School Holiday: ಸಂಕ್ರಾಂತಿ ಹಬ್ಬಕ್ಕೆ ಶಾಲಾ-ಕಾಲೇಜುಗಳಿಗೆ ಯಾವ ದಿನ ರಜೆ? ಜನವರಿ 14 ಅಥವಾ 15?
ಬೆಂಗಳೂರು: 2025ನೇ ವರ್ಷಕ್ಕೆ ವಿದಾಯ ಹೇಳಿ, 2026ರ ಹೊಸ ವರ್ಷವನ್ನು ಬರಮಾಡಿಕೊಂಡಿದ್ದೇವೆ. ಹೊಸ ವರ್ಷದ ಸಂಭ್ರಮ ಮುಗಿಯುತ್ತಿದ್ದಂತೆ ಇದೀಗ ಎಲ್ಲರ ಕಣ್ಣು ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಯ ಮೇಲೆ ಬಿದ್ದಿದೆ. ಎಳ್ಳು-ಬೆಲ್ಲ ಹಂಚುವ ಸಂಭ್ರಮ ಒಂದೆಡೆಯಾದರೆ, ಇತ್ತ ಹುಟ್ಟೂರಿಗೆ ಹೋಗಿ ಹಬ್ಬ ಆಚರಿಸಲು ಪೋಷಕರು ಮತ್ತು ಮಕ್ಕಳು ರಜೆಗಾಗಿ ಪ್ಲಾನ್ ಮಾಡುತ್ತಿದ್ದಾರೆ.
ಕರ್ನಾಟಕದಲ್ಲಿ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಧಾರ್ಮಿಕ ಆಚರಣೆಗಳಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಬಹಳ ಮಹತ್ವವನ್ನ ನೀಡಲಾಗುತ್ತದೆ. ಪ್ರತೀ ವರ್ಷವೂ ಸಾಮಾನ್ಯವಾಗಿ ಜನವರಿ 14 ರಂದು ಮಕರ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ. ಅದೇ ರೀತಿ ಈ ಬಾರಿಯೂ ಹಿಂದೂ ಕ್ಯಾಲೆಂಡರ್ ಪ್ರಕಾರ ಜನವರಿ 14 ರಂದೇ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದೆ. ಆದರೆ, ಪ್ರತಿ ವರ್ಷದಂತೆ ಈ ವರ್ಷವೂ ಶಾಲಾ-ಕಾಲೇಜುಗಳಿಗೆ ರಜೆ ಯಾವಾಗ? ಸಂಕ್ರಾಂತಿ ಹಬ್ಬ ಯಾವ ದಿನ? ಎಂಬ ಗೊಂದಲ ಉಂಟಾಗಿದೆ. ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಜನವರಿ 14 ರಂದು ರಜೆ ನೀಡಿದ್ರೆ, ಕೆಲವು ಸಂಸ್ಥೆಗಳಲ್ಲಿ ಜನವರಿ 15ರಂದು ರಜೆ ನೀಡಲಾಗಿದೆ.

ಉತ್ತರಾಯಣದ ಆರಂಭವನ್ನು ಸೂಚಿಸುವ ಮಕರ ಸಂಕ್ರಾಂತಿ ಹಬ್ಬವನ್ನು ರಾಜ್ಯದಲ್ಲಿ ಭಾರೀ ಸಂಭ್ರಮದಿಂದ, ಎಳ್ಳು-ಬೆಲ್ಲದೊಂದಿಗೆ ಆಚರಿಸಲಾಗುತ್ತದೆ. ಸೂರ್ಯನು ಮಕರ ರಾಶಿಗೆ ಪ್ರವೇಶಿಸುವ ಪುಣ್ಯಕಾಲ ಜನವರಿ 14 ರಂದೇ ಆರಂಭವಾಗುತ್ತಿದ್ದರೂ, ಕರ್ನಾಟಕ ಸರ್ಕಾರದ ಶೈಕ್ಷಣಿಕ ಕ್ಯಾಲೆಂಡರ್ ಪ್ರಕಾರ ಜನವರಿ 15 ರ ಗುರುವಾರ ಶಾಲಾ-ಕಾಲೇಜುಗಳಿಗೆ ಅಧಿಕೃತ ರಜೆ ಘೋಷಿಸಲಾಗಿದೆ. ಕೆಲವು ಖಾಸಗಿ ಸಂಸ್ಥೆಗಳು ಹಬ್ಬದ ದಿನವಾದ 14 ರಂದೂ ರಜೆ ನೀಡಿದ್ದಾರೆ.
