ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ

|
Google Oneindia Kannada News

ಚಾಮರಾಜನಗರ, ಸೆ. 17 : ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ರಚಿಸಲಿರುವ ಅಭಿವೃದ್ಧಿ ಪ್ರಾಧಿಕಾರ ಅಕ್ಟೋಬರ್‌ ತಿಂಗಳಿನಲ್ಲಿ ಅಸ್ತಿತ್ವಕ್ಕೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಮುಂದಿನ ತಿಂಗಳು ಪ್ರಾಧಿಕಾರದ ಕಾರ್ಯ ಚಟುವಟಿಕೆಗೆ ಚಾಲನೆ ನೀಡಲಿದ್ದಾರೆ.

ಸಹಕಾರ ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಈ ಕುರಿತು ಮಾಹಿತಿ ನೀಡಿದ್ದು, ಅಕ್ಟೋಬರ್‌ನಲ್ಲಿ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಟ್ಟಕ್ಕೆ ಭೇಟಿ ನೀಡಿ, ಪ್ರಾಧಿಕಾರದ ಚಟುವಟಿಕೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.

H.S. Mahadeva Prasad

ಮಲೆ ಮಹದೇಶ್ವರ ಪ್ರಾಧಿಕಾರದ ರಚನೆ ಕುರಿತ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಕೆಎಎಸ್‌ ದರ್ಜೆಯ ಅಧಿಕಾರಿಯೊಬ್ಬರನ್ನು ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ನೇಮಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಮುಜರಾಯಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು. [ಮೈಸೂರು ಅರಮನೆ ಆವರಣದಲ್ಲಿ ಗುಡಿ ಮೇಲುರುಳಿದ ಮರ]

ಈ ಪ್ರಾಧಿಕಾರಕ್ಕೆ ಶ್ರೀ ಕ್ಷೇತ್ರದ ಜೊತೆಗೆ ಸುತ್ತಲಿನ ಗ್ರಾಮಗಳನ್ನೂ ಅಭಿವೃದ್ಧಿಪಡಿಸುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದರು. ಕಳೆದ ವರ್ಷ ತ್ರಿವೇಣಿ ಸಂಗಮದಲ್ಲಿ ನಡೆದ ಕುಂಬಮೇಳದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿಗಳು ಮಲೆ ಮಹದೇಶ್ವರ ಪ್ರಾಧಿಕಾರ ರಚಿಸಲಾಗುವುದು ಎಂದು ಹೇಳಿದ್ದರು. [ಚಾಮರಾಜನಗರ-ಬೆಂಗಳೂರು ನಡುವೆ ಹೊಸ ರೈಲು]

ಸೆ.25ರಿಂದ ಜಾತ್ರಾ ಮಹೋತ್ಸವ : ಶ್ರೀ ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ದಸರಾ, ದೀಪಾವಳಿ ಮತ್ತು ಕಾರ್ತಿಕ ಜಾತ್ರಾ ಮಹೋತ್ಸವಗಳನ್ನು ಆಯೋಜಿಸಲಾಗಿದೆ. ದಸರಾ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ಸೆ.25 ರಿಂದ ಅಕ್ಟೋಬರ್ 4 ರವರೆಗೆ ನಡೆಯಲಿದೆ.

ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಅ.22 ರಂದು ನರಕ ಚತುರ್ದಶಿ ವಿಶೇಷ ಉತ್ಸವಾದಿಗಳು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ಮತ್ತು ಉತ್ಸವಾದಿಗಳು, 23 ರಂದು ಅಮಾವಾಸ್ಯೆ ಉತ್ಸವ ಹಾಗೂ 24 ರಂದು ದೀಪಾವಳಿ ಮಹಾರಥೋತ್ಸವ ನಡೆಯಲಿದೆ. ಅ.27, ನವೆಂಬರ್ 3 ಹಾಗೂ 10 ರಂದು ಕಾರ್ತಿಕ ಸೋಮವಾರ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

English summary
Minister for Cooperation and In Charge Minister of Chamarajanagar district H.S. Mahadeva Prasad said, Male Mahadeshwara Hills authority to be set up in October month. The authority would develop places associated Male Mahadeshwara temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X