ರಾಮಲಿಂಗಾರೆಡ್ಡಿಗೆ ಸಚಿವ ಸ್ಥಾನ: ಮಲ್ಲಿಕಾರ್ಜುನ ಖರ್ಗೆ ಬ್ಯಾಟಿಂಗ್

Recommended Video

      ರಾಮಲಿಂಗ ರೆಡ್ಡಿ ಪರ ಬ್ಯಾಟಿಂಗ್ ಮಾಡಿದ ಸಂಸದ ಮಲ್ಲಿಕಾರ್ಜುನ ಖರ್ಗೆ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 14: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ವೇಳೆ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಅವರನ್ನು ಪರಿಗಣಿಸುವಂತೆ ಲೋಕಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ.

      ಹಿಂದಿನ ಸರ್ಕಾರದ ಅವಧಿಯಲ್ಲಿ ಗೃಹಸಚಿವರಾಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಯಾವುದೇ ಸ್ಥಾನ ನೀಡಿಲ್ಲ. ಅವರ ಬಗ್ಗೆ ಮೃದು ಧೋರಣೆ ಹೊಂದಿರುವ ಮಲ್ಲಿಕಾರ್ಜುನ ಖರ್ಗೆ, ರಾಮಲಿಂಗಾರೆಡ್ಡಿ ಪರ ಬ್ಯಾಟಿಂಗ್ ನಡೆಸಿದ್ದಾರೆ ಎನ್ನಲಾಗಿದೆ.

      ಮುಂದಿನ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಮಲಿಂಗಾರೆಡ್ಡಿ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡುವುದು ಸೂಕ್ತ ಎಂದು ಖರ್ಗೆ ತಮ್ಮ ಆಪ್ತ ವಲಯದಲ್ಲಿ ಹೇಳಿಕೊಂಡಿದ್ದಾರೆ.

      mallikarjun kharge backs ramalingareddys inclusion to cabinet

      ರಾಮಲಿಂಗಾರೆಡ್ಡಿ ಉತ್ತಮ ನಾಯಕ ಮತ್ತು ಆಡಳಿತಗಾರ. ಬೆಂಗಳೂರಿನಲ್ಲಿ ಒಳ್ಳೆಯ ಹಿಡಿತ ಹೊಂದಿದ್ದಾರೆ. ನಾಲ್ಕೈದು ಕ್ಷೇತ್ರಗಳಲ್ಲಿ ಅವರಿಗೆ ಅಪಾರ ಬೆಂಬಲವಿದೆ. ಜತೆಗೆ ನಗರದ ಎಲ್ಲ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಒಡನಾಟವಿದೆ.

      ರಾಮಲಿಂಗಾರೆಡ್ಡಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದರಿಂದ ಮುಂಬರುವ ಲೋಕಸಭೆ ಚುನಾವಣೆಗೆ ಅನುಕೂಲವಾಗಲಿದೆ. ಅಲ್ಲದೆ, ಮೇಯರ್ ಚುನಾವಣೆಗೂ ನೆರವಾಗಲಿದೆ ಎಂದು ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+