ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯ ಹೊರೆ ತಗ್ಗಿಸಿ 'ಗ್ರೇಡಿಂಗ್' ಪದ್ಧತಿ ಜಾರಿಗೆ ತಂದಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯೇಂದ್ರ ಅವರ ಹೇಳಿಕೆಯು "ಆತ್ಮಘಾತಕ ಹಾಗೂ ಕನ್ನಡದ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡುವಂತಿದೆ" ಎಂದು ಅವರು ಕಿಡಿಕಾರಿದ್ದಾರೆ.
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಇದ್ದ ಹೊರೆಯನ್ನು ತೆಗೆದು, ಮೂರನೇ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ನಿಮ್ಮ ಹೇಳಿಕೆ ಗಮನಿಸಿದೆ. ನಿಮ್ಮ ಒಟ್ಟು ಹೇಳಿಕೆಯು ಆತ್ಮಘಾತಕತನದಿಂದ ಕೂಡಿದೆ, ಕನ್ನಡದ ಮಕ್ಕಳ ಭವಿಷ್ಯದ ವಿರುದ್ಧವಾಗಿದೆ, ಕನ್ನಡಿಗರ ಆಶೋತ್ತರಗಳನ್ನು ಹೀಯಾಳಿಸುವಂತೆ ಇದೆ. ಇಂಥ ಹೇಳಿಕೆಯನ್ನು ನಿಮ್ಮಿಂದ ನಾನು ನಿರೀಕ್ಷಿಸಿರಲಿಲ್ಲ ಎಂದು ಖಂಡಿಸಿದ್ದಾರೆ.

ಕನ್ನಡ ಮಕ್ಕಳ ಮೇಲೆ ಎಷ್ಟು ದಿನ ದೌರ್ಜನ್ಯ?
2023-2024ರ SSLC ಪರೀಕ್ಷೆಯಲ್ಲಿ 90,000ಕ್ಕೂ ಹೆಚ್ಚು ಕನ್ನಡದ ಮಕ್ಕಳು ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದರು. 2024-25ರಲ್ಲಿ ಹಿಂದಿಯೊಂದರಲ್ಲಿ 1,42,400 ಮಕ್ಕಳು ಫೇಲ್ ಆಗಿದ್ದರು. ಪ್ರತಿ ವರ್ಷ ನಮ್ಮ ಕನ್ನಡದ ಮಕ್ಕಳು ತಮ್ಮದಲ್ಲದ ಹಿಂದಿಯ ಕಡ್ಡಾಯ ಕಲಿಕೆಯಿಂದ ಒಂದು ವರ್ಷ ಕಳೆದುಕೊಳ್ಳುತ್ತಿದ್ದರು. ಇದು ನಿಮ್ಮ ಗಮನಕ್ಕೆ ಬಂದಿಲ್ಲವೇ? ನಮ್ಮ ಕನ್ನಡದ ಮಕ್ಕಳ ಭವಿಷ್ಯಕ್ಕೆ ಕೊಳ್ಳಿ ಇಡಲು ನಮಗೇನು ಹಕ್ಕಿದೆ? ಯಾಕೆ ಅವರ ಮೇಲೆ ಇಂಥ ದೌರ್ಜನ್ಯ? ಯಾವತ್ತಾದರೂ ಯೋಚಿಸಿದ್ದೀರಾ? ದಶಕಗಳಿಂದ ಕನ್ನಡದ ಮಕ್ಕಳು ಈ ದೌರ್ಜನ್ಯ ಅನುಭವಿಸಿದ್ದಾರೆ. ಇನ್ನೂ ಎಷ್ಟು ಕಾಲ ಈ ಮಾನಸಿಕ ಅತ್ಯಾಚಾರವನ್ನು ಅನುಭವಿಸಬೇಕು? ಎಂದು ಗುಡುಗಿದ್ದಾರೆ.
