ರಾಜ್ಯದಲ್ಲಿ ನೀರಿನ ಹಾಹಾಕಾರ; ನೀರು ಬಿಡುಗಡೆಗೆ ನಿರ್ಧಾರ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ, ಸೆಪ್ಟೆಂಬರ್‌ 21: ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರ ದಿಂದ ಹದಿನೈದು ದಿನಗಳ ಕಾಲ ಕುಡಿಯುವ ನೀರು ಬಿಡುಗಡೆ ಮಾಡಲು ಸಲಹಾ ಸಮಿತಿಯ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಹಾಗೂ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಹೌದು, ಈ ಕುರಿತು ಬುಧವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಮಲಪ್ರಭಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀರಾವರಿ ಹಿತಾಸಕ್ತಿ ಹಾಗೂ ಕುಡಿಯುವ ನೀರು ಒದಗಿಸುವುದು ಈ ಎರಡೂ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

Malaprabha Yojana Irrigation Advisory Committee Meeting Decision To Release Drinking Water

ಇನ್ನೂ ಸಲಹಾ ಸಮಿತಿಯ ನಿರ್ಧಾರ ಆಧರಿಸಿ ಅಧಿಕಾರಿಗಳು ಆದೇಶ ಮಾಡಲಿದ್ದಾರೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದಿಂದ ಶುಕ್ರವಾರದಿಂದ ಹದಿನೈದು ದಿನಗಳವರೆಗೆ ನೀರು ಹರಿಸಲಾಗುವುದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂದು ತಿಳಿಸಿದರು.

ಈ ವೇಳೆ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿ, ಮಳೆ ಕೊರತೆಯಿಂದಾಗಿ ನೀರಿನ ಸಮಸ್ಯೆ ಉದ್ಭವಿಸಿದೆ. ಆದ್ದರಿಂದ ಜನರಿಗೆ ತೊಂದರೆಯಾಗದಂತೆ ನೀರು ಬಿಡಬೇಕಿದೆ. ನೀರಾವರಿಗೆ ಅಗತ್ಯವಿರುವ ನೀರು ಮೀಸಲಿಟ್ಟುಕೊಂಡು ಅಗತ್ಯತೆ ಆಧರಿಸಿ ಕುಡಿಯುವ ನೀರು ಬಿಡುಗಡೆಗೊಳಿಸಬೇಕು ಎಂದು ಸಲಹೆ ನೀಡಿದರು. ಅಲ್ಲದೇ ಬರಗಾಲ ಎಂದು ಘೋಷಿಸಿರುವುದರಿಂದ ಪರಿಸ್ಥಿತಿ ಆಧರಿಸಿ ಕುಡಿಯುವ ಉದ್ಧೇಶಕ್ಕಾಗಿಯೇ ಹಂತ ಹಂತವಾಗಿ ಬಿಡುಗಡೆಗೊಳಿಸಬಹುದು ಎಂದು ಶಾಸಕ ಕೋನರೆಡ್ಡಿ ಅಭಿಪ್ರಾಯಪಟ್ಟರು.

ಸವದತ್ತಿ ಶಾಸಕರಾದ ವಿಶ್ವಾಸ್ ವೈದ್ಯ ಮಾತನಾಡಿ, ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ತೀವ್ರವಾಗಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ. ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ ಮಾತನಾಡಿ, ಕುಡಿಯುವ ನೀರು ಒದಗಿಸುವುದು ಅನಿವಾರ್ಯ. ಆದ್ದರಿಂದ ಅಗತ್ಯತೆ ಆಧರಿಸಿ ಸದ್ಯಕ್ಕೆ ನೀರು ಬಿಡುಗಡೆ ಮಾಡಬೇಕು ಎಂದು ಸಲಹೆ ನೀಡಿದರು.

ಇನ್ನೂ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಮುಂದಿನ ಜೂನ್ ಮಾಹೆಯವರೆಗಿನ ಲೆಕ್ಕಾಚಾರ ಇಟ್ಟುಕೊಂಡು ಜಲಾಶಯ ನೀರು ನಿರ್ವಹಣೆಯನ್ನು ಮಾಡಬೇಕಿದೆ. ಆದ್ದರಿಂದ ಸಲಹಾ ಸಮಿತಿಯು ಈ ಅಂಶವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಸಭೆಯಲ್ಲಿ ಮುಖ್ಯ ಎಂಜಿನಿಯರ್ ಅಶೋಕ ವಾಸನದ, ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಎಂಜಿನಿಯರ್ ವಿ.ಎಸ್.ಮಧುಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷ ಸದುಗೌಡ ಪಾಟೀಲ, ಜಿಲ್ಲಾ ಪೊಲೀಸ್ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+