Breaking; ಮಹಿಳಾ ಕಾಂಗ್ರೆಸ್‌ನಲ್ಲಿ ಭಿನ್ನಮತ, ಟ್ವೀಟ್ ಬಾಣ ಬಿಟ್ಟ ಬಿಜೆಪಿ
ಬೆಂಗಳೂರು, ಅಕ್ಟೋಬರ್ 27; ಕರ್ನಾಟಕ ಮಹಿಳಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟವಾಗಿದೆ. ಅಧ್ಯಕ್ಷೆ ಪುಷ್ಪಾ ಅಮರನಾಥ್‌ರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಒತ್ತಾಯಿಸಲಾಗಿದೆ.
ಮಹಿಳಾ ಕಾಂಗ್ರೆಸ್ ಭಿನ್ನಮತದ ಕುರಿತು ಕರ್ನಾಟಕ ಬಿಜೆಪಿ ಸರಣಿ ಟ್ವೀಟ್ ಮಾಡಿದೆ. ರಾಜ್ಯದಲ್ಲಿ, ಅತ್ತ ರಾಹುಲ್ ಗಾಂಧಿ ಅವರ ಜೋಡೋ ಯಾತ್ರೆ ಮುಗಿಯುತ್ತಿದ್ದಂತೆ ಇತ್ತ ಕೆಪಿಸಿಸಿಯಲ್ಲಿ #CongressTodoYatra ಗೆ ಕ್ಷಣಗಣನೆ ಆರಂಭವಾಗಿದೆ ಎಂದು ಲೇವಡಿ ಮಾಡಿದೆ.
ರಾಜ್ಯದಲ್ಲಿ, ಅತ್ತ @RahulGandhi ಅವರ ಜೋಡೋ ಯಾತ್ರೆ ಮುಗಿಯುತ್ತಿದ್ದಂತೆ ಇತ್ತ ಕೆಪಿಸಿಸಿಯಲ್ಲಿ #CongressTodoYatra ಗೆ ಕ್ಷಣಗಣನೆ ಆರಂಭವಾಗಿದೆ. pic.twitter.com/zQ4Yi5OJwo
— BJP Karnataka (@BJP4Karnataka) October 27, 2022
ಮಹಿಳೆಯರಿಗೆ ಕರ್ನಾಟಕ ಕಾಂಗ್ರೆಸ್ ಗೌರವ ನೀಡುತ್ತಿಲ್ಲವೆಂದು ಕಾಂಗ್ರೆಸ್ ಮಹಿಳಾ ಜಿಲ್ಲಾಧ್ಯಕ್ಷರು ಆರೋಪ ಮಾಡುತ್ತಿದ್ದಾರೆ. ನಕಲಿ ಗಾಂಧಿ ಕುಟುಂಬದ ಮಹಿಳೆಯರು ಮಾತ್ರ ಪ್ರಧಾನಿಯಾಗಬೇಕು, ಪಕ್ಷದ ಅಧ್ಯಕ್ಷರಾಗಬೇಕು, ಉನ್ನತ ಹುದ್ದೆ ಹೊಂದಿರಬೇಕು ಎನ್ನುವುದು ಕಾಂಗ್ರೆಸ್ ಪಕ್ಷದ ಮಹಿಳಾ ಸಬಲೀಕರಣವೇ? ಎಂದು ಬಿಜೆಪಿ ಪ್ರಶ್ನೆ ಮಾಡಿದೆ. ಈ ಟ್ವೀಟ್‌ಗಳಿಗೆ ಮಹಿಳಾವಿರೋಧಿಕಾಂಗ್ರೆಸ್ ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿದೆ.

ಗುರುವಾರ 50ಕ್ಕೂ ಹೆಚ್ಚು ಮಹಿಳಾ ಕಾಂಗ್ರೆಸ್ ಸದಸ್ಯರು ಪುಷ್ಪಾ ಅಮರನಾಥ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಪೋಸ್ಟರ್ ಹಿಡಿದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದರು. ಪುಷ್ಪಾ ಅಮರನಾಥ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಧ್ಯಕ್ಷ ಸ್ಥಾನದಿಂದ ಅವರನ್ನು ವಜಾಗೊಳಿಸಿ, ಪ್ರಮಾಣಿಕರಿಗೆ ಅವಕಾಶ ನೀಡಿ ಎಂದು ಒತ್ತಾಯಿಸಿದರು.
ಪುಷ್ಪಾ ಅಮರನಾಥ್ ಕೆಲವು ದಿನಗಳ ಹಿಂದೆ 11 ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೂಚನೆ ಧಿಕ್ಕರಿಸಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಸದಸ್ಯರು ಆರೋಪ ಮಾಡುತ್ತಿದ್ದಾರೆ.
ಪುಷ್ಪಾ ಅಮರನಾಥ್ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಮೂರು ವರ್ಷ ಕಳೆದಿದೆ. ಅಧಿಕಾರಾವಧಿ ಫೆಬ್ರವರಿಯಲ್ಲಿಯೇ ಅಂತ್ಯಗೊಂಡಿದೆ. ಅವರನ್ನು ಬದಲಾವಣೆ ಮಾಡಿ ಬೇರೆಯವರಿಗೆ ಅವಕಾಶ ನೀಡಿ ಎಂದು ಆಗ್ರಹಿಸಲಾಗಿದೆ.












Click it and Unblock the Notifications