ಮಳಲಿ ಮಸೀದಿ ವಿವಾದ: ಕೋರ್ಟ್ ಕಮೀಷನರ್ ನೇಮಕ ಕೋರಿದ್ದ ಅರ್ಜಿ ವಜಾ

ಬೆಂಗಳೂರು, ಜುಲೈ 15; ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಲು ಕಮೀಷನರ್ ನೇಮಕ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಮೇಲ್ನೋಟಕ್ಕೆ ಅರ್ಜಿಯನ್ನು ಪುರಸ್ಕರಿಸುವ ಯಾವುದೇ ಅಂಶಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಮಂಗಳೂರಿನ ತೆಂಕಳೈಪಾಡಿ ಗ್ರಾಮದ ಧನಂಜಯ್‌ ಹಾಗೂ ಬಡುಗಳೈಪಾಡಿಯ ಮನೋಜ್‌ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಚಿನ್‌ ಶಂಕರ್ ಮಗದಂ ಅವರಿದ್ದ ಏಕಸದಸ್ಯಪೀಠ ಕಳೆದ ಜೂ. 24ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ಶುಕ್ರವಾರ ತೀರ್ಪು ಪ್ರಕಟಿಸಿದೆ, ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲರು, ಗಾನವಾಪಿ ಮಾದರಿಯಲ್ಲಿಯೇ ಮಸೀದಿಯ ಒಳಗೆ ದೇವಾಲಯವಿತ್ತೋ, ಇಲ್ಲವೋ? ಎಂಬ ಕುರಿತ ಸಾಕ್ಷ್ಯಗಳನ್ನು ಸ್ಥಳ ಸಮೀಕ್ಷೆ ನಡೆಸಿಯೇ ಸಂಗ್ರಹ ಮಾಡಬೇಕಿದೆ. ಅದಕ್ಕಾಗಿ ಗಾನವಾಪಿ ಮಸೀದಿ ಪ್ರಕರಣದಲ್ಲಿ ನೀಡಿದ್ದ ಆದೇಶದಂತೆ ಮಳಲಿ ಮಸೀದಿಯ ಪರಿಶೀಲನೆಗಾಗಿ ಕಮೀಷನರ್ ನೇಮಕ ಮಾಡುವ ಅಗತ್ಯವಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

Malali Mosque Issue : Petition Seeking Appointment Of Court Commissioner Dismissed

ಪುರಾತನ ಸ್ಮಾರಕ: ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯು ಈ ಮಸೀದಿಗೆ ಅನ್ವಯಿಸುವುದಿಲ್ಲ. ಏಕೆಂದರೆ, ಮಸೀದಿಯವರೇ ಹೇಳಿರುವ ಪ್ರಕಾರ ಅದು 700ಕ್ಕೂ ಅಧಿಕ ವರ್ಷಗಳಷ್ಟು ಹಳೆಯದಾಗಿದೆ. ಅಲ್ಲಿ1500ಕ್ಕೂ ಅಧಿಕ ವರ್ಷಗಳ ಹಳೆಯ ದೇವಾಲಯವಿದೆ ಎಂದು ಹಿಂದುಗಳು ಹೇಳುತ್ತಿದ್ದಾರೆ.

ಪ್ರಾಚೀನ ಸ್ಮಾರಕಗಳ ಕಾಯ್ದೆ1958ರ ಪ್ರಕಾರ 100 ವರ್ಷಕ್ಕಿಂತ ಹಳೆಯ ಕಟ್ಟಡಗಳು ಪುರಾತನ ಸ್ಮಾರಕವೆನಿಸಿಕೊಳ್ಳಲಿದ್ದು, ಆ ಕಟ್ಟಡಗಳಿಗೆ ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆ ಅನ್ವಯಿಸುವುದಿಲ್ಲಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಗಾನವಾಪಿ ಪ್ರಕರಣ ಪ್ರಸ್ತಾಪ: ಅಲ್ಲದೆ, ವಕೀಲರು ಗಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧ ಅರ್ಜಿ ಸಲ್ಲಿಕೆಯಾದಾಗಲೂ ಆ ಅರ್ಜಿಯ ಮಾನ್ಯತೆಯ ಪ್ರಶ್ನೆ ಎದುರಾಗಿತ್ತು. ಆದರೆ, ಕೋರ್ಟ್ ಮೊದಲು ಸ್ಥಳಪರಿಶೀಲನೆ ನಡೆಯಲಿ, ಅರ್ಜಿಯ ವಿಚಾರಣಾ ಮಾನ್ಯತೆ ಕುರಿತು ಮುಂದೆಯೂ ವಿಚಾರಣೆ ನಡೆಸಬಹುದು ಎಂದು ತಿಳಿಸಿ ಕಮಿಷನರ್‌ ನೇಮಕ ಮಾಡಿತ್ತು.

ಹಾಗಾಗಿ ಮಳಲಿ ಮಸೀದಿ ವಿಚಾರದಲ್ಲೂ ಗಾನವಾಪಿ ಮಸೀದಿ ಪ್ರಕರಣದಂತೆ ಅರ್ಜಿಯ ಮಾನ್ಯತೆಯ ವಿಷಯ ಬಿಟ್ಟು ಮೊದಲು, ಕಮೀಷನರ್‌ ನೇಮಕ ಮಾಡಬೇಕು ಎಂದು ಮನವಿ ಮಾಡಿದರು. ಆದರೆ ಮಸೀದಿ ಪರ ವಕೀಲರು, ಕೋರ್ಟ್‌ ಕಮೀಷನರ್ ನೇಮಕ ಅಗತ್ಯವಿಲ್ಲವೆಂದು ಪ್ರತಿಪಾದಿಸಿದರು.

ಪ್ರಕರಣದ ಹಿನ್ನೆಲೆ: ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎನ್ನಲಾಗಿದ್ದು, ಆ ರಚನೆಯನ್ನು ಕೆಡವದಂತೆ ನಿರ್ಬಂಧ ವಿಧಿಸುವಂತೆ ಕೋರಿ ಧನಂಜಯ್‌ ಹಾಗೂ ಮನೋಜ್‌ ಕುಮಾರ್ ಸಿವಿಲ್ ನ್ಯಾಯಾಲಯಕ್ಕೆ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಕೋರ್ಟ್‌, ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು. ಈ ಮಧ್ಯೆ ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯ್ದೆಯ ಅಡಿಯಲ್ಲಿ ಮೂಲ ದಾವೆ ವಿಚಾರಣಾ ಮಾನ್ಯತೆ ಹೊಂದಿಲ್ಲ ಎಂದು ವಾದಿಸಿದ್ದರು.

ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮೀಷನರ್‌ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ನಡೆಸುವಂತೆ ಕೋರಿದ್ದರು. ಆದರೆ, ಸಿವಿಲ್ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿದೆ. ಹೈಕೋರ್ಟ್, ತನ್ನ ಬಳಿ ಇರುವ ಅರ್ಜಿ ಇತ್ಯರ್ಥವಾಗುವವರೆಗೆ ಯಾವುದೇ ಆದೇಶ ನೀಡಬಾರದೆಂದು ಮಧ್ಯಂತರ ಆದೇಶ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+