ಬೆಳಗಾವಿಯಲ್ಲಿ ಮಹಾರಾಷ್ಟ್ರ ಕಟ್ಟಡ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ?

ಮಹಾರಾಷ್ಟ್ರ ಸರ್ಕಾರವು ಮತ್ತೊಮ್ಮೆ ಬೆಳಗಾವಿಯಲ್ಲಿ ಕ್ಯಾತೆ ತೆಗೆಯುವುದಕ್ಕೆ ಮುಂದಾಗಿದೆ. ಆದರೆ, ಕರ್ನಾಟಕ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಿಯಾಕ್ಟ್‌ ಮಾಡಿರುವ ಹೇಳಿಕೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಫ್ಟ್‌ ಆಗಿ ಮಾತನಾಡಿರುವುದು ಕುತೂಹಲ ಮೂಡಿಸಿದೆ. ಮಹಾರಾಷ್ಟ್ರ ಸರ್ಕಾರವು ಒಂದಿಲ್ಲೊಂದು ವಿಚಾರದಲ್ಲಿ ವಿವಾದವನ್ನು ಸೃಷ್ಟಿ ಮಾಡುತ್ತಿದೆ. ಇದೀಗ ಕಟ್ಟಡದ ವಿಚಾರದಲ್ಲಿ ವಿವಾದ ಸೃಷ್ಟಿಯಾಗಿದೆ. ಏನಿದು ಎನ್ನುವ ವಿವರ ಇಲ್ಲಿದೆ.

ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಬೆಳಗಾವಿ ಗಡಿ ವಿವಾದ ಹಾಗೂ ಭಾಷಾ ವಿವಾದವು ಬೂದಿ ಮುಚ್ಚಿದ ಕೆಂಡದಂತೆ ಇದೆ. ಇದೀಗ ಕರ್ನಾಟಕದ ಬೆಳಗಾವಿಯಲ್ಲಿ ಹೊಸ ವಿವಾದವೊಂದಕ್ಕೆ ಮಹಾರಾಷ್ಟ್ರ ದಾರಿ ಮಾಡಿಕೊಟ್ಟಿದೆ. ಒಂದು ವಿವಾದ ಮುಗಿಯುವುದರ ಒಳಗಾಗಿ ಮತ್ತೊಂದು ವಿವಾದ ಸೃಷ್ಟಿಯಾಗಿದೆ. ಆದರೆ, ಕರ್ನಾಟಕ ಸರ್ಕಾರವು ಈ ವಿಚಾರದಲ್ಲಿ ಮೃದು ಧೋರಣೆ ಅನುಸರಿಸುತ್ತಿದೆ. ಇದಕ್ಕೆ ಕನ್ನಡಿಗರು ಗರಂ ಆಗಿದ್ದಾರೆ.

Maharashtra Bhavan in Belagavi What Did CM Siddaramaiah Say

ಕರ್ನಾಟಕದಲ್ಲಿ ಭವನ ನಿರ್ಮಾಣ ವಿವಾದ: ಮಹಾರಾಷ್ಟ್ರ ಸರ್ಕಾರವು ಬೆಳಗಾವಿಯಲ್ಲಿ ಭವನ ನಿರ್ಮಾಣ ಮಾಡುವುದಕ್ಕೆ ಮುಂದಾಗಿದ್ದು. ಇದು ಭಾರೀ ಆಕ್ರೋಶ ಹಾಗೂ ವಿವಾದಕ್ಕೆ ಕಾರಣವಾಗಿದೆ. ಆದರೆ, ಈ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಅದೇ ರೀತಿ ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಾಣ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಈ ವಿಚಾರವಾಗಿ ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್‌ ಮೇಲೂ ಆಕ್ರೋಶ ಹೊರ ಹಾಕಿದ್ದಾರೆ. ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿಯೂ ಅಸಮರ್ಥರಾಗಿದ್ದರು. ಕಾಂಗ್ರೆಸ್ ಪಕ್ಷಕ್ಕೆ ವಲಸೆ ಬಂದಾಗ ಬಿಜೆಪಿಯವರ ವಿರುದ್ಧವೇ ಹಲವು ಹೇಳಿಕೆಗಳನ್ನು ನೀಡಿದ್ದರು ಅಂತ ಹೇಳಿದ್ದಾರೆ.

