ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ?

|
Google Oneindia Kannada News

ಬೆಂಗಳೂರು, ಸೆ. 11: ಬಿಬಿಎಂಪಿ ಚುನಾವಣೆಯ ಬಳಿಕೆ ನಡೆದಿದ್ದ ಬೆಳವಣಿಗೆಗಳು ರಾಜ್ಯದಲ್ಲಿ ಮತ್ತೆ ಆಗಲಿವೆಯಾ? ಅಂಥದ್ದೊಂದು ಮುನ್ಸೂಚನೆ ಇದೀಗ ಸಿಕ್ಕಿದೆ. ಇತಿಹಾಸದಲ್ಲಿಯೇ ಮೊದಲ ಬಾರಿ ಕಲಬುರಗಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಮುಂದಾಗಿತ್ತು. ಅದಕ್ಕೆ ತಕ್ಕಂತೆ ಅಲ್ಲಿನ ಮತದಾರರು ಕೂಡ ಬಿಜೆಪಿ 'ಕೈ' ಹಿಡಿದಿದ್ದರು. ಆದರೆ ಇಂದು ನಡೆದಿರುವ ದಿಢೀರ್ ಬೆಳವಣಿಗೆಗಳು ಬಿಜೆಪಿ ನಾಯಕರ ಲೆಕ್ಕಾಚಾರವನ್ನು ತಿರುವು ಮುರುವು ಮಾಡಿವೆ ಎಂಬ ಮಾಹಿತಿ ಬಂದಿದೆ.

ಕಳೆದ 2015ರಲ್ಲಿ ನಡೆದಿದ್ದ ಬಿಬಿಎಂಪಿ ಚುನಾವಣೆಯಲ್ಲಿಯೂ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅತಿಹೆಚ್ಚು ವಾರ್ಡ್‌ಗಳಲ್ಲಿ ಜಯ ಸಿಕ್ಕಿತ್ತು. ಬಿಬಿಎಂಪಿಯ ಒಟ್ಟು 198 ವಾರ್ಡ್‌ಗಳಲ್ಲಿ 100 ವಾರ್ಡ್‌ಗಳಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿತ್ತು. ಆದರೂ ಮಾಜಿ ಪ್ರಧಾನಿ ದೇವೇಗೌಡರ ರಾಜಕೀಯ ತಂತ್ರಗಾರಿಕೆಯಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೆ ಏರಿತ್ತು. ಇದೀಗ ಕಲಬುರಗಿ ಮಹಾನಗರ ಪಾಲಿಕೆಯಲ್ಲಿಯೂ ಇದೇ ರೀತಿ ಆಗುವ ಸಾಧ್ಯತೆಗಳು ಕಂಡು ಬಂದಿದೆ. ಅದನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿವರಿಸಿದ್ದಾರೆ.

ಮೈತ್ರಿ ಕುರಿತು ಎಚ್‌ಡಿಡಿ-ಖರ್ಗೆ ಮಾತುಕತೆ!

ಮೈತ್ರಿ ಕುರಿತು ಎಚ್‌ಡಿಡಿ-ಖರ್ಗೆ ಮಾತುಕತೆ!

ಇತಿಹಾಸದಲ್ಲಿ ಮೊದಲ ಬಾರಿ ಕಲಬುರಗಿಯ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ಭರವಸೆಯನ್ನು ಬಿಜೆಪಿ ನಾಯಕರು ವ್ಯಕ್ತಪಡಿಸಿದ್ದರು. ಆದರೆ ಅದಕ್ಕೆ ತಡೆಹಾಕಲು ಕಾಂಗ್ರೆಸ್ ಪಕ್ಷ ರಾಜಕೀಯ ತಂತ್ರಗಾರಿಕೆ ಮಾಡಿದೆ. ಇದೇ ವಿಚಾರವಾಗಿ ಡಿಕೆ ಶಿವಕುಮಾರ್ ಬೆಂಗಳೂರಿನಲ್ಲಿ ಮಾಹಿತಿ ನೀಡಿದ್ದಾರೆ.

"ಕಲ್ಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ವಿಚಾರವಾಗಿ ನಮ್ಮ ಪಕ್ಷದ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರ ಜತೆ ಮಾತುಕತೆ ನಡೆಸಿದ್ದಾರೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬಿಜೆಪಿಯ ಇಡೀ ಸರ್ಕಾರವೇ ಅಲ್ಲಿದೆ!

ಬಿಜೆಪಿಯ ಇಡೀ ಸರ್ಕಾರವೇ ಅಲ್ಲಿದೆ!

"ಕಲಬುರಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಗೆದ್ದಿದ್ದು, ಉತ್ತಮ ಫಲಿತಾಂಶ ಸಿಕ್ಕಿದೆ. ಜೆಡಿಎಸ್ ಕೂಡ ಗೆದ್ದಿದೆ. ಬಿಜೆಪಿಯ ಇಡೀ ಸರ್ಕಾರವೇ ಅಲ್ಲಿ ನಿಂತಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರುಗಳು ಇದ್ದರೂ ಕೂಡ ಬಿಜೆಪಿ 39, ಕಾಂಗ್ರೆಸ್ 33 ಸ್ಥಾನಗಳನ್ನು ಗೆದ್ದಿದ್ದೇವೆ. ಜತೆಗೆ ನಮ್ಮ ಬಂಡಾಯ ಸದಸ್ಯರೂ ಗೆದ್ದಿದ್ದಾರೆ" ಎಂದು ಡಿಕೆ ಶಿವಕುಮಾರ್ ಬಲಾಬಲವನ್ನು ವಿವರಿಸಿದ್ದಾರೆ.

ನಾನು ನಾಳೆ ಹುಬ್ಬಳ್ಳಿ ಹಾಗೂ ಬೆಳಗಾವಿಗೆ ಹೋಗುತ್ತಿದ್ದೇನೆ. ಅಲ್ಲಿ ನಮ್ಮ ಗೆದ್ದ ಹಾಗೂ ಸೋತ ಅಭ್ಯರ್ಥಿಗಳನ್ನು ಮಾತನಾಡಿಸಿಕೊಂಡು ಬರುತ್ತೇನೆ. ಕಲ್ಬುರ್ಗಿಗೆ ಸಂಬಂಧಿಸಿದಂತೆ ನಮ್ಮ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ದೇವೇಗೌಡರ ಜತೆ ಅಂತಿಮ ಮಾತುಕತೆ ನಡೆಸಿದ್ದಾರೆ ಎಂಬ ಸ್ಫೋಟಕ ಹೇಳಿಕೆಯನ್ನು ಡಿಕೆ ಶಿವಕುಮಾರ್ ನೀಡಿದ್ದಾರೆ.

ಕುಮಾರಸ್ವಾಮಿ ಜೊತೆಗೆ ಡಿಕೆಶಿ ಮಾತುಕತೆ?

ಕುಮಾರಸ್ವಾಮಿ ಜೊತೆಗೆ ಡಿಕೆಶಿ ಮಾತುಕತೆ?

ಕಲಬುರಗಿಯಲ್ಲಿ ಮತದಾರರು ತಮ್ಮ ತೀರ್ಪು ನೀಡಿದ್ದಾರೆ. ಆದರೆ ಬಿಜೆಪಿಯವರು ಬಳ್ಳಾರಿ, ರಾಮನಗರ, ಚನ್ನಪಟ್ಟಣದ ಚುನಾವಣೆ ದಿನಾಂಕ ಘೋಷಿಸಲು ಹಿಂದೆ-ಮುಂದೆ ನೋಡುತ್ತಿದ್ದಾರೆ. ಬಿಜೆಪಿ ತನ್ನ ಅಧಿಕಾರವನ್ನು ಎಷ್ಟು ಸಾಧ್ಯವೋ ಅಷ್ಟು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇದೇ ವೇಳೆ ಆರೋಪಿಸಿದ್ದಾರೆ. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸುವ ಕುರಿತು ಹೀಗೆ ಹೇಳಿದ್ದಾರೆ.

ಜೆಡಿಎಸ್ ಬೆಂಬಲ ಸಿಕ್ಕವರಿಗೆ ಅಧಿಕಾರ ಖಚಿತ!

ಜೆಡಿಎಸ್ ಬೆಂಬಲ ಸಿಕ್ಕವರಿಗೆ ಅಧಿಕಾರ ಖಚಿತ!

ಕಲಬುರಗಿಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ವಿಚಾರವಾಗಿ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರೊಂದಿಗೆ ನೇರವಾಗಿ ಮಾತನಾಡುವ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಡಿಕೆಶಿ, "ಕಾಂಗ್ರೆಸ್ ಪಕ್ಷಕ್ಕೆ ಏನೆಲ್ಲಾ ಬೇಕೋ, ಎಲ್ಲರಿಗೂ ಒಳ್ಳೆಯದಾಗುವ ದೃಷ್ಟಿಯಿಂದ ಅವಶ್ಯಕತೆ ಇದ್ದಾಗ ಏನು ಮಾಡಬೇಕೋ, ಅದನ್ನೆಲ್ಲಾ ನಾನು ಮಾಡುತ್ತೇನೆ. ಮೇಯರ್ ಪಟ್ಟ ನಮಗೇ ಬೇಕು ಎಂದು ಯಾರೂ ನನ್ನ ಮುಂದೆ ಬೇಡಿಕೆ ಇಟ್ಟಿಲ್ಲ. ಎರಡೂ ಪಕ್ಷಗಳು ಒಟ್ಟಿಗೆ ಆಡಳಿತ ನಡೆಸಬೇಕು ಎಂಬ ಪ್ರಸ್ತಾವನೆಯಷ್ಟೇ ನನ್ನ ಮುಂದೆ ಇದೆ" ಎಂದು ಹೇಳಿದ್ದಾರೆ.

ಹೀಗಾಗಿ ಜೆಡಿಎಸ್ ಪಕ್ಷ ಯಾವ ಯಾರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತದೆಯೊ? ಅವರಿಗೆ ಅಧಿಕಾರ ಸಿಗುವುದು ಖಚಿತವಾಗಿದೆ.

English summary
Mallikarjun Kharge and Devegowda will Discuss on Kalburgi Corporation Coalition: KPCC President DK Shivakumar. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X