ಇನ್ನೂ ಶಾಲೆಯಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಜನವರಿ 15 ರಂದು ರಜೆ ಘೋಷಣೆ ಮಾಡಲಾಗಿದೆ. ಮಕರ ಸಂಕ್ರಾಂತಿ ಪ್ರಯುಕ್ತ ಶಾಲಾ ಕ್ಯಾಲೆಂಡರ್‌ನಲ್ಲಿ ತಿಳಿಸಲಾದ ಜನವರಿ 14 ರ ರಜಾದಿನವನ್ನು ಪರಿಷ್ಕರಿಸಲಾಗಿದೆ. ಆದ್ದರಿಂದ ಮಕರ ಸಂಕ್ರಾಂತಿ ಪ್ರಯುಕ್ತ 15 ರಜೆ ನೀಡಲಾಗಿದೆ. ಕಳೆದ ತಿಂಗಳು ಸರ್ಕಾರದಿಂದ ಸಾರ್ವತ್ರಿಕ ರಜಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದಲ್ಲಿ ಸಾರ್ವತ್ರಿಕ ರಜೆಯನ್ನು ಜನವರಿ 15 ರಂದು ರಜೆ ಘೋಷಿಸಲಾಗಿದೆ.
ಬ್ಯಾಂಕ್‌ಗಳಿಗೆ ಯಾವಾಗ ರಜೆ?
ಭಾರತೀಯ ರಿಸರ್ವ್ ಬ್ಯಾಂಕ್ (RBI) ರಜಾ ಕ್ಯಾಲೆಂಡರ್ ಪ್ರಕಾರ , ಪ್ರಾದೇಶಿಕ ಹಬ್ಬಗಳು ಮತ್ತು ಆಚರಣೆಗಳನ್ನು ಅವಲಂಬಿಸಿ ಬ್ಯಾಂಕ್ ರಜಾದಿನಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದ ಜನವರಿ ತಿಂಗಳ ಬ್ಯಾಂಕ್ ರಜಾದಿನಗಳ ಪಟ್ಟಿಯ ಪ್ರಕಾರ, ಜನವರಿ 14 ರಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ದೇಶಾದ್ಯಂತ ಬ್ಯಾಂಕುಗಳು ಮುಚ್ಚಿರುವುದಿಲ್ಲ. ಕರ್ನಾಟಕದಲ್ಲಿ ಜನವರಿ 15 ರಂದು ಕರ್ನಾಟಕದಲ್ಲಿ ಬ್ಯಾಂಕ್‌ಗಳಿಗೆ ರಜೆ ನೀಡಲಾಗಿದೆ. ಜನವರಿ 15 ರಂದು ಮಕರ ಸಂಕ್ರಾಂತಿಯ ಪ್ರಯುಕ್ತ ಕರ್ನಾಟಕ, ತಮಿಳುನಾಡು, ಸಿಕ್ಕಿಂ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಹಲವಾರು ದಕ್ಷಿಣ ಮತ್ತು ಪೂರ್ವ ರಾಜ್ಯಗಳಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಜನವರಿ 14 ರಂದು ಮಕರ ಸಂಕ್ರಾಂತಿ ಪ್ರಯುಕ್ತ ಗುಜರಾತ್, ಒಡಿಶಾ, ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಆಯ್ದ ರಾಜ್ಯಗಳಲ್ಲಿ ಬುಧವಾರ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ.












Click it and Unblock the Notifications