ಕಳೆದ ವರ್ಷ ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಮಹಾರಾಷ್ಟ್ರದಲ್ಲಿ ತೃತೀಯ ಭಾಷೆಯನ್ನು ಕೈಬಿಟ್ಟು ದ್ವಿಭಾಷಾ ನೀತಿಯನ್ನು ಅಳವಡಿಸಿಕೊಳ್ಳಲಾಯಿತು? ಯಾಕೆ ಅಲ್ಲಿ ಹಿಂದಿಯನ್ನು ತೆಗೆಯಲಾಯಿತು ಎಂಬುದನ್ನು ಅಲ್ಲಿನ ನಿಮ್ಮ ಮುಖ್ಯಮಂತ್ರಿಗಳನ್ನು ಒಮ್ಮೆ ಕೇಳಿ. ಆಗ ನೀವು ಯಾಕೆ ಮಾತನಾಡಲಿಲ್ಲ? ದೇಶದಲ್ಲೇ ಮಾದರಿ ತ್ರಿಭಾಷಾ ಶಿಕ್ಷಣ ನೀತಿಯನ್ನು ಯಾಕೆ ತೆಗೆದಿರಿ ಎಂದು ಕೇಳಬೇಕಿತ್ತಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ನೀತಿ ಸರಿಯೇ? ಎಂದು ಪ್ರಶ್ನಿಸಿದ್ದಾರೆ.
ನಮ್ಮ ಭಾಷೆ ಬೇರೆ ದೇಶಗಳಿಂದ ಬಂದಿದ್ದಾ?
ಹಿಂದಿಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದ ನೋಡಲಾಗುತ್ತಿದೆ ಎಂದು ಹೇಳಿದ್ದೀರಿ. ಇದು ಯಾವ ಬಗ್ಗೆಯ ಚಿಂತನೆ? ಕನ್ನಡವನ್ನು, ತಮಿಳನ್ನು, ತೆಲುಗನ್ನು ಅಥವಾ ಇನ್ನುಳಿದ ಭಾಷೆಗಳನ್ನು ನೀವು ಯಾಕೆ ರಾಷ್ಟ್ರೀಯ ದೃಷ್ಟಿಕೋನದಲ್ಲಿ ನೋಡುವುದಿಲ್ಲ. ನಮ್ಮ ಭಾಷೆಗಳೆಲ್ಲ ಬೇರೆ ದೇಶಗಳಿಂದ ಬಂದವುಗಳಾ? ಅಥವಾ ಮೂರನೇ ದರ್ಜೆ ಭಾಷೆಗಳಾ? ಹಿಂದಿಯೊಂದೇ ರಾಷ್ಟೀಯವೇ? ಬೇರೆಯ ಭಾಷೆಗಳೆಲ್ಲ ಏನು ಹಾಗಾದರೆ? ಈ ಬಾಲಿಷ, ಕುಯುಕ್ತಿಯ ಚಿಂತನೆಗಳನ್ನು ನೀವೂ ಯಾಕೆ ಪ್ರತಿಪಾದಿಸುತ್ತಿದ್ದೀರಿ? ಎಂದು ಕೇಳಿದ್ದಾರೆ.
