ಟ ಜಾತಿ ಸಮಾಜಕ್ಕೆ ಸೇರಿದ ಎಚ್.ಸಿ.ಮಹದೇವಪ್ಪ ಅವರು ಚಿಕ್ಕಮಾದಯ್ಯ, ಮಾದಮ್ಮ ದಂಪತಿಗಳಿಗೆ ಏಪ್ರಿಲ್ 20, 1953ರಲ್ಲಿ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದಲ್ಲಿ ಜನಿಸಿದರು. ಇವರು 1999ರಲ್ಲಿ ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡಿದದ್ದರು. ಇವರ ಪತ್ನಿ ಮಹದೇವಮ್ಮ ಆಗಿದ್ದು, ಹಾಗೆಯೆ ಈ ದಂಪತಿಗಳಿಗೆ ಒಬ್ಬ ಪುತ್ರನಿದ್ದಾನೆ.
ಡಾ.ಎಚ್.ಸಿ. ಮಹದೇವಪ್ಪ ಅವರು ಪ್ರಸ್ತುತ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದಾರೆ. ಇವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಹಾಗೆಯೆ ಎಂಬಿಬಿಎಸ್ ಪದವೀಧರರಾದ ಡಾ.ಎಚ್.ಸಿ. ಮಹದೇವಪ್ಪ 2023ರ ವಿಧಾನಸಭೆ ಚುನಾವಣೆಯಲ್ಲಿ ಟಿ.ನರಸೀಪು ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಇನ್ನು 2018ರ ಚುನಾವಣೆಯಲ್ಲಿ 55,451 ಮತಗಳನ್ನು ಪಡೆದು ಸೋಲು ಕಂಡಿದ್ದರು.
2013ರ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾಗಿ ಕೆಲಸ ಮಾಡಿದವರಾಗಿದ್ದಾರೆ. ಒಟ್ಟು ಮೂರು ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಹೀಗೆ ಡಾ.ಎಚ್.ಸಿ. ಮಹದೇವಪ್ಪ ಅವರು 1985-89, 1994-99, 2004-2007, 2008-2013 ಮತ್ತು 2013-2018ವರೆಗೂ ಶಾಸಕರಾಗಿದ್ದರು. ಈ ಮೂಲಕ ಅವರು 1994-1999, 2004-2007, 2013-2018ರವರೆಗೂ ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.












Click it and Unblock the Notifications