ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷ ಬೇರೆ ಇದ್ದರೂ ನೆಲ, ಜಲ ವಿಚಾರದಲ್ಲಿ ನಾವೆಲ್ಲ ಒಂದೇ: ಲಕ್ಷ್ಮಣ ಸವದಿ

|
Google Oneindia Kannada News

ಬೆಳಗಾವಿ,ಡಿಸೆಂಬರ್ 9: ರಾಜಕಾರಣಿಗಳ ಪಕ್ಷ ಬೇರೆ ಬೇರೆಯಾಗಿದ್ದರೂ ನೆಲ, ಜಲ ವಿಚಾರದಲ್ಲಿ ನಾವೆಲ್ಲ ಒಂದೇ ಎಂದು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಹೇಳಿದ್ದಾರೆ.

ಈ ಕುರಿತು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಗಡಿ ವಿವಾದದ ವಿಚಾರವಾಗಿ ಮಾತನಾಡಿ, ಎಂಇಎಸ್ ಪುಂಡರ ಆಟ ನಡೆಯೋದಿಲ್ಲ. ನಾವ್ಯಾರೂ ಇಲ್ಲಿ ಬಳೆ ಹಾಕಿಕೊಂಡಿಲ್ಲ, ಎಲ್ಲರೂ ಗಂಡಸರಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹಲವು ವರ್ಷಗಳಿಂದ ಎಂಇಎಸ್ ಪುಂಡಾಟಿಕೆ ಮುಂದುವರಿಸಿಕೊಂಡು ಬಂದಿದೆ. ಇದೀಗ ಅದು ಸತ್ತ ಹೆಣವಾಗಿದೆ. ಅದನ್ನು ಜೀವಂತಗೊಳಿಸಲು ಮಹಾರಾಷ್ಟ್ರ ಹಾಗೂ ಬೆಳಗಾವಿಯಲ್ಲಿ ಕೆಲವರು ಪ್ರಯತ್ನ ಪಡುತ್ತಿದ್ದಾರೆ ಎಂದು ಹರಿಹಾಯ್ದರು.

Karnataka Maharashtra Border Dispute laxman savadi warning to MES

ಗಡಿ ವಿಚಾರವಾಗಿ ಉಭಯ ರಾಜ್ಯದಲ್ಲಿ ಗೊಂದಲ ಉದ್ಭವಿಸಿದೆ. ವ್ಯಾಪಾರ-ವಹಿವಾಟು ಮೇಲೆ ಪರಿಣಾಮ ಬೀರುತ್ತಿದೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಅಂಥವರನ್ನು ಹದ್ದುಬಸ್ತಿನಲ್ಲಿಡಬೇಕೆಂದು ಮನವಿ ಮಾಡಿದರು.

ಜತ್ತ ಕನ್ನಡಿಗರ ವಿಚಾರವಾಗಿ ಮಾತನಾಡಿ, ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ 44 ಗ್ರಾಮಗಳು ಕರ್ನಾಟಕಕ್ಕೆ ಸೇರಬೇಕೆಂಬ ಬೇಡಿಕೆ ಹಿಂದಿನಿಂದಲೂ ಇವೆ. ಆದರೆ ಅಲ್ಲಿನ ಸರ್ಕಾರ ಅವರಿಗೆ ಮೂಲ ಸೌಕರ್ಯ ನೀಡಿಲ್ಲವೆಂದು ಅವರು ಕರುನಾಡಿಗೆ ಆಗಮಿಸುತ್ತಿದ್ದಾರೆ. ಅವರ ಆಗಮನ ಬೇಡ. ಅಲ್ಲಿಯೇ ಸರ್ಕಾರ ಅವರಿಗೆ ಮೂಲಸೌಕರ್ಯ ಒದಗಿಸಲಿ ಎಂದು ಹೇಳಿದರು.

ಗಡಿ ವಿವಾದ: ರಾಜ್ಯದ ನೀತಿಯನ್ನ ಸ್ಪಷ್ಟವಾಗಿ ಪ್ರಕಟಿಸಲಾಗಿದೆ: ಬಸವರಾಜ ಬೊಮ್ಮಾಯಿ

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ನೀತಿಯನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Karnataka Maharashtra Border Dispute laxman savadi warning to MES

ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದು, ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ. ಕರ್ನಾಟಕದಲ್ಲಿಯೂ ಕೂಡ ಸಂಪುರ್ಣ ಬಂದೋಬಸ್ತು ಮಾಡಲಾಗಿದೆ.

ನಾನೂ ಕೂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ. ಅಮಿತ್ ಶಾ, ಅವರಾಗಲಿ ಬೇರ್ಯಾರೂ ನನ್ನ ಬಳಿ ಈ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.

English summary
Border Dispute; we will unite on water land issues says laxman savadi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X