ಹಿಂದಿ ರಾಜ್ಯಗಳಲ್ಲಿ ಕನ್ನಡ ಕಡ್ಡಾಯಗೊಳಿಸಿ
ಒಂದು ಕೆಲಸ ಮಾಡಿ. ಉತ್ತರ ಪ್ರದೇಶ, ಬಿಹಾರ ಇನ್ನಿತ್ಯಾದಿ ಹಿಂದಿ ರಾಜ್ಯಗಳಲ್ಲಿ ನಿಮ್ಮದೇ ಪಕ್ಷದ ಸರ್ಕಾರಗಳಿವೆ. ಅಲ್ಲಿ ಕೇವಲ ಎರಡು ಭಾಷೆಗಳನ್ನು ಕಲಿಸಲಾಗುತ್ತಿದೆ. ನೀವು ಅಲ್ಲಿ ಮೂರನೇ ಭಾಷೆಯನ್ನಾಗಿ ಕನ್ನಡವನ್ನು ಕಡ್ಡಾಯಗೊಳಿಸಿ. ನೂರು ಅಂಕ ನಿಗದಿಪಡಿಸಿ. ಅಲ್ಲಿನ ಮಕ್ಕಳು ಕನ್ನಡ ಓದಿ, ಕನಿಷ್ಠ 35 ಅಂಕ ಪಡೆದು ಪಾಸಾಗಲಿ. ಇದು ನಿಮಗೆ, ನಿಮ್ಮ ಪಕ್ಷಕ್ಕೆ ನೇರ ಸವಾಲು. ಇದು ಸಾಧ್ಯವೇ ನಿಮ್ಮಿಂದ? ಸಾಧ್ಯವಿಲ್ಲವಾದರೆ ಕರ್ನಾಟಕದ ಮಕ್ಕಳು ಮೂರನೇ ಭಾಷೆ ಹೇರಿಸಿಕೊಂಡು ಫೇಲಾಗಿ ಭವಿಷ್ಯ ಹಾಳುಮಾಡಿಕೊಳ್ಳಲಿ ಎಂದು ದಯವಿಟ್ಟು ಬೋಧನೆ ಮಾಡಬೇಡಿ. ಕನ್ನಡಿಗರು ಈಗ ಎಚ್ಚೆತ್ತುಕೊಂಡಿದ್ದಾರೆ. ಇದು ಹೊಸ ಕರ್ನಾಟಕ, ನಾವು ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ. ನಾವು ಯಾರ ಗುಲಾಮರೂ ಅಲ್ಲ ಎಂದು ಎಚ್ಚರಿಸಿದ್ದಾರೆ.

ʻʻಕೇಂದ್ರ ಸರಕಾರದ ಉದ್ಯೋಗಗಳಿಗೆ ಸೇರ್ಪಡೆಗೊಳ್ಳುವ ಕರ್ನಾಟಕದ ಯುವಸಮೂಹವು ರಾಷ್ಟ್ರಮಟ್ಟದಲ್ಲಿ ಹಿಂದೆ ಬೀಳಬಾರದುʼʼ ಎಂದು ಕಾಳಜಿ ತೋರಿದ್ದೀರಿ. ಇದು ಸರಿಯಾದ ಮಾತು. ಇದಕ್ಕೆ ಸರಿಯಾದ ಉತ್ತರವೂ ನಿಮ್ಮ ಬಳಿಯೇ ಇರುತ್ತದೆ. ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಹೋಗುವವರಿಗೆ ಹಿಂದಿ ಗೊತ್ತಿರಲೇಬೇಕು ಎಂಬ ವಾತಾವರಣವನ್ನು ಈ ಕೂಡಲೇ ಬದಲಾಯಿಸಿ. ಕೇಂದ್ರ ಸರ್ಕಾರವನ್ನು ಹಿಂದಿ ಭಾಷಿಕರಿಗೆ ನಾವು ಬರೆದುಕೊಟ್ಟಿಲ್ಲ. ಕೇಂದ್ರ ಸರ್ಕಾರವೆಂದರೆ ಅದು ಎಲ್ಲರ ಸರ್ಕಾರ, ಕನ್ನಡಿಗರ, ಮಲೆಯಾಳಿಗಳ, ಅಸ್ಸಾಮಿಗಳ, ಬಂಗಾಳಿಗಳ ಹೀಗೆ ಎಲ್ಲರ ಸರ್ಕಾರ. ಅದನ್ನು ಅರ್ಥ ಮಾಡಿಕೊಂಡು ಎಲ್ಲ ಭಾಷೆಗಳನ್ನು ಕೇಂದ್ರ ಸರ್ಕಾರದ ಆಡಳಿತ ಭಾಷೆಯನ್ನಾಗಿ ಮಾಡಿ. ಆಗ ನಿಮ್ಮ ಕಾಳಜಿಗೆ ಸರಿಯಾದ ಉತ್ತರ ಸಿಗುತ್ತದೆ ಎಂದು ಸಲಹೆ ನೀಡಿದ್ದಾರೆ.
