ರಾಜ್ಯದ ಬಹುನಿರೀಕ್ಷಿತ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಮಹತ್ವದ ಅಪ್ಡೇಟ್ಸ್ ಹಾಗೂ ಅನುಕೂಲಗಳು
National Highway: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ವಿಚಾರದಲ್ಲಿ ದೊಡ್ಡ ಮಟ್ಟದ ಕ್ರಾಂತಿಯೇ ಆಗುತ್ತಿದೆ. ಹಾಗೆಯೇ ಇದೀಗ ಈ ಭಾಗಗಳಲ್ಲಿ ಅತೀ ಅವಶ್ಯ ಇರುವ ಹೆದ್ದಾರಿ ಯೋಜನೆಗಳ ಮಹತ್ವದ ಅಪ್ಡೇಟ್‌ವೊಂದು ಹೊರಬಿದ್ದಿದೆ. ಹಾಗಾದ್ರೆ ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಕೆಲ ರಾಷ್ಟ್ರೀಯ ಹೆದ್ದಾರಿಗಳು ಲೋಕಾರ್ಪಣೆ ಹಂತದಲ್ಲಿದ್ದರೆ, ಇನ್ನೂ ಹಲವು ಕಾಮಗಾರಿ ಆರಂಭದ ಹಂತದಲ್ಲಿವೆ. ಈಗಾಗಲೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಲೋಕಾರ್ಪಣೆಗೊಂಡಯ ವಾಹನಗಳು ಸಂಚಾರ ಮಾಡುತ್ತಿದ್ದು, ಟೋಲ್ ಶುಲ್ಕ ಪ್ರಗತಿಯಲ್ಲಿದೆ. ಮತ್ತೊಂದೆಡೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಹಂತದಲ್ಲಿದೆ. ಈ ನಡುವೆಯೇ ಬಹುನಿರೀಕ್ಷಿತ ಹೆದ್ದಾರಿ ಯೋಜನೆಯ ಮಹತ್ವದ ಅಪ್ಡೇಟ್‌ವೊಂದು ಹೊರಬಿದ್ದಿದೆ.

ಹೌದು.. ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಅತೀ ಅವಶ್ಯ ಇರುವ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಈಗಾಗಲೇ ಪ್ರಸ್ತಾವನೇ ಸಲ್ಲಕೆ ಮಾಡಲಾಗಿತ್ತು. ಇದೀಹ ಶೀಘ್ರವೇ ಈ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಸಂಸದ ಗೋವಿಂದ ಎಂ.ಕಾರಜೋಳ ಅವರು ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜೀವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ-150ಎ ಚಳ್ಳಕೆರೆ ಮೂಲಕ ಹಾದುಹೋಗಲಿದೆ. ಈ ವ್ಯಾಪ್ತಿಯಲ್ಲಿ ಅಂದಾಜು 9 ಕಿಲೋ ಮೀಟರ್ ಹೆದ್ದಾರಿಯನ್ನು ಅಭಿವೃದ್ಧಿಪಡಿಸಲಾಗುತ್ತದೆ. ರಾಷ್ಟ್ರೀಯ ಹೆದ್ದಾರಿ 48 ಹಾಗೂ 150ಎ ಹಿರಿಯೂ ನಗರದ ಹೊರಭಾಗದಲ್ಲಿ ಬೇರ್ಪಡಲಿದ್ದು, ಇಲ್ಲಿ ಕ್ಲೋವರ್ ಲೀಫ್ ಜಂಕ್ಷನ್ ನಿರ್ಮಾಣ ಮಾಡಬೇಕಿದೆ ಎಂದು ಹೇಳಿದರು.
ಮೊಳಕಾಲ್ಮೂರು ಹೊರಭಾಗದಲ್ಲಿ ಬೈಪಾಸ್ ರಸ್ತೆ ನಿರ್ಮಾಣ, ಭಾರತ್ ಮಾಲಾ ಪರಿಯೋಜನೆಯಡಿ ನಿರ್ಮಾಣ ಆಗುತ್ತಿರುವ ಚಳ್ಳಕೆರೆ-ಹಿರಿಯೂರು ಮಧ್ಯದ ಹೆದ್ದಾರಿಯಲ್ಲಿ ಉಂಟಾಗುತ್ತಿರುವ ಹಲವು ಸಮಸ್ಯೆಗಳಿಗೆ ಔಷಧಿ ಆಗಲಿದೆ. ರಾಷ್ಟ್ರೀಯ ಹೆದ್ದಾರಿ 48ರ ಚಿಕ್ಕನಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ, ಶಿರಾದಲ್ಲಿ ಬಾಕಿ ಉಳಿದ 3.90 ಕಿಲೋ ಮೀಟರ್ ಸರ್ವೀಸ್ ರಸ್ತೆ ಪೂರ್ಣಗೊಳಿಲಾಗುತ್ತದೆ ಎಂದು ಗೋಂವಿಂದ ಕಾರಜೋಳ ಅವರು ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 173 ಅನ್ನು ಹೊಳಲ್ಕೆರೆ ಪಟ್ಟಣದಿಂದ ದಾವಣಗೆರೆ ತಾಲೂಕು ಆನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ವರೆಗೆ ವಿಸ್ತರಣೆ ಮಾಡಲಾಗುವುದು. ಇದನ್ನು ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರೊಂದೆ ಚರ್ಚೆ ಮಾಡಿದ್ದೇನೆ. ಈ ಎಲ್ಲಾ ವಿಷಯಗಳು ಈಗಾಗಲೇ ಹೆದ್ದಾರಿ ಸಚಿವಾಲಯದಲ್ಲಿ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿ ಇವೆ. ಶೀಘ್ರದಲ್ಲೇ ಈ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ ಅಂತಾ ಗೋಂವಿಂದ ಕಾರಜೋಳ ಅವರು ಮಾಹಿತಿ ನೀಡಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ ಎಷ್ಟು ಕಿಲೋ ಮೀಟರ್ ವ್ಯಾಪಿಸಿದೆ ಹಾಗೂ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ನೀಡಿದ್ದಾರೆ. ಈ ನಡುವೆಯೇ ಇದೀಗ ಚಿತ್ರದುರ್ಗ ಜಿಲ್ಲೆಗೆ ಅನುಕೂಲ ಆಗುವಂತೆ ಪ್ರಸ್ತಾವನೆ ಆಗಿದ್ದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಅನುಮೋದನೆ ಒದಗಿಸುವಂತೆ ಕೇಳಲಾಗಿದೆ. ಇನ್ನೂ ಶೀಘ್ರದಲ್ಲೇ ಬಹುನಿರೀಕ್ಷಿತ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಉದ್ಘಾನೆಯಾಗಲಿದೆ. ಈಗಾಗಲೇ ಕರ್ನಾಟಕ ಭಾಗದಲ್ಲಿ ಕಾಮಗಾರಿ ಸಂಪೂರ್ಣ ಮುಗಿದಿದ್ದು, ವಾಹನಗಳು ಕೂಡ ಸಂಚಾರ ಮಾಡುತ್ತಿವೆ. ಆದರೆ, ಆಂಧ್ರಪ್ರದೇಶ ತಮಿಳುನಾಡು ಭಾಗದಲ್ಲಿ ಕಾಮಗಾರಿ ವಿಳಂಬವಾದ ಕಾರಣ ಉದ್ಘಾನೆ ದಿನಾಂಕ ಕೂಡ ಮುಂದೂಡಿಕೆಯಾಗುತ್ತಾ ಬಂದಿದೆ.












Click it and Unblock the Notifications