ಬಿಜೆಪಿಗೆ ಬಹುಮತ: ಸಮೀಕ್ಷೆಗಳು ಕಾಂಗ್ರೆಸ್ ಪರ ಇಲ್ಲ, ಚುನಾವಣೆ ಹೊತ್ತಿಗೆ ರಾಜ್ಯದಲ್ಲಿ ಬದಲಾವಣೆ: ಬೊಮ್ಮಾಯಿ ಭವಿಷ್ಯ
ಬೆಂಗಳೂರು ಗ್ರಾಮಾಂತರ, ಮಾರ್ಚ್ 31: ಪ್ರಸ್ತಕ ಸಾಲಿನ ಕರ್ನಾಟಕ ರಾಜ್ಯ ವಿಧಾನಸಭಾ ಚನಾವಣೆ 2023 ನಡೆಯಲು ಇನ್ನೂ ಒಂದೂವರೆ ತಿಂಗಳು ಬಾಕಿ ಇದೆ. ಅಷ್ಟರಲ್ಲಾಗಲೇ ಸಾಕಷ್ಟು ಬದಲಾವಣೆಗಳು ಆಗುತ್ತವೆ. ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಇತ್ತೀಚಿನ ಚುನಾವಣಾ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಇದೆ. ಹೆಚ್ಚು ಸ್ಥಾನ ಕಾಂಗ್ರೆಸ್ ಗೆಲ್ಲಲಿದೆ ಎಂದು ಸಮೀಕ್ಷೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ವಿಧಾನಸಭಾ ಚುನಾವಣೆ ಸಂಬಂಧ ಸಾಕಷ್ಟು ಚುನಾವಣಾ ಸಮೀಕ್ಷೆಗಳು ನಡೆದಿವೆ. ಸಮೀಕ್ಷೆಗಳು ಪೈಪೋಟಿ ಯನ್ನೇ ತೋರಿಸುತ್ತಿವೆ. ಸಮೀಕ್ಷೆಯ ಅಂಕಿ ಅಂಶಗಳು ಕಾಂಗ್ರೆಸ್ ಪಕ್ಷದ ಪರವಾಗಿ ಇಲ್ಲ. ಚುನಾವಣೆಗೆ ಇನ್ನೂ ಒಂದೂವರೆ ತಿಂಗಳು ಬಾಕಿ ಇದ್ದು, ಅಷ್ಟರಲ್ಲಿ ಬಹಳಷ್ಟು ಬದಲಾವಣೆಗಳು ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಒಂದು ವಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಚುನಾವಣೆ ಹಿನ್ನೆಲೆಯಲ್ಲಿ ಯಾರು ಯಾವ ಕ್ಷೇತ್ರದಿಂದ ಸ್ಪಧಿಸುತ್ತಾರೆ ಎಂಬ ಅಭ್ಯರ್ಥಿಗಳು ಹೆಸರುಗಳ ಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಇನ್ನೊಂದು ವಾರದಲ್ಲಿ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು
ಸಂಭಾವ್ಯ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹ ಸಭೆ ನಡೆಯುತ್ತಿರುವ ಕುರಿತು ಬೊಮ್ಮಾಯಿ ಪ್ರತಿಕ್ರಿಯಿಸಿದರು. ಪಕ್ಷದಲ್ಲಿ ತಳಮಟ್ಟದಿಂದ ಅಂದರೆ ಕ್ಷೇತ್ರ ಮಟ್ಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪಾರಾಮರ್ಶಿಸಿ ಸಂಸದೀಯ ಮಂಡಳಿಗೆ ಅದನ್ನು ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಿಪಕ್ಷ ನಾಯಕರು ಹತಾಶರಾಗಿದ್ದಾರೆ
ಕಾಂಗ್ರೆಸ್ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. 2013 ರಲ್ಲಿ ಕೊನೆ ಚುನಾವಣೆ ಎಂದು ಅವರೇ ಹೇಳಿದ್ದರು. ಅದಾದ ಬಳಿಕ ಎದುರಾದ 2018 ರ ವಿಧಾನಸಭಾ ಚುನಾವಣೆಯಲ್ಲಿ ಅವರು ಮತ್ತೆ ಸ್ಪರ್ಧಿಸಿದರು. ಈಗ ಪುನಃ ಗೆಲುವಿನ ಕುರಿತು ಕನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.
ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ಆಗುವುದು ಮುಖ್ಯವಲ್ಲ. ಮುಖ್ಯ ಮಂತ್ರಿಯಾಗಿ ರಾಜ್ಯದ ಜನಕ್ಕೇನು ಮಾಡಬಲ್ಲರು ಎನ್ನುವುದು ತುಂಬ ಮುಖ್ಯವಾಗುತ್ತದೆ. 2018 ರಲ್ಲಿ ಜನ ಇವರನ್ನು ತಿರಸ್ಕರಿಸಿದ್ದಾರೆ ಈ ಬಾರಿಯೂ ತಿರಸ್ಕರಿಸಲಿದ್ದಾರೆ ಎಂದು ಬೊಮ್ಮಾಯಿ ಭವಿಷ್ಯ ನುಡಿದರು.
ಮೀಸಲಾತಿ: ಕಾಂಗ್ರೆಸ್‌ನವರೇ ಮಾಡಬಹುದಿತ್ತು
ಮೀಸಲಾತಿ ಚುನಾವಣಾ ಗಿಮಿಕ್ ಎಂದು ವಿರೋಧ ಪಕ್ಷಗಳ ನಾಯಕರು ಹೇಳುತ್ತಿದ್ದಾರೆ. ಈ ಕುರಿತು ಉತ್ತರಿಸಿದ ಮುಖ್ಯಮಂತ್ರಿಗಳು, ಕಾಂಗ್ರೆಸ್ ಅವಧಿಯಲ್ಲಿದ್ದಾಗಲೇ ಅವರೇ ಮೀಸಲಾತಿ ಕುರಿತು ಬೇಡಿಕೆ ಈಡೇರಿಬಹುದಿತ್ತು. ಅದು 30 ವರ್ಷಗಳ ಬೇಡಿಕೆ. ಬದ್ಧತೆ ಇರದ ಕಾರಣ ಕಾಂಗ್ರೆಸ್‌ನವರು ಮೀಸಲಾತಿ ಕಲ್ಪಿಸುವ ಸಾಹಸಕ್ಕೆ ಕೈ ಹಾಕಿಲಿಲ್ಲ.
ಕಾಂಗ್ರೆಸ್‌ನವರು ಜನರನ್ನು ಮತ ಬ್ಯಾಂಕ್ ಆಗಿ ಮಾತ್ರವೇ ಕಾಣುತ್ತಾರೆ. ಅವರಿಗೆ ಅಸಾಧ್ಯವಾದುದನ್ನು ಬಿಜೆಪಿ ಸರ್ಕಾರ ಮಾಡಿ ತೋರಿಸಿದೆ. ಹೀಗಾಗಿ ಅವರಿಗೆ ತಳಮಳ ಶುರುವಾಗಿದ್ದು, ಎಲ್ಲ ದರಲ್ಲಿಯೂ ರಾಜಕೀಯ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.
ವರುಣಾದಲ್ಲಿ ಪ್ರಬಲ ಪೈಪೋಟಿ
ವರುಣಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದ ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ವರುಣಾದಲ್ಲಿ ನಾವು ಖಂಡಿತವಾಗಿ ಪ್ರಬಲವಾದ ಪೈಪೋಟಿ ನೀಡುತ್ತೇವೆ. ಬಿ.ವೈ.ವಿಜಯೇಂದ್ರ ಅವರು ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯವಿದೆ. ಅಂತಿಮವಾಗಿ ಎಲ್ಲಿ ನಿಲ್ಲಬೇಕು ಎಂಬುದನ್ನು ಯಡಿಯೂರಪ್ಪ ನಿರ್ಧರಿಸುತ್ತಾರೆ ಎಂದು ಬೊಮ್ಮಾಯಿ ತಿಳಿಸಿದರು.












Click it and Unblock the Notifications