ನಿಮ್ಮ ತಂದೆಯವರಿಂದ ಸ್ವಾಭಿಮಾನದ ಪಾಠ ಕಲಿತಿಲ್ಲ
ನಿಮ್ಮ ತಂದೆಯವರಾದ ಮಾನ್ಯ ಬಿ.ಎಸ್.ಯಡಿಯೂರಪ್ಪನವರು ಹಲವು ಬಾರಿ ಮುಖ್ಯಮಂತ್ರಿಗಳಾಗಿದ್ದಾಗ ಕನ್ನಡದ ವಿಷಯಕ್ಕೆ ಬಂದಾಗ ಯಾವತ್ತೂ ರಾಜಿ ಆದವರಲ್ಲ. ನಿಮ್ಮದೇ ಪಕ್ಷದವರು ಕನ್ನಡ ಬಾವುಟ ಹಾರಿಸಬಾರದು ಎಂದು ಆದೇಶ ಹೊರಡಿಸಿದಾಗಲೂ ರಾಜ್ಯೋತ್ಸವದಂದು ಕಂಠೀರವ ಸ್ಟೇಡಿಯಂನಲ್ಲಿ ಕನ್ನಡ ಬಾವುಟ ಹಾರಿಸಿದವರು ಅವರು. ನೀವು ಅವರ ರಾಜಕೀಯ ಪುಟಗಳಿಂದ ಈ ಸ್ವಾಭಿಮಾನದ ಪಾಠವನ್ನು ಕಲಿತ ಹಾಗೆ ಕಾಣುತ್ತಿಲ್ಲ. ದಯವಿಟ್ಟು ನಿಮ್ಮನ್ನು ತಪ್ಪು ದಾರಿಗೆ ಎಳೆಯುತ್ತಿರುವವರಿಗೆ ಬುದ್ಧಿಹೇಳಿ, ಕನ್ನಡ ಪ್ರೇಮಿಗಳಾಗಿ. ನಾವೆಲ್ಲರೂ ನಿಮ್ಮನ್ನು ಗೌರವಿಸುತ್ತೇವೆ. ಆ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಂದಿನಿ ಹಾಲಿನ ವಿಷಯವು ಯಾವ ಪ್ರಮಾಣದಲ್ಲಿ ನಿಮ್ಮ ಪಕ್ಷಕ್ಕೆ ಘಾಸಿ ಮಾಡಿತು ಎಂಬುದನ್ನು ನೀವು ಮರೆತಿಲ್ಲ ಎಂಬುದನ್ನು ಭಾವಿಸುತ್ತೇನೆ. ನಾವಂತೂ ಹಿಂದಿ ಹೇರಿಕೆ ಪರವಾಗಿರುವವರನ್ನು ನಾಡದ್ರೋಹಿಗಳು ಎಂದು ತೀರ್ಮಾನಿಸಿದ್ದೇವೆ. ನೀವು ನಾಡದ್ರೋಹಿಗಳಾಗಬೇಡಿ. ನಿಮ್ಮ ಮೇಲಿನ ಪ್ರೀತಿಯಿಂದಲೇ ಈ ಮಾತನ್ನು ಹೇಳುತ್ತಿದ್ದೇನೆ ಎಂದು ಟಿಎ.ನಾರಾಯಣಗೌಡ ಸೋಷಿಯಲ್ ಮೀಡಿಯಾ ಪೋಸ್ಟ್‌ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಿ.ವೈ.ವಿಜಯೇಂದ್ರ @BYVijayendra ಅವರೇ,
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) March 28, 2026
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಇದ್ದ ಹೊರೆಯನ್ನು ತೆಗೆದು, ಮೂರನೇ ಭಾಷೆಗೆ ಗ್ರೇಡಿಂಗ್ ನೀಡುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ನಿಮ್ಮ ಹೇಳಿಕೆ ಗಮನಿಸಿದೆ. ನಿಮ್ಮ ಒಟ್ಟು ಹೇಳಿಕೆಯು ಆತ್ಮಘಾತಕತನದಿಂದ ಕೂಡಿದೆ, ಕನ್ನಡದ ಮಕ್ಕಳ ಭವಿಷ್ಯದ ವಿರುದ್ಧವಾಗಿದೆ,… pic.twitter.com/IZqPseSEsA
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications