Mahesh Shetty Thimarody Arrest: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ: ಅಚ್ಚರಿ ಹೇಳಿಕೆ ಬಹಿರಂಗ!
ಮಂಗಳೂರು, ಆಗಸ್ಟ್ 21: ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳ್ತಂಗಡಿಯ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲೇ ಉಡುಪಿ ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ದಾಖಲಾದ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ.
ಎಎಸ್ಪಿ ಸುಧಾಕರ್ ನಾಯಕ್ ನೇತೃತ್ವದಲ್ಲಿ ಆರು ಜೀಪ್‌ಗಳಲ್ಲಿ ಆಗಮಿಸಿದ ಪೊಲೀಸ್ ತಂಡವು ತಿಮರೋಡಿಯನ್ನು ಅವರ ಮನೆಯಿಂದಲೇ ಕಾರಿನಲ್ಲಿ ಕರೆದೊಯ್ದಿದೆ. ಈ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಕೆಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಉಡುಪಿ ಪೊಲೀಸರ ತಂಡ ಬೆಳ್ತಂಗಡಿಗೆ ಆಗಮಿಸಿದ್ದು, ಎಎಸ್ಪಿ ಸುಧಾಕರ್ ನಾಯಕ್, ಮಣಿಪಾಲ ಇನ್ ಸ್ಪೆಕ್ಟರ್, ಮಹೇಶ್ ಪ್ರಸಾದ್, ಡಿವೈಎಸ್ಪಿ ಪ್ರಭು ಡಿ.ಟಿ,ಬ್ರಹ್ಮಾವರ, ಇನ್ ಸ್ಪೆಕ್ಟರ್ ಗೋಪಿ ಕೃಷ್ಣ,ಕಾರ್ಕಳ ಗ್ರಾಮಂತರ ಪ್ರಸನ್ನ ಕುಮಾರ್ ಒಳಗೊಂಡ ತಂಡ ಆಗಮಿಸಿ ವಶಕ್ಕೆ ಪಡೆದಿದ್ದಾರೆ.

ಇನ್ನೂ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿತ್ತು. ಈ ದೂರಿನನ್ವಯ ಮಹೇಶ್ ಶೆಟ್ಟಿ ತಿಮರೋಡಿಯವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸ್ ತಂಡವು ಮಹೇಶ್ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆಯುವ ಉದ್ದೇಶದಿಂದ ಕಾರ್ಯಾಚರಣೆಯನ್ನು ಆರಂಭಿಸಿತು. ನಂತರ ತಿಮರೋಡಿ ನಿವಾಸದಲ್ಲಿ ಭಾರೀ ಹೈಡ್ರಾಮಾ ಸೃಷ್ಟಿಯಾದರೂ ಪೊಲೀಸರು ವಶಕ್ಕೆ ಪಡೆದು ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಮಹೇಶ್ ಶೆಟ್ಟಿ ತಿಮರೋಡಿ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದಡಿ ಬ್ರಹ್ಮಾವರದಲ್ಲಿ ಪ್ರಕರಣ ದಾಖಲಾಗಿದೆ. ಬಿ ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಹಿನ್ನೆಲೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ವಶಕ್ಕೆ ಪಡೆದಿದ್ದಾರೆ. ಈ ಆರೋಪವು ಸಾಮಾಜಿಕ ಜಾಲತಾಣದಲ್ಲಿ ತಿಮರೋಡಿಯ ಪೋಸ್ಟ್‌ಗಳಿಗೆ ಸಂಬಂಧಿಸಿದ್ದು, ಧರ್ಮಸ್ಥಳದ ಧಾರ್ಮಿಕ ಮತ್ತು ಸಾಮಾಜಿಕ ಮೌಲ್ಯಗಳನ್ನು ಅವಮಾನಿಸುವ ಉದ್ದೇಶದಿಂದ ಮಾಡಲಾದ ಕೃತ್ಯವೆಂದು ಬಿಜೆಪಿ ದೂರಿದೆ. ಈ ಹಿನ್ನೆಲೆಯಲ್ಲಿ, ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಾನೂನು ಕ್ರಮಕ್ಕಾಗಿ ತಿಮರೋಡಿಯನ್ನು ವಶಕ್ಕೆ ಪಡೆಯಲಾಗಿದೆ.
ಇನ್ನೂ ವಶಕ್ಕೆ ಪಡೆಯುವ ವೇಳೆ ಮಾತನಾಡಿದ ತಿಮರೋಡಿ, ಸುಳ್ಳು ಕೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ. ಬಿಜೆಪಿಯವರ ಸುಳ್ಳು ದಾಖಲೆ. ಬಿಜೆಪಿಯವರ ಪಾಪದ ಕೂಸು, ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿದ್ದಾರೆ. ಸ್ಟೇಷನ್ ನಲ್ಲಿ ಪೊಲೀಸ್ರಿಗೆ ಹೇಳಿಕೆ ಕೊಡುತ್ತೇನೆ. ಸರಿಯಾದ ನ್ಯಾಯ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.












Click it and Unblock the Notifications