Take a Poll

ಇನ್ನು ಜಾತಿಗಣತಿ ಜಾರಿಗೆ ತರಬೇಕೆಂಬುದು ಕಾಂಗ್ರೆಸ್‌ನ ಭರವಸೆಯಾಗಿದೆ. ಒಂದು ಕುಟುಂಬದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿಯುವುದು ಸರ್ಕಾರವಾಗಿ ಅವಶ್ಯಕ. ಸ್ವಾತಂತ್ರ್ಯ ನಂತರ ಜಾತಿಗಣತಿ ನಡೆದಿಲ್ಲ, ಹಲವು ಸಂದರ್ಭಗಳಲ್ಲಿ ನ್ಯಾಯಾಲಯಗಳಲ್ಲಿ ಈ ಬಗ್ಗೆ ಮಾಹಿತಿ ಕೇಳಲಾಗಿತ್ತು. ಆದ್ದರಿಂದ ಜಾತಿಗಣತಿ ಮಾಡಬೇಕಾದ ಅನಿವಾರ್ಯತೆಯಿತ್ತು ಎಂದಿದ್ದಾರೆ.

ಜಾತಿಗಣತಿಯನ್ನು ಸಮರ್ಪಕವಾಗಿ ನಡೆಸಲಾಗಿಲ್ಲ ಎಂಬ ಬಿಜೆಪಿ ಕರ್ನಾಟಕ ಆರೋಪ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರದಿಂದ ಕೂಡಿದೆ. ಸಮೀಕ್ಷೆಯನ್ನು ಶೇ. 95 ರಷ್ಟು ನಿಖರವಾಗಿ ನಡೆಸಲಾಗಿದೆ. ಶೇ. 98 ರಷ್ಟು ನಿಖರವಾಗಿ ಗ್ರಾಮಾಂತರ ಹಾಗೂ ಶೇ.96 ರಷ್ಟು ನಿಖರವಾಗಿ ನಗರ ಪ್ರದೇಶಗಳಲ್ಲಿ ನಡೆಸಲಾಗಿದೆ. 1,01,60,000 ಜನರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು, ಸುಮಾರು 1,36,000 ಜನ ಶಿಕ್ಷಕರಿದ್ದರು. ಶಿಕ್ಷಕರಲ್ಲಿ ಹೆಚ್ಚಿನವರು ಸಾಮಾನ್ಯ ವರ್ಗದವರೇ ಆಗಿದ್ದು, ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ ಅಂತ ಹೇಳಿದ್ದಾರೆ.

ಒಳಮೀಸಲಾತಿ ಜಾರಿಗೆ ತರಲು ಜಸ್ಟೀಸ್ ನಾಗಮೋಹನ್ ದಾಸ್ ಅವರ ಆಯೋಗ ರಚಿಸಿ, ಎರಡು ತಿಂಗಳಲ್ಲಿ ವರದಿ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ ಆದಿ ದ್ರಾವಿಡ, ಆದಿ ಆಂದ್ರ, ಆದಿ ಕರ್ನಾಟಕ, ಎಸ್.ಸಿ ಗಳು ಸೇರಿದಂತೆ 102 ಜಾತಿಗಳಿವೆ. ಇವರಲ್ಲಿ ಯಾರು ಯಾವ ಜಾತಿಗೆ ಸೇರಿದ್ದಾರೆಂಬ ಬಗ್ಗೆ ಸ್ಪಷ್ಟತೆ ಸಿಗಬೇಕೆಂಬ ಕಾರಣಕ್ಕೆ ಸಮೀಕ್ಷೆ ನಡೆಸಲಾಗುತ್ತಿದೆ.

ಭವನ ನಿರ್ಮಾಣ ಸಿದ್ದರಾಮಯ್ಯ ಹೇಳಿದ್ದೇನು ?

ಮಹಾರಾಷ್ಟ್ರ ಸರ್ಕಾರದಿಂದ ಬೆಳಗಾವಿಯಲ್ಲಿ ಭವನ ನಿರ್ಮಾಣದ ವಿಚಾರವಾಗಿ ಮಾತನಾಡಿರುವ ಅವರು, ನಮ್ಮ ಸರ್ಕಾರ ನವದೆಹಲಿಯಲ್ಲಿ ಕರ್ನಾಟಕ ಭವನವನ್ನು ನಿರ್ಮಿಸಿದೆ. ಅದೇ ರೀತಿ ಮಹಾರಾಷ್ಟ್ರ ಸರ್ಕಾರದವರು ಬೆಳಗಾವಿಯಲ್ಲಿ ಭವನವನ್ನು ನಿರ್ಮಾಣ ಮಾಡುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವಿದೆ. ಆದರೂ ಮಹಾರಾಷ್ಟ್ರದವರು ನಮ್ಮ ಭೂಮಿಯನ್ನು ಆಕ್ರಮಿಸಿಕೊಳ್ಳಲು ಸಾಧ್ಯವಿಲ್ಲ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಅಂತ ಹೇಳಿದ್ದಾರೆ.

ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಸೇರಿದಂತೆ ಅವಶ್ಯಕ ವಸ್ತುಗಳ ಬೆಲೆ ಏರಲು ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಕೇಂದ್ರದ ಬಿಜೆಪಿಯ ತಪ್ಪು ನೀತಿಗಳಿಂದಾಗಿ ಇಡೀ ದೇಶದಲ್ಲಿ ಬೆಲೆ ಏರಿಕೆಯಾಗಿದೆ. ಕರ್ನಾಟಕ ಬಿಜೆಪಿ ನಾಯಕರಿಗೆ ಜನಾಕ್ರೋಶ ಯಾತ್ರೆ ಮಾಡುವ ಯಾವ ನೈತಿಕತೆಯು ಇಲ್ಲ.

ರಾಜ್ಯ ಸರ್ಕಾರ ಹೆಚ್ಚಿಸಿರುವ ಹಾಲಿನ ದರದಿಂದ ರೈತರಿಗೆ ಲಾಭ ಹೋಗುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಚ್ಚಾ ತೈಲದ ಬೆಲೆಯ ಮೇಲೆ ನಿಗದಿಯಾಗುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಒಂದು ಬ್ಯಾರಲ್ ಕಚ್ಚಾತೈಲಕ್ಕೆ 120 ಡಾಲರ್ ಇತ್ತು, ಈಗ 65 ಡಾಲರ್ ಗೆ ಇಳಿದಿದೆ. ಅಂದು ಗ್ಯಾಸ್ ಸಿಲಿಂಡರ್ ಬೆಲೆ 400 ರೂ. ಇತ್ತು, ಇಂದು 800 ರೂ. ಮೀರಿದೆ. ಪೆಟ್ರೋಲ್ - ಡೀಸೆಲ್ ಬೆಲೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಹೆಚ್ಚಿಸಿರುವ ಬಗ್ಗೆ ಜನರು ಪ್ರಶ್ನೆ ಕೇಳಬೇಕಿದೆ ಎಂದಿದ್ದಾರೆ.

ಸರ್ಕಾರ ಆರ್ಥಿಕ ದಿವಾಳಿಯಾಗಿದೆ ಎಂಬ ಬಿಜೆಪಿಯವರ ಆರೋಪ ಅವರಿಗೇ ನಾಚಿಕೆಗೇಡಿನದು. ಬಿಜೆಪಿಯವರ ಕಾಲದಲ್ಲಿ ಅನುದಾನ
ವಿಲ್ಲದಿದ್ದರೂ ಕಾಮಗಾರಿಗಳಿಗೆ ಮಂಜೂರಾತಿ ನೀಡಿ, ಟೆಂಡರ್ ಪ್ರಕ್ರಿಯೆ ಕೈಗೊಂಡಿದ್ದರು. ಈಗ ನಮಗೆ ಪಾಠ ಹೇಳುತ್ತಿದ್ದಾರೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರ ಸರ್ಕಾರದ ಅವಧಿಯಲ್ಲಿಯೇ ರಾಜ್ಯದ ಆರ್ಥಿಕತೆ ಕುಸಿದಿತ್ತು. ನಮ್ಮ ಅವಧಿಯಲ್ಲಿ ಹಿಂದಿನ ವರ್ಷಕ್ಕಿಂತ ಈ ಸಾಲಿನ ಬಜೆಟ್‌ನ ಪ್ರಮಾಣ ಸುಮಾರು 38 ಸಾವಿರ ಕೋಟಿಯಷ್ಟು ಹೆಚ್ಚಾಗಿದೆ. ಇದು ಸರ್ಕಾರವೊಂದರ ಆರ್ಥಿಕ ದಿವಾಳಿತನವೇ ಅಂತ ಪ್ರಶ್ನೆ ಮಾಡಿದ್ದಾರೆ.

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಮುಂಚೆ ದೇಶದ ಮೇಲೆ 53,11,000 ಕೋಟಿ ಸಾಲವಿತ್ತು. ಆದರೆ ಈಗ 200 ಲಕ್ಷ ಕೋಟಿಗೂ ಹೆಚ್ಚಾಗಿದೆ. ದೇಶದ ಸಾಲ ನಾಲ್ಕು ಪಟ್ಟು ಹೆಚ್ಚಲು ನರೇಂದ್ರ ಮೋದಿಯವರೇ ಕಾರಣ ಅಲ್ವಾ ಎಂದು ಕಿಡಿಕಾರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+