ಮಹದಾಯಿ ಬಿಕ್ಕಟ್ಟು : ಮಹಾ ಸಿಎಂ ಫಡ್ನವಿಸ್ ಮಧ್ಯಸ್ಥಿಕೆ!

Written By: Ramesh
Subscribe to Oneindia Kannada

ಬೆಂಗಳೂರು, ಅಕ್ಟೋಬರ್, 06 : ಸುಮಾರು ಮೂರು ದಶಕಗಳಿಂದ ನಡೆಯುತ್ತಿರುವ ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಎರಡು ರಾಜ್ಯಗಳ ಮಧ್ಯಪ್ರವೇಶಿಸಿ ಈ ಮಹದಾಯಿ ನದಿ ನೀರು ಹಂಚಿಕೆ ಬಿಕ್ಕಟ್ಟು ಇತ್ಯರ್ಥಗೊಳಿಸಲು ಮುಂದಾಗಿದ್ದಾರೆ.

ಮಹರಾಷ್ಟ್ರ ಸಿಎಂ ಫಡ್ನಾವಿಸ್ಅವರು ಗೋವಾ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳ ಸಭೆ ನಡೆಸಲು ಅ.21ಕ್ಕೆ ಮುಂಬೈನಲ್ಲಿ ಸಭೆ ಕರೆದಿದ್ದಾರೆ. ಈ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ ಪರ್ಸೇಕರ್ ಅವರಿಗೆಸಭೆಯಲ್ಲಿ ಪಾಲ್ಗೊಳ್ಳಿ ಎಂದು ಪತ್ರ ಬರೆದಿದ್ದಾರೆ.

River

ಪರ್ಸೇಕರ್ ಅವರು ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಅಕ್ಟೋಬರ್ 21ರಂದು ಮುಂಬೈನಲ್ಲಿ ಕರೆಯಲಾಗಿರುವ ಸಭೆಯಲ್ಲಿ ಕರ್ನಾಟಕ, ಹಾಗೂ ಗೋವಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ನೀರಾವರಿ ಮಂತ್ರಿಗಳು ಸೇರಿದಂತೆ ಸಬಂಧಿಸಿದ ಮುಖ್ಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಇತ್ತೀಚೆಗೆ ಮಹದಾಯಿ ನದಿ ನೀರಿನ ವಿವಾದದ ಬಗ್ಗೆ ಮೊದಲ ಸುತ್ತಿನ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದ್ದರು. ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದಿನಾಂಕ ನಿಗದಿಗೆ ಸಿದ್ದರಾಮಯ್ಯ ಮನವಿ ಮಾಡಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Maharashtra Chief Minister Devendra Fadnavis on Wednesday offered to mediate between Karnataka and Goa to resolve the long-standing Mahadayi river water-sharing dispute Meeting in Mumbai on Oct 21.
Please Wait while comments are loading...