ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ, ಹರ್ಯಾಣ ಫಲಿತಾಂಶ: ಅನರ್ಹ ಶಾಸಕರಿಗೆ ಇಕ್ಕಟ್ಟು

|
Google Oneindia Kannada News

Recommended Video

Karnataka Rebel MLA's is in Full Tension | Oneindia Kannada

ಬೆಂಗಳೂರು, ಅಕ್ಟೋಬರ್ 25: ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸದೇ ಇರುವುದು ಕರ್ನಾಟಕದಲ್ಲಿನ ಅನರ್ಹ ಶಾಸಕರ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮುಂಬರುವ ಉಪ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆಯನ್ನೇರಿ ಸುಲಭವಾಗಿ ಬಿಜೆಪಿಯಿಂದ ಗೆದ್ದು ಬರಬಹುದು ಎಂಬ ಲೆಕ್ಕಾಚಾರದಲ್ಲಿದ್ದ ಅನರ್ಹ ಶಾಸಕರಿಗೆ ಈ ಫಲಿತಾಂಶ ಸ್ವಲ್ಪ ಚಿಂತೆ ಉಂಟು ಮಾಡಿದೆ.

17 ಅನರ್ಹ ಶಾಸಕರಿಗೆ ಸುಪ್ರೀಂನಲ್ಲಿ ಹಿನ್ನಡೆ; ಅರ್ಜಿ ಸಂವಿಧಾನಿಕ ಪೀಠಕ್ಕೆ?17 ಅನರ್ಹ ಶಾಸಕರಿಗೆ ಸುಪ್ರೀಂನಲ್ಲಿ ಹಿನ್ನಡೆ; ಅರ್ಜಿ ಸಂವಿಧಾನಿಕ ಪೀಠಕ್ಕೆ?

ತಮ್ಮ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿನ ನಾಯಕತ್ವದ ವಿರುದ್ಧ ಸಡ್ಡು ಹೊಡೆದು ಹೊರ ಬಂದಾಗಿದೆ . ಅದಕ್ಕಾಗಿ ಶಾಸಕತ್ವವನ್ನೂ ಕಳೆದುಕೊಂಡಾಗಿದೆ. ಆದರೆ ಕಳೆದ ಮೂರು ತಿಂಗಳಿಂದ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗದೆ ಈಗ ಒಂದು ತಾರ್ಕಿಕ ಅಂತ್ಯ ಕಾಣುವ ಸಂದರ್ಭ ಬಂದಿದೆ.

Maharashtra Haryana Election Result The Dilemma For Disqualified MLAs

ಇಷ್ಟೆಲ್ಲಾ ಕಷ್ಟನಷ್ಟ ಅನುಭವಿಸಿದರೂ ಮುಂದೆ ಒಳ್ಳೆಯದಾಗಲಿದೆ. ಸುಲಭವಾಗಿ ಬಿಜೆಪಿಯಿಂದ ಗೆದ್ದು ಬರಬಹುದು ಎಂಬ ಕನಸು ಕಾಣುತ್ತಿದ್ದ ಅನರ್ಹ ಶಾಸಕರಿಗೆ ಗುರುವಾರ ಹೊರಬಿದ್ದಿದೆ.

ಆದರೆ, ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲೂ ಬಿಜೆಪಿ ಅಧಿಕಾರದಲ್ಲಿದ್ದು ಚುನಾವಣೆ ಎದುರಿಸಿದರೂ ನಿರೀಕ್ಷಿತ ಮಟ್ಟ ತಲುಪಲು ಸಾಧ್ಯವಾಗಿಲ್ಲ. ಅದು ಆಯಾ ರಾಜ್ಯ ಸರ್ಕಾರಗಳ ವೈಫಲ್ಯವೋ ಅಥವಾ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಆಡಳಿತ ವಿರುದ್ಧದ ಪರಿಣಾಮವೋ ಅಥವಾ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದ ವಿರುದ್ಧದ ಪರಿಣಾಮವೋ ಎಂಬುದನ್ನು ವಿಶ್ಲೇಷಿಸುವಲ್ಲಿ ಅನರ್ಹ ಶಾಸಕರು ತೊಡಗಿದ್ದಾರೆ.

ಎರಡು ರಾಜ್ಯಗಳ ಫಲಿತಾಂಶ ನಿರಾಸೆ ಮೂಡಿಸಿದ್ದರಲ್ಲಿ ಸಂಶಯವೇ ಇಲ್ಲ.ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಕೇಂದ್ರದಲ್ಲೂ ಅದೇ ಪಕ್ಷದ ಸರ್ಕಾರವಿದೆ. ಜನರು ಸುಲಭವಾಗಿ ತಮ್ಮನ್ನು ಮತ್ತೆ ಒಪ್ಪಿಕೊಳ್ಳುತ್ತಾರೆ ಎಂಬ ನಿರೀಕ್ಷೆಯನ್ನು ಈ ಶಾಸಕರು ಇಟ್ಟುಕೊಂಡಿದ್ದರು.

ಆದರೂ ಅನರ್ಹ ಶಾಸಕರು ಮೊದಲು ಹಾಕಿದ್ದ ಲೆಕ್ಕಾಚಾರದಂತೆ ಎಲ್ಲವೂ ನಡೆಯುವುದು ಅನುಮಾನ ಎಂಬ ವಾತಾವರಣ ನಿರ್ಮಾಣಗೊಳ್ಳುತ್ತಿದೆ. ಮೊದಲು ನ್ಯಾಯಾಲಯದಲ್ಲಿ ಜಯ ಗಳಿಸಬೇಕಿದೆ.

English summary
The BJP's lack of victories In Maharashtra and Haryana is a cause of concern for the Disqualified MLAs in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X