ಕೆಲಸ ಮಾಡದೇ ಬಿಲ್ ಕೊಡುವುದು ಕಾಂಗ್ರೆಸ್ ಚಾಳಿ : ಕೈ ವಿರುದ್ದ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ
ಚುನಾವಣಾ ಹತ್ತಿವಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಆರೋಪ ಪ್ರತ್ಯಾರೋಪ ಜೋರಾಗಿದ್ದು, ಕಾಂಗ್ರೆಸ್ ವಿರುದ್ದ ಸಿಎಂ ವಾಗ್ದಾಳಿ ನಡೆಸಿದ್ದಾರೆ.
ಕೊಪ್ಪಳ, ಮಾರ್ಚ್ 14: ಕೆಲಸ ಮಾಡದೇ ಬಿಲ್ ಕೊಡುವುದು ಕಾಂಗ್ರೆಸ್ ಚಾಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಆನೆಗುಂದಿಯಲ್ಲಿ ಕಾಮಗಾರಿಗೆ 125 ಕೋಟಿ ಮಂಜೂರು ಮಾಡಿದ್ದು ಬಿಡುಗಡೆಯಾಗಿಲ್ಲಯೆಂದು ವಿರೋಧ ಪಕ್ಷದವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲಸ ಹೇಗೆ ನಡೆಯುತ್ತದೆ ಎಂಬ ಕಲ್ಪನೆ ಇರಬೇಕು. ಅನುಮೋದನೆಯಾಗಿ ಸರ್ಕಾರಿ ಆದೇಶವಾಗಿ ಟೆಂಡರ್ ಆಗಿದೆ. ಅನಂತರ ಬಿಲ್ ಕೊಡುತ್ತಾರೆ ಎಂದರು.

ಸಚಿವ ವಿ.ಸೋಮಣ್ಣ ಅವರು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಸ್ನೇಹಿತರು ಎಂದಿರುವ ಬಗ್ಗೆ ಉತ್ತರಿಸಿ, ಅವರೊಂದಿಗೆ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ. ಸೋಮಣ್ಣ ನಮ್ಮದು 35 ವರ್ಷಗಳ ಸಂಬಂಧ ಎಂದರು. ಅದು ಸತ್ಯ ಎಂದರು.
ಐತಿಹಾಸಿಕ, ಧಾರ್ಮಿಕ ಪ್ರವಾಸೀ ತಾಣವಾಗಬೇಕೆನ್ನುವುದು ನಮ್ಮ ಪರಿಕಲ್ಪನೆ. ಕಾಮಗಾರಿಗೆ ಒಟ್ಟು 125 ಕೋಟಿ ರೂ.ಗಳ ಅನುಮೋದನೆ ದೊರೆತಿದೆ. ಮೊದಲನೇ ಹಂತದ ಯೋಜನೆ ಹಾಗೂ ಜಮೀನು ದೊರೆತಿರುವಲ್ಲಿ ಕೆಲಸ ಪ್ರಾರಂಭಸಲಾಗಿದೆ. ಭಕ್ತರು ಉಳಿದುಕೊಳ್ಳಲು ಡಾರ್ಮಿಟರಿ , ಪ್ರದಕ್ಷಿಣಾ ಪಥ, ಶಾಪಿಂಗ್ ಕಾಂಪ್ಲೆಕ್ಸ್ ಶೌಚಾಲಯ ನಿರ್ಮಾಣ ಮಾಡಲಾಗುವುದು . ಭೂ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇದಾದ ಕೂಡಲೇ ರೋಪ್ ವೇ ಮತ್ತಿತರ ಕಾಮಗಾರಿಗಳನ್ನು ಕೈಗೆಟ್ಟಿಕೊಳ್ಳಲಾಗುವುದು ಎಂದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಾಗೂ ಇಲ್ಲಿ ಆಂಜನೇಯನ ಜನ್ಮಸ್ಥಳದ ಅಭಿವೃದ್ಧಿ ಮಾಡುವ ಸೌಭಾಗ್ಯ ಬಿಜೆಪಿ ಸರ್ಕಾರಕ್ಕೆ ದೊರೆತಿರುವುದು ಸಂತಸ ತಂದಿದೆ. ಅಂಜನಾದ್ರಿಯ ಆಂಜನೇಯ ಇಡೀ ಮನುಕುಲಕ್ಕೆ ಆಶೀರ್ವಾದ ಮಾಡಲಿ. ಭಾರತ ಹಾಗೂ ಕನ್ನಡ ನಾಡಿನ ಸಮಸ್ತ ಜನಕ್ಕೆ ಆಶೀರ್ವಾದ ಮತ್ತು ರಕ್ಷಣೆ ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇ ಬಳಸಲು ಟೋಲ್ ರದ್ದುಪಡಿಸಲು ಪ್ರತಿಭಟನೆ ಆಗುತ್ತಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಯವರೊಂದಿಗೆ ಮಾತನಾಡಿದ್ದು, ವಿವರಗಳನ್ನು ಕೇಳಿದ್ದಾರೆ. ಪ್ರತಿ ಬಾರಿ ಟೋಲ್ ಪ್ರಾರಂಭವಾದಾಗ ಈ ವಿಚಾರ ಇದ್ದೇ ಇರುತ್ತದೆ. ವಿಚಾರಗಳನ್ನು ಜನರಿಗೆ ಹೇಳಿ ಸಮಾಧಾನ ಮಾಡಿ ಕ್ರಮ ವಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ ಎಂದರು.












Click it and Unblock the Notifications