ಮಹಾರಾಷ್ಟ್ರ: ಕನ್ನಡಿಗ ಬಸ್ ಡ್ರೈವರಿಗೆ ಕೇಸರಿ ಬಳಿದ MES ಪುಂಡರು, ವಿಡಿಯೋ ವೈರಲ್!
ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ಭಾಗದಲ್ಲಿ ದಿನದಿಂದ ದಿನಕ್ಕೆ ಕನ್ನಡಿಗರ ಮೇಲೆ ದೌರ್ಜನ್ಯ ಹೆಚ್ಚಳವಾಗುತ್ತಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಮಧ್ಯಪ್ರವೇಶ ಮಾಡದೆ ಇರುವುದಕ್ಕೆ ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ನಡುವೆ ಮಹಾರಾಷ್ಟ್ರದಲ್ಲಿ ಸರ್ಕಾರಿ ಬಸ್‌ಗಳ ಡ್ರೈವರ್‌ಗಳ ಮೇಲೆ ದೌರ್ಜನ್ಯ ನಡೆಸುವುದು ಮುಂದುವರಿದಿದ್ದು ಭಾರೀ ವಿರೋಧ ವ್ಯಕ್ತವಾಗಿದೆ. ಇದರ ನಡುವೆ ಕರ್ನಾಟಕದ ಬಸ್ ಡ್ರೈವರ್‌ಗಳ ಮೇಲೆ ದೌರ್ಜನ್ಯ ಮುಂದುವರಿದಿರುವುದು ಭಾರೀ ವಿರೋಧಕ್ಕೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಈ ವಿಚಾರದಲ್ಲಿ ಯಾವುದೇ ಮುಂದಡಿಯನ್ನು ಇರಿಸದೆ ಇರುವುದು ಸಹ ಭಾರೀ ಆಕ್ರೋಶಕ್ಕೆ ಕಾರಣವಾಗುತ್ತಿದೆ.
ಕರ್ನಾಟಕದ ಬೆಳಗಾವಿಯಲ್ಲಿ ಮತ್ತೊಮ್ಮೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ನಡುವೆ ಗಡಿವಿವಾದ ಮೊದಲಿನಿಂದಲೂ ಇದೆ. ಆದರೆ, ಇದೀಗ ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಭಾಷಾ ವಿವಾದ ಸೃಷ್ಟಿಯಾಗಿದೆ. ಕರ್ನಾಟಕದ ಬಸ್ ಕಂಡಕ್ಟರ್‌ನ ಮೇಲೆ ಮರಾಠಿ ಪುಂಡರು ಹಲ್ಲೆ ಮಾಡಿರುವ ವಿಷಯ ತಣ್ಣಗಾಗುತ್ತಿಲ್ಲ. ಅಲ್ಲದೆ ಈ ಬೆಳವಣಿಗೆ ಬೆನ್ನಲ್ಲೇ ಕನ್ನಡಿಗರು ಮಹಾರಾಷ್ಟ್ರದ ಬಸ್‌ಗಳಿಗೆ ಮಸಿ ಬಳಿಯುವುದು ಹಾಗೂ ಕಂಡಕ್ಟರ್‌ಗೆ ಮಸಿ ಬಳಿದಿದ್ದಾರೆ ಎನ್ನಲಾದ ವಿಡಿಯೋಗಳು ಸಹ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಇದರ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಕನ್ನಡಿಗ ಬಸ್ ಡ್ರೈವರ್‌ಗಳಿಗೆ ಸಂಕಷ್ಟ ಎದುರಾಗಿದೆ.

ಮಹಾರಾಷ್ಟ್ರ ಹಾಗೂ ಕರ್ನಾಟಕದ ನಡುವೆ ಸೃಷ್ಟಿಯಾಗಿರುವ ಸಮಸ್ಯೆ ಸದ್ಯಕ್ಕೆ ಕಡಿಮೆಯಾಗುವ ಯಾವುದೇ ಲಕ್ಷಣಗಳು ಸಹ ಕಾಣಿಸುತ್ತಿಲ್ಲ. ಮಹಾರಾಷ್ಟ್ರ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಬರುವ ಸರ್ಕಾರಿ ಬಸ್‌ಗಳ ಸಂಚಾರವನ್ನು ಸ್ಥಗಿತ ಮಾಡಿದೆ. ಆದರೆ, ಕರ್ನಾಟಕದ ಬಸ್ ಸಂಚಾರ ಮುಂದುವರಿದಿದೆ. ಇದರಿಂದ ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಸಂಕಷ್ಟ ಎದುರಾಗಿದೆ.
