ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ತೋರಿ ಸಿದ್ದರಾಮಯ್ಯ ಟ್ವೀಟ್
ಕರ್ನಾಟಕದಲ್ಲಿ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಬೇಕಾದ ಸಿದ್ಧತೆಗಳು ಮಾಡಿಕೊಳ್ಳಲಾಗಿದೆ. ಮೇ 20 ರಂದು ಮಧ್ಯಾಹ್ನ 12.30 ಗಂಟೆಗೆ ಸಿಎಂ, ಡಿಸಿಎಂ ಮತ್ತು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ನಡುವೆ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಸಿದ್ದರಾಮಯ್ಯ ಕಾಳಜಿ ತೋರಿದ್ದಾರೆ.
'ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಮಾಣ ವಚನ ಸಮಾರಂಭದಿಂದಾಗಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಆಗದಂತೆ ಪೊಲೀಸರು ಎಚ್ಚರಿಕೆಯಿಂದ ಕ್ರಮಕೈಗೊಳ್ಳಬೇಕು. ಪ್ರಮಾಣ ವಚನ ಸಮಾರಂಭದ ಕಾರಣದಿಂದಾಗಿ ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ವಾಹನ ದಟ್ಟಣೆ ಸಂಭವಿಸುವ ಸಾಧ್ಯತೆ ಇದೆ. ಸಮಾರಂಭಕ್ಕೆ ಆಗಮಿಸುವವರು ಪೊಲೀಸರಿಗೆ ಸಹಕಾರ ನೀಡಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಮನವಿಮಾಡುತ್ತೇನೆ' ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳು ಮತ್ತು ಸಚಿವರ ಪ್ರಮಾಣ ವಚನ ಸಮಾರಂಭದಿಂದಾಗಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನಾನೂಕೂಲ ಆಗದಂತೆ ಪೊಲೀಸರು ಎಚ್ಚರಿಕೆಯಿಂದ ಕ್ರಮಕೈಗೊಳ್ಳಬೇಕು.
— Siddaramaiah (@siddaramaiah) May 19, 2023
ಪ್ರಮಾಣ ವಚನ ಸಮಾರಂಭದ ಕಾರಣದಿಂದಾಗಿ ಕಂಠೀರವ ಕ್ರೀಡಾಂಗಣದ ಸುತ್ತಮುತ್ತ ವಾಹಣ ದಟ್ಟಣೆ ಸಂಭವಿಸುವ ಸಾಧ್ಯತೆ ಇದೆ.…
ಮಾಣ ವಚನ ಕಾರ್ಯಕ್ರಮವನ್ನು ಅದ್ದೂರಿಯಾಗಿ ನಡೆಸಲು ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಎಲ್ಲರಿಗೂ ಆಹ್ವಾನ ನೀಡಿದ್ದಾರೆ.

"ಕರ್ನಾಟಕದ ಮಹಾಜನತೆ ಕಾಂಗ್ರೆಸ್‌ಗೆ ಈ ಬಾರಿ ಆಶೀರ್ವಾದ ಮಾಡಿದ್ದೀರಾ, ಬದಲಾವಣೆ ತಂದಿದ್ದೀರಾ. ಮೇ 20 ರಂದು ಕಂಠೀರವ ಕ್ರೀಡಾಂಗಣದಲ್ಲಿ ಪ್ರತಿಜ್ಞಾ ಸಮಾರಂಭ ನಡೆಯಲಿದ್ದು, ನೀವೆಲ್ಲರೂ 11 ಗಂಟೆಯ ಒಳಗೆ ಬಂದು ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು, ಎಲ್ಲರಿಗೂ ಆಹ್ವಾನ ಪತ್ರಿಕೆ ಕೊಡಲು ಸಮಯವಿಲ್ಲ ಇದನ್ನೇ ಆಹ್ವಾನ ಪತ್ರಿಕೆ ಎಂದು ತಿಳಿದು, ತಾವೆಲ್ಲರೂ ಬರಬೇಕು," ಎಂದು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯನವರ ಪ್ರಮಾಣ ವಚನ ಸಮಾರಂಭಕ್ಕೆ ರಾಜ್ಯದ ಮೂಲೆಮೂಲೆಯಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಆಗಮಿಸುವುದರಿಂದ ನಗರದಲ್ಲಿ ಸಂಚಾರ ದಟ್ಟಣೆ ಹಾಗೂ ಜನದಟ್ಟಣೆ ಹೆಚ್ಚಾಗಲಿದೆ. ಇದರಿಂದ ಬೆಂಗಳೂರಿನಲ್ಲಿ ಸಿಇಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ಸಮಸ್ಯೆಯ ಆತಂಕ ಎದುರಾಗಿದೆ. ಹೀಗಾಗಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಲು ಸೂಚನೆಯನ್ನು ನೀಡಿದ್ದಾರೆ.

ಇದೇ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಸಿಎಂ ಸಿದ್ದರಾಮಯ್ಯನವರ ಹಳೆ ಟ್ವೀಟ್ ಅನ್ನು ರೀ ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷದ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6 ಮತ್ತು 7ರಂದು ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ್ದರು. ಮೇ 7ರಂದು ನೀಟ್ (NEET Exam) ನಿಗದಿಯಾಗಿತ್ತು. ಇದಕ್ಕೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸ್ಥಳದ ಸುತ್ತಮುತ್ತಲಿನ ಕಾಲೇಜು ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಇರುವುದರಿಂದ ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದರು.
ಈ ಹಿಂದೆ ಸಿದ್ದರಾಮಯ್ಯನವರು ಬೇಜವಾಬ್ದಾರಿ ಹಾಗು ಬೆಂಗಳೂರಿನ ಜನರ ವಿರೋಧವನ್ನು ಲೆಕ್ಕಿಸದೆ ನರೇಂದ್ರ ಮೋದಿ ರೋಡ್ ಶೋ ನಡೆಸಿದ್ದಾರೆ ಎಂದು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದರು. ಇದೀಗ ಅದನ್ನೇ ರೀಟ್ವೀಟ್ ಮಾಡುವ ಮೂಲಕ ಟಾಂಗ್ ನೀಡಿರುವ ಬಿ.ಎಲ್. ಸಂತೋಷ್, ನರೇಂದ್ರ ಮೋದಿ ರೋಡ್ ಶೋ ಮಾಡುವಾಗ ಮಾತ್ರ ನಿಮಗೆ ವಿದ್ಯಾರ್ಥಿಗಳು ಕಾಣುತ್ತಾರಾ? ಸಿಇಟಿ ಪರೀಕ್ಷೆ ದಿನವೇ ಪ್ರಮಾಣ ವಚನ ಸಮಾರಂಭ ಆಯೋಜಿಸಿ ವಿದ್ಯಾರ್ಥಿಗಳಿಗೆ ತೊಂದರೆ ಕೊಡುತ್ತಿದ್ದೀರಿ. ಈಗ ನೀವು ಮಾಡುತ್ತಿರುವುದು ಸರೀನಾ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ಗೆ ಪ್ರಶ್ನೆಸಿದ್ದರು. ಇದಕ್ಕೆ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಉತ್ತರ ಕೊಟ್ಟಿದ್ದಾರೆ.












Click it and Unblock the Notifications