ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಪ ಚುನಾವಣೆ ಬಳಿಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ!

|
Google Oneindia Kannada News

ಬೆಂಗಳೂರು, ಏಪ್ರಿಲ್ 9; ಬೆಳಗಾವಿ ಲೋಕಸಭೆ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 17ರಂದು ನಡೆಯಲಿದೆ. ಉಪ ಚುನಾವಣೆ ಬಳಿಕ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಗಳು ನಡೆಯುವ ಸಾಧ್ಯತೆ ಇದೆ.

ಏಪ್ರಿಲ್ 18ರಂದು ಕರ್ನಾಟಕ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಕುರಿತು ಈಗಾಗಲೇ ಸುಳಿವು ನೀಡಿದ್ದಾರೆ. ಸಭೆಯಲ್ಲಿ ಪ್ರಸ್ತು ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಹೇಳಿದ್ದಾರೆ.

ಮೈಸೂರು ಜಿಲ್ಲಾ ಉಸ್ತುವಾರಿ ಮೇಲೆ ಸಿ. ಪಿ. ಯೋಗೇಶ್ವರ್ ಕಣ್ಣು?ಮೈಸೂರು ಜಿಲ್ಲಾ ಉಸ್ತುವಾರಿ ಮೇಲೆ ಸಿ. ಪಿ. ಯೋಗೇಶ್ವರ್ ಕಣ್ಣು?

ಕೋರ್ ಕಮಿಟಿ ಸಭೆಯಲ್ಲಿ ಹಲವಾರು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಮೂಲ ಬಿಜೆಪಿ ಶಾಸಕರು?ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಮೂಲ ಬಿಜೆಪಿ ಶಾಸಕರು?

ಪ್ರಮುಖವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಆಗಲಿದೆ ಎಂಬ ಸುದ್ದಿ ಹಬ್ಬಿದೆ. ಯಡಿಯೂರಪ್ಪ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಉಪ ಚುನಾವಣೆ ಮುಗಿದ ಬಳಿಕ ಅದನ್ನು ಬಿಡುಗಡೆಗೊಳಿಸುವ ನಿರೀಕ್ಷೆ ಇದೆ.

ಯತ್ನಾಳ್ ಭವಿಷ್ಯದ ಬಗ್ಗೆ ರೇಣುಕಾಚಾರ್ಯ ಟ್ವೀಟ್! ಯತ್ನಾಳ್ ಭವಿಷ್ಯದ ಬಗ್ಗೆ ರೇಣುಕಾಚಾರ್ಯ ಟ್ವೀಟ್!

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಲಿದ್ದಾರೆ. ಹೊಸದಾಗಿ ಸಂಪುಟಕ್ಕೆ ಸೇರಿರುವ ಮುರುಗೇಶ್ ನಿರಾಣಿ, ಉಮೇಶ್ ಕತ್ತಿ, ಎಂಟಿಬಿ ನಾಗರಾಜ್, ಆರ್. ಶಂಕರ್ ಅವರಿಗೆ ಯಾವುದೇ ಜಿಲ್ಲೆಗಳ ಉಸ್ತುವಾರಿ ನೀಡಿಲ್ಲ. ಹೊಸ ಪಟ್ಟಿಯಲ್ಲಿ ಈ ಸಚಿವರಿಗೂ ಸಹ ಅವಕಾಶ ನೀಡಲಿದ್ದು, ಕೆಲವು ಜಿಲ್ಲೆಗಳ ಉಸ್ತುವಾರಿಗಳು ಬದಲಾಗಲಿದ್ದಾರೆ.

ಸಚಿವರ ವಿರುದ್ಧ ದೂರು

ಸಚಿವರ ವಿರುದ್ಧ ದೂರು

ವಿಧಾನಸಭೆ ಅಧಿವೇಶನದ ಸಂದರ್ಭದಲ್ಲಿ 40ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪಗೆ ದೂರು ನೀಡಿದ್ದಾರೆ. ಸಚಿವರು ನಮ್ಮ ಕೈಗೆ ಸಿಗುತ್ತಿಲ್ಲ, ಕ್ಷೇತ್ರದ ಕೆಲಸ ಮಾಡಿಕೊಡುತ್ತಿಲ್ಲ ಎಂಬುದು ಪ್ರಮುಖವಾದ ದೂರಾಗಿದೆ. ಈ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ.

ಯತ್ನಾಳ್ ವಿರುದ್ಧ ಕ್ರಮ ಏಕಿಲ್ಲ?

ಯತ್ನಾಳ್ ವಿರುದ್ಧ ಕ್ರಮ ಏಕಿಲ್ಲ?

ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿರುದ್ಧ ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದಾರೆ. ಆದರೆ, ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಪಕ್ಷಗಳು ಸಹ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಶ್ನಿಸುತ್ತಿವೆ. ಈ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.

Recommended Video

ಮಸ್ಕಿ ಕ್ಷೇತ್ರದಲ್ಲಿ ಸಿಎಂ ಮತ್ತೊಂದು ಸುತ್ತಿನ ಮತಬೇಟೆ | Oneindia Kannada
ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ

ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ

ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಶೀಘ್ರದಲ್ಲೇ ಘೋಷಣೆಯಾಗಲಿದೆ. ಚುನಾವಣೆಯಲ್ಲಿ ಗೆಲ್ಲಲು ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಯಲಿದೆ.

English summary
Karnataka BJP core committee meeting may held on April 18, 2021. District in-charge minister may changed after the meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X