ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ಪತ್ತೆ: ಕೋರ್ಟ್ ಕಮೀಷನರ್ ನೇಮಕಕ್ಕೆ ಆಗ್ರಹ

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಜೂ.22. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಕಮಿಷನರ್‌ ನೇಮಿಸಿ ಸ್ಥಳ ಪರಿಶೀಲನೆಗೆ ಅವಕಾಶ ಮಾಡಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆ ಹಿನ್ನೆಲೆಯಲ್ಲಿ ಕೋರ್ಟ್ ಕಮಿಷನರ್‌ ನೇಮಕಕ್ಕೆ ಬೇಡಿಕೆ ಹೆಚ್ಚಿದೆ.

ಆ ಕುರಿತಂತೆ ಹಿರಿಯ ನ್ಯಾಯವಾದಿ ವಿವೇಕ್‌ ಸುಬ್ಬಾರೆಡ್ಡಿ ಕೂಡ ಬುಧವಾರ ಹೈಕೋರ್ಟ್‌ ಮುಂದೆ ಬಲವಾದ ವಾದ ಮಂಡಿಸಿದ್ದಾರೆ. ಮಂಗಳೂರಿನ ತೆಂಕಳೈಪಾಡಿ ಗ್ರಾಮದ ಧನಂಜಯ್‌ ಹಾಗೂ ಬಡುಗಳೈಪಾಡಿ ಗ್ರಾಮದ ಮನೋಜ್‌ ಕುಮಾರ್‌ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಂ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಾದಿಸಿದ ವಿವೇಕ್‌ ಸುಬ್ಬಾರೆಡ್ಡಿ, ಮಸೀದಿಯ ಒಳಗೆ ದೇವಾಲಯವಿತ್ತೋ, ಇಲ್ಲವೋ ಎಂಬ ಕುರಿತ ಸಾಕ್ಷ್ಯಾಧಾರಗಳನ್ನು ಸ್ಥಳ ಸಮೀಕ್ಷೆ ನಡೆಸಿಯೇ ಸಂಗ್ರಹಿಸಬೇಕಿದೆ. ಅದಕ್ಕಾಗಿ ಮಳಲಿ ಮಸೀದಿಯ ಪರಿಶೀಲನೆಗೆ ಕಮಿಷನರ್‌ ನೇಮಕ ಮಾಡುವ ಅಗತ್ಯವಿದೆ ಎಂದರು.

Malali mosque case: Petitioner urged HC to appoint court commissioner

ಪುರಾತನ ಸ್ಮಾರಕ: ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯು ಈ ಮಸೀದಿಗೆ ಅನ್ವಯಿಸುವುದಿಲ್ಲ. ಏಕೆಂದರೆ, ಮಸೀದಿಯವರೇ ಹೇಳಿರುವ ಪ್ರಕಾರ ಅದು 700ಕ್ಕೂ ಅಧಿಕ ವರ್ಷಗಳಷ್ಟು ಹಳೆಯದಾಗಿದೆ. ಅಲ್ಲಿ1500ಕ್ಕೂ ಅಧಿಕ ವರ್ಷಗಳ ಹಳೆಯ ದೇವಾಲಯವಿದೆ ಎಂದು ಹಿಂದುಗಳು ಹೇಳುತ್ತಿದ್ದಾರೆ. ಪ್ರಾಚೀನ ಸ್ಮಾರಕಗಳ ಕಾಯ್ದೆ-1958ರ ಪ್ರಕಾರ 100 ವರ್ಷಕ್ಕಿಂತ ಹಳೆಯ ಕಟ್ಟಡಗಳು ಪುರಾತನ ಸ್ಮಾರಕವೆನಿಸಿಕೊಳ್ಳಲಿದ್ದು, ಆ ಕಟ್ಟಡಗಳಿಗೆ ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆ ಅನ್ವಯಿಸುವುದಿಲ್ಲಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಜ್ಞಾನವಾಪಿ ಪ್ರಕರಣ ಪ್ರಸ್ತಾಪ:

ಅಲ್ಲದೆ, ವಕೀಲರು ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆಯಾದಾಗಲೂ ಆ ಅರ್ಜಿಯ ಮಾನ್ಯತೆಯ ಪ್ರಶ್ನೆ ಎದುರಾಗಿತ್ತು. ಆದರೆ, ಕೋರ್ಟ್ ಮೊದಲು ಸ್ಥಳಪರಿಶೀಲನೆ ನಡೆಯಲಿ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ಮುಂದೆಯೂ ವಿಚಾರಣೆ ನಡೆಸಬಹುದು ಎಂದು ತಿಳಿಸಿ ಕಮಿಷನರ್‌ ನೇಮಕ ಮಾಡಿತ್ತು. ಹಾಗಾಗಿ ಮಳಲಿ ಮಸೀದಿ ವಿಚಾರದಲ್ಲೂಜ್ಞಾನವಾಪಿ ಮಸೀದಿ ಪ್ರಕರಣದಂತೆ ಅರ್ಜಿಯ ಮಾನ್ಯತೆಯ ವಿಷಯ ಬಿಟ್ಟು ಮೊದಲು, ಕಮಿಷನರ್‌ ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ಪ್ರಕರಣದ ಹಿನ್ನೆಲೆ:

ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್‌ ಹಾಗೂ ಮನೋಜ್‌ ಕುಮಾರ್‌ ಸಿವಿಲ್‌ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್‌, ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು.

ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅಡಿಯಲ್ಲಿ ಅಸಲು ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲಎಂದು ವಾದಿಸಿದ್ದರು. ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್‌ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್‌ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್, ತನ್ನ ಬಳಿ ಇರುವ ಅರ್ಜಿ ಇತ್ಯರ್ಥವಾಗುವವರೆಗೆ ಯಾವುದೇ ಆದೇಶ ನೀಡಬಾರದೆಂದು ಮಧ್ಯಂತರ ಆದೇಶ ನೀಡಿದೆ.

Recommended Video

ಉದ್ಧವ್ ಠಾಕ್ರೆ ಮಾಡಿದ ಕರ್ಮ ಇದು ! |*Politics | OneIndia Kannada

English summary
The demand for the appointment of a court commissioner in the wake of the discovery of a temple-like structure in the Mallali mosque in Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X