ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಂದು ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ್ ಠಾಕ್ರೆ ಬಾಲ ಬಿಚ್ಚುತ್ತಿರಲಿಲ್ಲ

|
Google Oneindia Kannada News

ಬೆಂಗಳೂರು, ಜ 18: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಗೆ ಪಕ್ಷಾತೀತವಾಗಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನವರೂ ಸರಣಿ ಟ್ವೀಟ್ ಗಳನ್ನು ಮಾಡಿ ಆಕ್ರೋಶ ಹೊರಹಾಕಿದ್ದಾರೆ.

Recommended Video

karkala , nippani , ಬೆಳಗಾವಿ ಮಹಾರಾಷ್ಟ್ರ ಗೆ ಸೇರಬೇಕಂತೆ !! | Oneindia Kannada

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡಾ ತಮ್ಮ ಸಿಟ್ಟನ್ನು ಹೊರಹಾಕಿದ್ದು, "ಅಂದು ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂಥ ಮಾತು ಆಡುತ್ತಿರಲಿಲ್ಲ"ಎಂದು ಟ್ವೀಟ್ ಮಾಡಿದ್ದಾರೆ.

ಹಿಂದೀವಾಲಾಗಳಿಗೆ ಯಡಿಯೂರಪ್ಪ ಸರಕಾರದ ಶರಣಾಗತಿಯ ಪರಮಾವಧಿ ಹಿಂದೀವಾಲಾಗಳಿಗೆ ಯಡಿಯೂರಪ್ಪ ಸರಕಾರದ ಶರಣಾಗತಿಯ ಪರಮಾವಧಿ

"ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ"ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ.

"ಬಹುತೇಕ ಕನ್ನಡಿಗ ರಾಜರು ಮಹಾರಾಷ್ಟ್ರದ ಬಹುಪಾಲನನ್ನು ಆಗಲೇ ಆಳಿದ್ದಾರೆ. ಕನ್ನಡಿಗರ ಸಾಹಸ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದೆ. ಉದ್ಧವ ಠಾಕ್ರೆ ಒಂದು ಬಾರಿ ಇತಿಹಾಸವನ್ನು ಅವಲೋಕಿಸಿದರೆ, ಈಗ ಯಾರು ಯಾರ ಪ್ರದೇಶಗಳನ್ನು ಆಕ್ರಮಿಸಿದ್ದಾರೆ ಎಂಬುದೂ ಗೊತ್ತಾಗುತ್ತದೆ. ಯಾರು ಯಾರ ಪ್ರದೇಶವನ್ನು ಬಿಟ್ಟುಕೊಡಬೇಕೆಂಬುದೂ ತಿಳಿಯುತ್ತದೆ"ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸೊಲ್ಲಾಪುರ, ಸಾಂಗ್ಲಿ ಮಹಾರಾಷ್ಟ್ರ ಆಕ್ರಮಿತ ಪ್ರದೇಶ: ಬಸವರಾಜ್ ಬೊಮ್ಮಾಯಿಸೊಲ್ಲಾಪುರ, ಸಾಂಗ್ಲಿ ಮಹಾರಾಷ್ಟ್ರ ಆಕ್ರಮಿತ ಪ್ರದೇಶ: ಬಸವರಾಜ್ ಬೊಮ್ಮಾಯಿ

ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ

ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ

"ಬೆಳಗಾವಿಯಲ್ಲಿ ಕನ್ನಡ ಹೋರಾಟಗಾರರು ನೆಟ್ಟಿದ್ದ ಕನ್ನಡ ಧ್ವಜ ತೆರವು ಮಾಡಬೇಕು ಎಂದು ವಾದಿಸಿದ್ದ ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಲು ಸಾಧ್ಯವಾಗುತ್ತಿರಲಿಲ್ಲ. ಎಂಇಎಸ್‌ ಅನ್ನು ಪರೋಕ್ಷವಾಗಿ ಬೆಂಬಲಿಸುತ್ತಿರುವವರಿಂದ ಪ್ರೇರಣೆ ಪಡೆದೇ ಉದ್ಧವ ಠಾಕ್ರೆ ಇಂಥ ಮಾತುಗಳನ್ನು ಆಡಿದ್ದಾರೆ" - ಕುಮಾರಸ್ವಾಮಿ ಟ್ವೀಟ್.

