ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಳಲಿ ಮಸೀದಿ ಪರಿಶೀಲನೆಗೆ ಕೋರ್ಟ್ ಕಮೀಷನರ್ ನೇಮಕ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ಜೂ.24. ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆ ಹಿನ್ನೆಲೆಯಲ್ಲಿ ಪರಿಶೀಲನೆಗೆ ಕೋರ್ಟ್‌ ಕಮಿಷನರ್‌ ನೇಮಿಸಬೇಕೆಂದು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಮಂಗಳೂರಿನ ತೆಂಕಳೈಪಾಡಿ ಗ್ರಾಮದ ಧನಂಜಯ್‌ ಹಾಗೂ ಬಡುಗಳೈಪಾಡಿಯ ಮನೋಜ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದಂ ಅವರಿದ್ದ ಏಕಸದಸ್ಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು. ಅರ್ಜಿದಾರರು ಹಾಗೂ ಪ್ರತಿವಾದಿಗಳ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ವಿವೇಕ್‌ ಸುಬ್ಬಾರೆಡ್ಡಿ, "ಜ್ಞಾನವಾಪಿ ಮಾದರಿಯಲ್ಲಿಯೇ ಮಸೀದಿಯ ಒಳಗೆ ದೇವಾಲಯವಿತ್ತೋ, ಇಲ್ಲವೋ ಎಂಬ ಕುರಿತ ಸಾಕ್ಷ್ಯಗಳನ್ನು ಸ್ಥಳ ಸಮೀಕ್ಷೆ ನಡೆಸಿಯೇ ಸಂಗ್ರಹ ಮಾಡಬೇಕಿದೆ. ಅದಕ್ಕಾಗಿ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ನೀಡಿದ್ದ ಆದೇಶದಂತೆ ಮಳಲಿ ಮಸೀದಿಯ ಪರಿಶೀಲನೆಗಾಗಿ ಕಮಿಷನರ್‌ ನೇಮಕ ಮಾಡುವ ಅಗತ್ಯವಿದೆ," ಎಂದು ನ್ಯಾಯಪೀಠಕ್ಕೆ ವಿವರಿಸಿದರು.

 Malali Mosque issue: HC completes hearing and reserved judgement

ಪುರಾತನ ಸ್ಮಾರಕ:

ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯು ಈ ಮಸೀದಿಗೆ ಅನ್ವಯಿಸುವುದಿಲ್ಲ. ಏಕೆಂದರೆ, ಮಸೀದಿಯವರೇ ಹೇಳಿರುವ ಪ್ರಕಾರ ಅದು 700ಕ್ಕೂ ಅಧಿಕ ವರ್ಷಗಳಷ್ಟು ಹಳೆಯದಾಗಿದೆ. ಅಲ್ಲಿ1500ಕ್ಕೂ ಅಧಿಕ ವರ್ಷಗಳ ಹಳೆಯ ದೇವಾಲಯವಿದೆ ಎಂದು ಹಿಂದುಗಳು ಹೇಳುತ್ತಿದ್ದಾರೆ. ಪ್ರಾಚೀನ ಸ್ಮಾರಕಗಳ ಕಾಯ್ದೆ1958ರ ಪ್ರಕಾರ 100 ವರ್ಷಕ್ಕಿಂತ ಹಳೆಯ ಕಟ್ಟಡಗಳು ಪುರಾತನ ಸ್ಮಾರಕವೆನಿಸಿಕೊಳ್ಳಲಿದ್ದು, ಆ ಕಟ್ಟಡಗಳಿಗೆ ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆ ಅನ್ವಯಿಸುವುದಿಲ್ಲಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಜ್ಞಾನವಾಪಿ ಪ್ರಕರಣ ಪ್ರಸ್ತಾಪ:

ಅಲ್ಲದೆ,ವಕೀಲರು ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧ ಅರ್ಜಿ ಸಲ್ಲಿಕೆಯಾದಾಗಲೂ ಆ ಅರ್ಜಿಯ ಮಾನ್ಯತೆಯ ಪ್ರಶ್ನೆ ಎದುರಾಗಿತ್ತು. ಆದರೆ, ಕೋರ್ಟ್ ಮೊದಲು ಸ್ಥಳಪರಿಶೀಲನೆ ನಡೆಯಲಿ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ಮುಂದೆಯೂ ವಿಚಾರಣೆ ನಡೆಸಬಹುದು ಎಂದು ತಿಳಿಸಿ ಕಮಿಷನರ್‌ ನೇಮಕ ಮಾಡಿತ್ತು. ಹಾಗಾಗಿ ಮಳಲಿ ಮಸೀದಿ ವಿಚಾರದಲ್ಲೂಜ್ಞಾನವಾಪಿ ಮಸೀದಿ ಪ್ರಕರಣದಂತೆ ಅರ್ಜಿಯ ಮಾನ್ಯತೆಯ ವಿಷಯ ಬಿಟ್ಟು ಮೊದಲು, ಕಮಿಷನರ್‌ ನೇಮಕ ಮಾಡಬೇಕು ಎಂದು ಮನವಿ ಮಾಡಿದರು. ಆದರೆ ಮಸೀದಿ ಪರ ವಕೀಲರು, ಕೋರ್ಟ್‌ ಕಮೀಷನರ್‌ ನೇಮಕ ಅಗತ್ಯವಿಲ್ಲವೆಂದು ಪ್ರತಿಪಾದಿಸಿದರು.

ಪ್ರಕರಣದ ಹಿನ್ನೆಲೆ:

ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್‌ ಹಾಗೂ ಮನೋಜ್‌ ಕುಮಾರ್‌ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್‌, ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ

ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅಡಿಯಲ್ಲಿ ಅಸಲು ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು.

ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್‌ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್, ತನ್ನ ಬಳಿ ಇರುವ ಅರ್ಜಿ ಇತ್ಯರ್ಥವಾಗುವವರೆಗೆ ಯಾವುದೇ ಆದೇಶ ನೀಡಬಾರದೆಂದು ಮಧ್ಯಂತರ ಆದೇಶ ನೀಡಿದೆ.

English summary
High Court has reserved its order on a petition seeking the appointment of a court commissioner in the wake of the discovery of a temple-like structure at the Masali Mosque in Dakshina Kannada district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X