ಸಿದ್ದರಾಮಯ್ಯರ ಫೋಟೋ ತೆಗೆದ ಖರ್ಗೆ, ಚಿತ್ರ ಏನು ಹೇಳುತ್ತದೆ?
Recommended Video

'ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ, ರಾಜ್ಯ ಕಾಂಗ್ರೆಸ್ ಅನ್ನು ಸಿದ್ದರಾಮಯ್ಯ ತಮ್ಮ ಮುಷ್ಠಿಗೆ ತೆಗೆದುಕೊಂಡು ಬಿಟ್ಟಿದ್ದಾರೆ' ಎಂಬೆನೇನೋ ಸುದ್ದಿಗಳು ಕೆಲ ದಿನಗಳ ಹಿಂದೆ ಹರಿದಾಡುತ್ತಿತ್ತು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಜಾಫರ್ ಶರೀಫ್ ಮತ್ತು ಅವರಂತಹಾ ಎಲೆಕ್ಷನ್ ಸಮಯಕ್ಕೆ ಎದ್ದು ನಿಲ್ಲುವ ರಾಜಕಾರಣಿಗಳಿಗೆ ಹೀಗೆ ಅನ್ನಿಸಿರಲಿಕ್ಕೂ ಸಾಕು. ಆದರೆ ಸಿದ್ದರಾಮಯ್ಯ ವಿರುದ್ಧ ಬೇಸರಗೊಂಡ ಹಿರಿಯ ನಾಯಕರ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನೂ ಸೇರಿಸಲಾಗಿತ್ತು. ಆದರೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಚಿತ್ರವೊಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ನಡುವೆ ವೈಮನಸ್ಯವೇನೂ ಇಲ್ಲ ಎಂದು ಕಾಂಗ್ರೆಸ್ಸಿಗರು ಸಮಾಧಾನ ಪಟ್ಟುಕೊಳ್ಳುವುದಕ್ಕೆ ಕಾರಣವಾಗಿದೆ.
ಹೌದು, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮೆಟ್ಟಿಲುಗಳ ಮೇಲೆ ಕೂತಿರುವುದನ್ನು ಮಲ್ಲಿಕಾರ್ಜುನ ಖರ್ಗೆ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಿದ್ದರಾಮಯ್ಯ ಅವರು ನಗುತ್ತಾ ಮೊಬೈಲ್ ಹಿಡಿದ ಖರ್ಗೆ ಕಡೆ ನೋಡುತ್ತಿದ್ದಾರೆ. ಖರ್ಗೆ 'ಸ್ಮೈಲ್' ಎನ್ನುತ್ತಾ ಸಿದ್ದರಾಮಯ್ಯರ ಚಿತ್ರ ಸೆರೆಹಿಡಿಯುತ್ತಿದ್ದಾರೆ.

ಈ ಚಿತ್ರ ಹಲವು ವಿಷಯಗಳನ್ನು ಹೇಳುತ್ತಿದೆ. ತನಗಿಂತ ವಯಸ್ಸಿನಲ್ಲಿ, ಅನುಭವದಲ್ಲಿ ಕಿರಿಯರಾದ ಸಿದ್ದರಾಮಯ್ಯ ಅವರೊಂದಿಗೆ ಸ್ನೇಹದಿಂದ ವರ್ತಿಸುತ್ತಿರುವುದು ಚಿತ್ರದಲ್ಲಿ ಕಾಣುತ್ತದೆ. ಇನ್ನು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಳಾದರೂ ಹುಸಿ ಗಾಂಭೀರ್ಯಗಳನ್ನು ಪಕ್ಕಕ್ಕಿಟ್ಟು ಮೆಟ್ಟಿಲುಗಳ ಮೇಲೆ ಕಾರ್ಯಕರ್ತರೊಂದಿಗೆ ಕೂತು ಚಿತ್ರಕ್ಕೆ ಮುಖ ಒಡ್ಡಿರುವುದು ಅವರ ಸರಳತೆಯನ್ನು ತೋರುತ್ತದೆ.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್
ಇಬ್ಬರು ಹಿರಿಯ ರಾಜಕಾರಣಿಗಳ ನಡುವೆ ರಾಜಕೀಯವನ್ನು ಮೀರಿದ ಸ್ನೇಹವನ್ನೂ ನೋಡುಗರು ಚಿತ್ರದಲ್ಲಿ ಗಮನಿಸಬಹುದಾಗಿದೆ. ಸಿದ್ದರಾಮಯ್ಯ ಅವರು ಅಲ್ಪ ಕಾಲದಲ್ಲೇ ಕಾಂಗ್ರೆಸ್‌ನ ಕಿರಿಯರ ಜೊತೆಗೆ ಹಿರಿಯರ ನಂಬುಗೆ, ವಿಶ್ವಾಸ ಮತ್ತು ಸ್ನೇಹಕ್ಕೆ ಪಾತ್ರರಾಗಿದ್ದಾರೆ ಎಂಬುದಕ್ಕೆ ಈ ಚಿತ್ರವನ್ನು ಸಾಕ್ಷಿಯಾಗಿಯೂ ಪರಿಗಣಿಸಬಹುದು.
ಈ ಚಿತ್ರವನ್ನು ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, 'ನಮ್ಮ ತಂದೆ ತಂತ್ರಜ್ಞಾನವನ್ನು ಬಳಸುವುದಕ್ಕೆ ಹಿಂಜರಿಯುವರಲ್ಲ, ಹೊಸ ತಂತ್ರಜ್ಞಾನದ ಬಗ್ಗೆ ಸದಾ ಕುತೂಹಲ ಹೊಂದಿದ್ದಾರೆ' ಎಂದು ಬರೆದಿದ್ದಾರೆ.
-
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು?












Click it and Unblock the Notifications