ಸೋಮವಾರ ಕರ್ನಾಟಕದ ಬಸ್‌ಗಳ ಕಂಡಕ್ಟರ್ ಹಾಗೂ ಬಸ್ ಡ್ರೈವರ್‌ಗಳನ್ನು ನಡೆಸಿಕೊಂಡಿರುವ ವಿಧಾನಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಸೋಮವಾರ ನಡೆದಿದೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವೈರಲ್ ವಿಡಿಯೋದಲ್ಲಿ ಏನಿದೆ ?
ಕರ್ನಾಟಕದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಅನ್ನು ನಿಲ್ಲಿಸಿರುವ ಎಂಇಎಸ್ ಪುಂಡರು ಹಾಗೂ ಕೆಲವು ಮಾರಾಠಿಗರು, ಜೈ ಭವಾನಿ ಜೈ ಶಿವಾಜಿ ಎನ್ನುವ ಘೋಷಣೆಗಳನ್ನು ಕೂಗಿದ್ದಾರೆ. ಬಸ್ ನಿಲ್ಲಿಸಿ ಬಸ್ ಡ್ರೈವರ್ ಕೆಳಗೆ ಇಳಿಯುವಂತೆ ಮಾಡಿದ್ದಾರೆ. ಆ ಮೇಲೆ ಬಸ್ ಡ್ರೈವರ್ ಮುಖ ಹಾಗೂ ತಲೆಗೆ ಕೇಸರಿ ಬಳೆದಿದ್ದಾರೆ. ಅಲ್ಲದೆ ಜೈ ಮಹಾರಾಷ್ಟ್ರ ಎಂದು ಕರ್ನಾಟಕದ ಬಸ್‌ಗಳ ಮೇಲೆ ಬರೆಯಲಾಗಿದೆ. ಜೈ ಮಹಾರಾಷ್ಟ್ರ ಎನ್ನುವ ಘೋಷಣೆಗಳನ್ನು ಕೂಗಲಾಗಿದೆ. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು. ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈ ಎನ್ನುತ್ತಾ ಕರ್ನಾಟಕ ಸಾರಿಗೆ ಬಸ್ ಡ್ರೈವರ್ ಜೊತೆಗೆ ಮಹಾರಾಷ್ಟ್ರದಲ್ಲಿ ಅತ್ಯಂತ ಕೀಳು ಮಟ್ಟದಲ್ಲಿ ನಡೆದುಕೊಂಡಿದ್ದಾರೆ ಈ ಪುಂ*ಡರು.
— Belagavi - ಬೆಳಗಾವಿ (@BelagaviKA) February 24, 2025
ಕರ್ನಾಟಕ ಸರ್ಕಾರ ಇದರ ಬಗ್ಗೆ ಎಚ್ಚೆತ್ತುಕೊಳ್ಳದಿದ್ದರೆ, ಇದಕ್ಕಿಂತ ಘೋರ ಪಾಪ ಮತ್ತೊಂದಿಲ್ಲಾ. #belagavika #belagavi #iamwithmahadevanna pic.twitter.com/L3kyLJKVEj
ಮಸಿ - ಕೇಸರಿ: ಎರಡೂ ರಾಜ್ಯಗಳ ಬಸ್‌ಗಳ ಹಾಗೂ ಕಂಡಕ್ಟರ್ ಮತ್ತು ಡ್ರೈವರ್‌ಗಳ ಮೇಲೆ ಮಸಿ ಹಾಗೂ ಕೇಸರಿ ಬಳಿಯುವುದು ಮುಂದುವರಿದಿದೆ. ಈ ನಡುವೆ ಕರ್ನಾಟಕ ಸರ್ಕಾರವೇ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮಹಾರಾಷ್ಟ್ರ ಸರ್ಕಾರ ಆಗ್ರಹಿಸಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್












Click it and Unblock the Notifications