ಗಡಿ ವಿವಾದದಲ್ಲಿ ಮಹಾಜನ ಆಯೋಗದ ತೀರ್ಪೇ ಅಂತಿಮ

ಗಡಿ ವಿವಾದದಲ್ಲಿ ಮಹಾಜನ ಆಯೋಗದ ತೀರ್ಪೇ ಅಂತಿಮ

"ಗಡಿ ವಿವಾದದಲ್ಲಿ ಮಹಾಜನ ಆಯೋಗದ ತೀರ್ಪೇ ಅಂತಿಮ. ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ದೇಶದ್ರೋಹಿ ಕೃತ್ಯ ಎಂದೆನ್ನಬೇಕಾಗುತ್ತದೆ. ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ" ಎನ್ನುವ ಎಚ್ಚರಿಕೆಯನ್ನು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ನೀಡಿದ್ದಾರೆ.

ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು

ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು

"ಬೆಳಗಾವಿ ಸಾಂಸ್ಕೃತಿಕವಾಗಿ, ಆಡಳಿತಾತ್ಮಕವಾಗಿ ಕರ್ನಾಟಕದ ಹೆಗ್ಗುರುತು. ಬೆಳಗಾವಿಯ ಬಗ್ಗೆ ಪದೇ ಪದೆ ಕಿತಾಪತಿ ಮಾಡುವ ಎಂಇಎಸ್‌ ಮತ್ತು ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ಕೊಡಬೇಕೆಂದೇ ನಾನು ಸಿಎಂ ಆಗಿದ್ದಾಗ ಅಲ್ಲಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿತ್ತು. ಅದು, ಬೆಳಗಾವಿ ನಮ್ಮ ಅವಿಭಾಜ್ಯ ಅಂಗ ಎಂಬುದರ ದ್ಯೋತಕ ಎಂಬುದನ್ನು ಠಾಕ್ರೆ ಅರಿಯಲಿ".

"ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿದ್ದು ಮಾತ್ರವಲ್ಲ, ಅಲ್ಲಿ ವಿಧಾನಸಭೆ ಅಧಿವೇಶನ ನಡೆಯಬೇಕೆಂದು ತೀರ್ಮಾನಿಸಲಾಯಿತು. ಸುವರ್ಣ ಸೌಧ ಮಹಾರಾಷ್ಟ್ರಕ್ಕೆ ಪ್ರತ್ಯುತ್ತರವಾಗಿ ನಿಂತಿರುವ ಒಂದು ನಿರ್ಮಿತಿ. ಅದನ್ನು ಅರಿಯುವ ವಿಚಾರದಲ್ಲಿ ನಮ್ಮಲ್ಲಿನ ಕೆಲವರೂ ಎಡವಿದ್ದಾರೆ ಎಂಬುದೂ ವಾಸ್ತವ. ಅದರ ಸಮರ್ಪಕ ಬಳಕೆಯಿಂದ ಮಾತ್ರ ಅದರ ಉದ್ದೇಶ ಸಾಕಾರ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಾದರೆ

ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಾದರೆ

"ಬೆಳಗಾವಿ ನಮ್ಮದೆಂಬ ಮಹಾರಾಷ್ಟ್ರಕ್ಕೆ ತಿರುಗೇಟು ನೀಡುವುದು ಒಂದೆಡೆ ಇರಲಿ. ಆದರೆ, ಅಲ್ಲಿನ ಜನರಲ್ಲಿ ಕನ್ನಡಾಭಿಮಾನ ಉತ್ಕಟವಾಗಿದೆ. ಚಿಕ್ಕೋಡಿಯ ಕನ್ನಡ ಪ್ರೇಮಿಗಳಾದ ಸಿದ್ದಗೌಡ-ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗುವಿಗೆ 'ಕನ್ನಡದ ವೃದ್ಧಿ' ಎಂಬ ಹೆಸರಿಟ್ಟಾದರೆ. ಇದು ಅಲ್ಲಿನ ಕನ್ನಡಾಭಿಮಾನಕ್ಕೆ ಸಾಕ್ಷಿ. ಆ ದಂಪತಿಗೆ ನನ್ನ ನಮನ"ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

English summary
Maharasthra CM Uddhav Thackeray Statement, Former CM HD Kumaraswamy Series Of Tweet,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X