Get Updates
Get notified of breaking news, exclusive insights, and must-see stories!

Transfer: ಲೋಕಸಭಾ ಚುಣಾವಣೆ ಏಫೆಕ್ಟ್;‌ ಮತ್ತೆ ಡಿವೈಎಸ್‌ಪಿ, ಇನ್‌ಸ್ಪೆಕ್ಟರ್‌ಗಳ ವರ್ಗಾವಣೆ

ಬೆಂಗಳೂರು, ಫೆಬ್ರವರಿ 01: ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಮೇಜರ್‌ ಸರ್ಜರಿ ಮಾಡುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ 13 ಡಿವೈಎಸ್‌ಪಿಗಳು ಹಾಗೂ 30 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಲಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ಪೊಲೀಸ್‌ ಇಲಾಖೆಯಲ್ಲಿ ಮೇಜರ್‌ ಸರ್ಜರಿ ಮಾಡಿದ್ದು, ಬರೋಬ್ಬರಿ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐವರು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯನ್ನು ರದ್ದು ಮಾಡಲಾಗಿದೆ. ಕೆಲವು ಇನ್ಸ್‌ಪೆಕ್ಟರ್‌ಗಳ ಸ್ಥಳ ಬದಲಾವಣೆ ಆಗಿದೆ.

Major Surgery In The Police Department Transfer Of 13 DySPs And 30 Inspectors

ವರ್ಗಾವಣೆಯಾದವರ ಪಟ್ಟಿ ಇಲ್ಲಿದೆ

1.ಶೇಖರ್ ಜಿ. - ಜಾಲಹಳ್ಳಿ ಸಂಚಾರ ಪೊಲೀಸ್ ಠಾಣೆ, ಬೆಂಗಳೂರು
2.ಶಿವಕುಮಾರ್ ಪಿ, - ಬೈಯಪ್ಪನಹಳ್ಳಿ ಪೊಲೀಸ್ ಠಾಣೆ, ಬೆಂಗಳೂರು
3.ಸತೀಶ್ ಕುಮಾರ್, ಗಿರಿನಗರ ಪೊಲೀಸ್ ಠಾಣೆ, ಬೆಂಗಳೂರು
4.ಯೇರಿಸ್ವಾಮಿ ಈ, ಕಾಟನ್ ಪೇಟೆ ಪೊಲೀಸ್ ಠಾಣೆ, ಬೆಂಗಳೂರು
5.ತಿಪ್ಪೇಸ್ವಾಮಿ ಬಿ.ಎಂ, ಆನೇಕಲ್ ಪೊಲೀಸ್ ಠಾಣೆ
6.ಸತೀಶ್ ಬಿ.ಎಸ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ
7.ಗೋವಿಂದರಾಜು, ಪುಲಕೇಶಿ ನಗರ ಪೊಲೀಸ್ ಠಾಣೆ, ಬೆಂಗಳೂರು

ಈ ಏಳು ಜನ ಅಧಿಕಾರಿಗಳು ಸೇರಿದಂತೆ 25 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಲಾಗಿದೆ.

ಈ ಐವರು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ರದ್ದು

1.ನರೇಂದ್ರ ಬಾಬು, ಸಿಐಡಿಯಿಂದ ಕಾಟನ್‌ಪೇಟೆಗೆ ವರ್ಗಾವಣೆ ಆಗಿದ್ದ ಇನ್ಸ್‌ಪೆಕ್ಟರ್‌
2.ಐಯಣ್ಣ ರೆಡ್ಡಿ ಬಿ. ಹೆಬ್ಬಗೋಡಿಯಿಂದ ವರ್ಗಾವಣೆ ಆಗಿದ್ದ ಇನ್ಸ್‌ಪೆಕ್ಟರ್‌
3.ಮುನಿರೆಡ್ಡಿ ವಿ, ಪರಪ್ಪನ ಅಗ್ರಹಾರಕ್ಕೆ ವರ್ಗಾವಣೆ ಆಗಿದ್ದ ಇನ್ಸ್‌ಪೆಕ್ಟರ್‌
4.ಸುಬ್ರಮಣ್ಯ ಸ್ವಾಮಿ ಎಂ.ಎಲ್, ವಿವಿ ಪುರಂ ಸಂಚಾರ ಠಾಣೆಯಿಂದ ವರ್ಗಾವಣೆಯಾಗಿದ್ದ ಇನ್ಸ್‌ಪೆಕ್ಟರ್‌
5.ಮುನಿಕೃಷ್ಣ ಡಿ.ಎಚ್, ಮಾಸ್ತಿ ಪೊ.ಠಾಣೆಗೆ ವರ್ಗಾವಣೆ ಆಗಿದ್ದ ಇನ್ಸ್‌ಪೆಕ್ಟರ್‌

Major Surgery In The Police Department Transfer Of 13 DySPs And 30 Inspectors

ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಬರೋಬ್ಬರಿ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದ ವಿವಿಧೆಡೆ 33 ಡಿವೈಎಸ್ಪಿಗಳು ಹಾಗೂ 132 ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದೆ. ಇದರ ಬೆನ್ನಲ್ಲೇ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮೇಜರ್​ ಸರ್ಜರಿ ಮಾಡಿದೆ.

ಮೂರ್ತಿ- ಮಲ್ಲೇಶ್ವರಂ ಠಾಣೆ, ಪ್ರಭುಗೌಡ ಎಸ್‌. ಪಾಟೀಲ್‌-ಆಡುಗೋಡಿ ಸಂಚಾರ ಠಾಣೆ, ಶಿವಪ್ಪ ಎಂ.ನಾಯ್ಕರ್‌-ರಾಮಮೂರ್ತಿನಗರ ಠಾಣೆ, ಶಿವಪ್ಪ -ವೈಟ್‌ಫೀಲ್ಡ್‌ ಠಾಣೆ, ರಮಾದೇವಿ ಬಿ.ಎಸ್‌.ಮಹದೇವಪುರ ಠಾಣೆ, ವಿನೂತ್‌ ಎಚ್‌.ಎಂ.-ಬಸವನಗುಡಿ ಠಾಣೆ, ಶ್ರೀನಿವಾಸ್‌ ಪ್ರಸಾದ್- ಹುಳಿಮಾವು ಠಾಣೆಗೆ ಸೇರಿ 218 ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವೂ 33 ಡಿವೈಎಸ್ಪಿಗಳು ಹಾಗೂ 132 ಇನ್ಸ್‌ಪೆಕ್ಟರ್ಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯು.ಡಿ.ಕೃಷ್ಣಕುಮಾರ್-ಡಿವೈಎಸ್​ಪಿ, ಬಿಡಿಎ, ಬೆಂಗಳೂರು. ಟಿ.ಎಂ.ಶಿವಕುಮಾರ್-ಎಸಿಪಿ, ಮಡಿವಾಳ ಉಪವಿಭಾಗ. ಹೆಚ್.ಬಿ.ರಮೇಶ್ ಕುಮಾರ್-ACP, ವಿವಿ ಪುರಂ ಉಪವಿಭಾಗ. ಎಂ.ಎನ್.ನಾಗರಾಜ್-ಎಸಿಪಿ, ಸಿಸಿಬಿ ಬೆಂಗಳೂರು. ಅನುಷಾರಾಣಿ-ACP, ಡಿಸಿಆರ್​ಇ, ಮೈಸೂರು ಸೇರಿದಂತೆ ಒಟ್ಟು 33 DySPಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಪೊಲೀಸ್ ಇಲಾಖೆಯಲ್ಲಿ ಅನೇಕ ಅಧಿಕಾರಿಗಳ ವರ್ಗಾವಣೆಯಾಗಿದೆ. ಸಂಪಂಗಿರಾಮನಗರ ಪೊಲೀಸ್​ ಠಾಣೆ ಇನ್ಸ್​ಪೆಕ್ಟರ್ ರವಿಕಿರಣ್, ರಾಮನಗರ ಕುಂಬಳಗೋಡು ಠಾಣೆ ಇನ್ಸ್​​ಪೆಕ್ಟರ್ ಮಂಜುನಾಥ್ ಜಿ ಹೂಗಾರ್. ಕಾಟನ್​ಪೇಟೆ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ನರೇಂದ್ರ ಬಾಬು, ಸಿಸಿಬಿ ಬೆಂಗಳೂರು ಇನ್ಸ್​ಪೆಕ್ಟರ್ ಕೆ.ಲಕ್ಷ್ಮೀ ನಾರಾಯಣ್, ಹಲಸೂರು ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ಸಂತೋಷ್ ಕೆ, ಜಯನಗರ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ದೀಪಕ್ ಆರ್ ಸೇರಿ ಒಟ್ಟು 132 ಇನ್ಸ್​ಪೆಕ್ಟರ್​ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+