ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ ಗಡಿ ವಿವಾದ: ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

|
Google Oneindia Kannada News

ಬೆಳಗಾವಿ, ಡಿಸೆಂಬರ್‌ 22: ಮಹಾರಾಷ್ಟ್ರದೊಂದಿಗಿನ ಗಡಿ ವಿವಾದದ ಕುರಿತು ಕರ್ನಾಟಕ ವಿಧಾನಸಭೆಯು ಗುರುವಾರ ಸರ್ವಾನುಮತದಿಂದ ನಿರ್ಣಯವನ್ನು ಅಂಗೀಕರಿಸಿದೆ.

ಕರ್ನಾಟಕ ರಾಜ್ಯದ ಹಿತಾಸಕ್ತಿಗಳನ್ನು ರಕ್ಷಿಸಲು ವಿಧಾನಸಭೆ ನಿರ್ಣಯಿಸಿದೆ. ಸರ್ವಾನುಮತದ ನಿರ್ಣಯವು ಮಹಾರಾಷ್ಟ್ರವು ಸೃಷ್ಟಿಸಿದ ಗಡಿ ವಿವಾದವನ್ನು ಖಂಡಿಸಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ನಿರ್ಣಯವನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ಅವಧಿ ಮುನ್ನ ಚುನಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ : ಬಸವರಾಜ ಬೊಮ್ಮಾಯಿಅವಧಿ ಮುನ್ನ ಚುನಾವಣೆಯ ಯಾವುದೇ ಪ್ರಸ್ತಾವನೆ ಇಲ್ಲ : ಬಸವರಾಜ ಬೊಮ್ಮಾಯಿ

ಕರ್ನಾಟಕದ ನೆಲ, ಜಲ, ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ಯಾವುದೇ ರಾಜಿ ಇಲ್ಲ, ಕರ್ನಾಟಕದ ಜನರು ಮತ್ತು ಸದಸ್ಯರ (ವಿಧಾನಸಭಾ) ಭಾವನೆಗಳು ಈ ವಿಷಯಗಳಲ್ಲಿ ಒಂದಾಗಿದೆ, ಮತ್ತು ಇದು ಬಾಧಿತವಾದರೆ, ನಾವೆಲ್ಲರೂ ಒಗ್ಗಟ್ಟಿನಿಂದ ತೆಗೆದುಕೊಳ್ಳಲು ಬದ್ಧರಾಗಿದ್ದೇವೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಸಾಂವಿಧಾನಿಕ ಮತ್ತು ಕಾನೂನಾತ್ಮಕ ಕ್ರಮಗಳು, ಮಹಾರಾಷ್ಟ್ರದವರು ಅನಗತ್ಯವಾಗಿ ಸೃಷ್ಟಿಸಿರುವ ಗಡಿ ವಿವಾದಗಳನ್ನು ಖಂಡಿಸಿ, ಈ ಸದನವು ರಾಜ್ಯದ ಹಿತಾಸಕ್ತಿ ಕಾಪಾಡಲು ಬದ್ಧವಾಗಿದೆ ಎಂಬ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸುತ್ತದೆ ಎಂದು ಬೊಮ್ಮಾಯಿ ಅವರು ಮಂಡಿಸಿದ ನಿರ್ಣಯವನ್ನು ಓದಿದರು.

Maharashtra border dispute: Resolution passed in Karnataka assembly

ಇದಕ್ಕೂ ಮುನ್ನ ಸದನದಲ್ಲಿ ಗಡಿ ವಿಷಯದ ಚರ್ಚೆಗೆ ಉತ್ತರಿಸಿದ ಸಿಎಂ, ರಾಜ್ಯದ ಒಂದು ಇಂಚು ಭೂಮಿಯನ್ನೂ ಬಿಡಬಾರದು ಎಂಬುದು ಕರ್ನಾಟಕದ ಜನತೆಯ ಇಚ್ಛೆ. ನಾವು ಅದನ್ನು ರಕ್ಷಿಸಲು ಎಲ್ಲವನ್ನೂ ಮಾಡುತ್ತೇವೆ, ನಾವು ಈ ದಿಕ್ಕಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.

ಗಡಿ ವಿಚಾರದಲ್ಲಿ ಮಹಾರಾಷ್ಟ್ರ ರಾಜಕೀಯ ನಾಯಕರ ನಡತೆಯನ್ನು ಖಂಡಿಸಿದ ಬೊಮ್ಮಾಯಿ, "ಅವರು ಹೀಗೆಯೇ ಮುಂದುವರಿದರೆ ನಾವು ಕಾನೂನು ಕ್ರಮ ಕೈಗೊಳ್ಳುತ್ತೇವೆ. ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವತ್ ಅವರನ್ನು ಚೀನಾದ ಏಜೆಂಟ್ ಮತ್ತು ದೇಶದ್ರೋಹಿ ಎಂದು ಕರೆದ ಅವರು, ಚೀನಾ ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡ ರೀತಿಯಲ್ಲಿ ಕರ್ನಾಟಕವನ್ನು ಪ್ರವೇಶಿಸುತ್ತಾರೆ ಎಂಬ ಅವರ ಹೇಳಿಕೆಗೆ ತಿರುಗೇಟು ನೀಡಿದರು.

Maharashtra border dispute: Resolution passed in Karnataka assembly

ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾರಾಷ್ಟ್ರದ ವಿರೋಧ ಪಕ್ಷದ ಶಾಸಕರು ಶಾಸನಸಭೆಯಲ್ಲಿ ಮತ್ತು ಹೊರಗಡೆ ಹದ್ದುಮೀರಿ, ಅಸಂಬದ್ಧ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ನೋಡಿದರೆ ಅವರು ಮಾನಸಿಕ ಸಮತೋಲನ ಕಳೆದುಕೊಂಡಿರಬೇಕು. ಆ ರಾಜ್ಯದ ಅಲ್ಲಿನ ವಿರೋಧ ಪಕ್ಷಗಳು ಇದೇ ವಿಚಾರದ ಮೇಲೆ ಅವರ ರಾಜಕಾರಣ ಮಾಡಲು ಹೊರಟಿದ್ದಾರೆ. ಹಿಂದೆಯೂ ಕಾಂಗ್ರೆಸ್ ನಾಯಕರು ರಾಜಕೀಯ ಲಾಭ ಪಡೆಯಲು ಹೋಗಿ ವಿಫಲರಾಗಿದ್ದಾರೆ. ಎರಡೂ ರಾಜ್ಯಗಳ ಜನ ಶಾಂತಿ ಸಾಮರಸ್ಯ ಕಾಪಾಡಿಕೊಂಡು, ವ್ಯಾಪಾರ ವ್ಯವಹಾರ, ಓಡಾಟ ಮಾಡುತ್ತಿರುವಾಗ ನೆರೆ ರಾಜ್ಯದವರು ಕರ್ನಾಟಕ ರಾಜ್ಯ ಪ್ರವೇಶಿಸಲು ಹೊರಟಿದ್ದಾರೆ ಎಂದರು.

English summary
The Karnataka Assembly on Thursday unanimously passed a resolution on the border dispute with Maharashtra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X